Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
ತಾಯಿಯ ಮೊಬೈಲ್ ಬಳಸಿ ಚಾಟ್ ಮಾಡುತ್ತಿದ್ದ ಮಗಳು
Team Udayavani, Jan 5, 2025, 11:59 AM IST
ಸಾಂದರ್ಭಿಕ ಚಿತ್ರ
ಗುಜರಾತ್: ಸೋಶಿಯಲ್ ಮೀಡಿಯಾ ಬಳಕೆ ಅತಿಯಾದರೆ ಅದು ಅಡ್ಡ ಪರಿಣಾಮವಾಗಿ ಪರಿಣಮಿಸುತ್ತದೆ ಎನ್ನುವ ಮಾತಿಗೆ ತಕ್ಕ ಘಟನೆಯೊಂದು ಗುಜರಾತ್‌ನಲ್ಲಿ ನಡೆದಿದೆ.
ಗುಜರಾತ್‌ನ ಧನ್ಸೂರಾ ಗ್ರಾಮದ 5ನೇ ತರಗತಿ ವಿದ್ಯಾರ್ಥಿನಿ, 10 ವರ್ಷದ ಬಾಲಕಿಯೊಬ್ಬಳು ಅಪ್ರಾಪ್ತ ವಯಸ್ಸಿನ ಬಾಲಕನ ಜತೆ ಓಡಿ ಹೋಗಿರುವ ಘಟನೆ ನಡೆದಿರುವುದು ವರದಿಯಾಗಿದೆ.
ಏನಿದು ಘಟನೆ?: 10ರ ಬಾಲಕಿ ಕಳೆದ ಕೆಲ ಸಮಯದಿಂದ ತನ್ನ ತಾಯಿಯ ಮೊಬೈಲ್‌ನಲ್ಲಿ ಇನ್ಸ್ಟಾಗ್ರಾಮ್ ಖಾತೆಯನ್ನು ಬಳಸಿ 16ರ ವರ್ಷದ ಬಾಲಕನ ಜತೆ ಚಾಟಿಂಗ್ ಮಾಡಲು ಶುರು ಮಾಡಿದ್ದಾಳೆ. ಇಬ್ಬರ ನಡುವಿನ ಮೆಸೇಜ್ ಅತ್ಮೀಯತೆಗೆ ತಿರುಗಿದೆ.
ಇದನ್ನೂ ಓದಿ: Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದ್ದು, ಅದರಂತೆ ಡಿಸೆಂಬರ್ 31ರಂದು ಬಾಲಕಿ ಮನೆಯಿಂದ ಹೊರಗೆ ಹೋಗಿದ್ದಾಳೆ. ಇತ್ತ ಬಾಲಕಿಯ ಮನೆಯವರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದಾರೆ. ತಮ್ಮ ಮಗಳನ್ನು ಕಿಡ್ನ್ಯಾಪ್ ಮಾಡಿರಬಹುದೆನ್ನುವ ಸಂಶಯದ ಮೇರೆಗೆ ದೂರು ದಾಖಲಿಸಿದ್ದಾರೆ.
ದೂರು ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಇಬ್ಬರು ಅಪ್ರಾಪ್ತರನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಆ ಬಳಿಕ ಇಬ್ಬರನ್ನು ವಿಚಾರಣೆ ನಡೆಸಿದ್ದಾರೆ.
ತಾವಿಬ್ಬರು ಇನ್ಸ್ಟಾಗ್ರಾಮ್ ಮೂಲಕ ಪರಿಚಿತರು. ಇಬ್ಬರು ಪ್ರೀತಿಸುತ್ತಿದ್ದೇವೆ. ತಮ್ಮ ಮೂವರು ಸ್ನೇಹಿತರ ಸಹಾಯ ಪಡೆದು ಓಡಿ ಹೋಗಲು ನಿರ್ಧಾರ ಮಾಡಿದ್ದು, ಅದಕ್ಕಾಗಿ ಮನೆ ಬಿಟ್ಟು ಬಂದಿರುವುದಾಗಿ ಪೊಲೀಸರ ಮುಂದೆ ಇಬ್ಬರು ಅಪ್ರಾಪ್ತರು ಹೇಳಿದ್ದಾರೆ.
ಸದ್ಯ ಇಬ್ಬರನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ಮಧ್ಯಪ್ರದೇಶದಲ್ಲಿ 15 ವರ್ಷದ ಬಾಲಕಿ 27 ವರ್ಷದ ಯುವಕನ ಜತೆ ಸೋಶಿಯಲ್ ಮೀಡಿಯಾದ ಮೂಲಕ ಪರಿಚಯವಾಗಿ ಓಡಿ ಹೋಗಿದ್ದ ಘಟನೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.