Chhattisgarh: ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಆಯ್ಕೆ ಮಾಡಿದ ಬಿಜೆಪಿ
Team Udayavani, Dec 10, 2023, 3:46 PM IST
ರಾಯ್ ಪುರ್: ಛತ್ತೀಸ್‌ಗಢದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ಭಾನುವಾರ ತೆರೆ ಬಿದ್ದಿದ್ದು, ಪ್ರಬಲ ಬುಡಕಟ್ಟು ನಾಯಕ ವಿಷ್ಣು ದೇವ್ ಸಾಯಿ ಅವರನ್ನು ಬಿಜೆಪಿ ಕೇಂದ್ರ ನಾಯಕತ್ವವು ಭಾನುವಾರ ಆಯ್ಕೆ ಮಾಡಿದೆ.
ರಾಯ್‌ಪುರದಲ್ಲಿ ಬಿಜೆಪಿಯ ಹೊಸದಾಗಿ ಚುನಾಯಿತರಾದ 54 ಶಾಸಕರ ಮಹತ್ವದ ಸಭೆಯ ನಂತರ ಛತ್ತೀಸ್‌ಗಢ ಮುಖ್ಯಮಂತ್ರಿಯಾಗಿ ವಿಷ್ಣು ದೇವ ಸಾಯಿ ಅವರ ಹೆಸರನ್ನು ಘೋಷಿಸಲಾಯಿತು.
59 ರ ಹರೆಯದ ಸಾಯಿ ಅವರು ಈ ವಿಧಾನಸಭಾ ಚುನಾವಣೆಯಲ್ಲಿ ಕುನ್‌ಕುರಿ ಕ್ಷೇತ್ರದಿಂದ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ಮೂರು ಬಾರಿ ಛತ್ತೀಸ್‌ಗಢ ಬಿಜೆಪಿ ಅಧ್ಯಕ್ಷರಾಗಿದ್ದರು. (2006ರಿಂದ 2010, 2014ರಲ್ಲಿ ಕೆಲವುತಿಂಗಳು, 2020ರಿಂದ 2022). 2014ರಿಂದ 2019ರವರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರದಲ್ಲಿ ಕೇಂದ್ರದ ಉಕ್ಕು ಸಚಿವರಾಗಿದ್ದರು.
ಛತ್ತೀಸ್‌ಗಢ ಇನ್ನೂ ಮಧ್ಯಪ್ರದೇಶದ ಭಾಗವಾಗಿದ್ದಾಗ ಜನಿಸಿದ್ದರು. ಮಧ್ಯಪ್ರದೇಶದ ತಪ್ಕಾರ ಕ್ಷೇತ್ರದ ಶಾಸಕರಾಗಿ ರಾಜಕೀಯ ಜೀವನ ಆರಂಭಿಸಿದರು. ಪ್ರಸ್ತುತ ಛತ್ತೀಸ್‌ಗಢದ ಬುಡಕಟ್ಟು ಸಮುದಾಯದ ಪ್ರಬಲ ನಾಯಕರಲ್ಲೊಬ್ಬರು. ಬಿಜೆಪಿ ನಾಯಕತ್ವ ಬುಡಕಟ್ಟು ಸಮುದಾಯವನ್ನು ಆದ್ಯತೆಯಾಗಿಸಿಕೊಂಡಿದ್ದು, ವಿಷ್ಣು ದೇವ್ ಅವರಿಗೆ ಪಟ್ಟ ಒಲಿದಿದೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸದೆ ಸ್ಪರ್ಧಿಸಿತ್ತು. ಒಟ್ಟು 90 ಸ್ಥಾನಗಳ ಪೈಕಿ 54 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರ ಹಿಡಿದಿತ್ತು.
ಬುಡಕಟ್ಟು ಸಮುದಾಯದ ಮತಗಳೇ ನಿರ್ಣಾಯಕವಾಗಿದ್ದು, ಮತಗಳು ಪೂರ್ಣ ಪ್ರಮಾಣದಲ್ಲಿ ಬಿಜೆಪಿಯತ್ತ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಲೋಕಸಭಾ ಚುನಾವಣೆಯಲ್ಲೂ ರಾಷ್ಟ್ರ ಮಟ್ಟದಲ್ಲಿ ಬುಡಕಟ್ಟು ಸಮುದಾಯದ ಮತಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಹುದ್ದೆ ನೀಡಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.