ಉತ್ತರ ಪ್ರದೇಶದಲ್ಲಿ ಬರಲಿದೆ ದೂರದೃಷ್ಟಿಯ ಸಂಪುಟ?
Team Udayavani, Mar 15, 2022, 7:20 AM IST
ಲಕ್ನೋ: ಸದ್ಯದಲ್ಲೇ ಹೊಸದಾಗಿ ರಚನೆಯಾಗಲಿರುವ ಉತ್ತರ ಪ್ರದೇಶ ಸಂಪುಟವನ್ನು 2024ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ದೃಷ್ಟಿಯಲ್ಲೇ ರಚಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಹೊಸ ಸಂಪುಟದಲ್ಲಿ ಸಂಪುಟ ದರ್ಜೆ ಸಚಿವರು, ಸಹಾಯಕ ಸಚಿವರು ಸೇರಿ ಒಟ್ಟು 60 ಸದಸ್ಯರಿರಲಿದ್ದಾರೆ ಎಂದು ಹೇಳಲಾಗಿದೆ.
ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದಿಲ್ಲಿಗೆ ಭೇಟಿ ನೀಡಿ ಅಲ್ಲಿನ ಬಿಜೆಪಿ ಹಿರಿಯ ನಾಯಕರನ್ನು ಭೇಟಿ ಮಾಡಿ, ಸಂಭಾವ್ಯ ಸಚಿವರ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆಂದು ಬಿಜೆಪಿ ಆಂತರಿಕ ಮೂಲಗಳು ತಿಳಿಸಿವೆ.
ಈ ಪಟ್ಟಿಯನ್ನು ಕೂಲಂಕಷ ಚರ್ಚೆಗಳು, ಅಧ್ಯಯನದ ಆಧಾರದಲ್ಲಿ ಸಿದ್ಧಪಡಿಸಲಾಗಿದೆ. ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಟ್ಟುಕೊಂಡು ರಾಜ್ಯದ ಎಲ್ಲ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಕಾಂಗ್ರೆಸ್ ನಲ್ಲಿ ಪದಾಧಿಕಾರಿ ಬೆಂಕಿ;ಪ್ರಮುಖ ನಾಯಕರ ಜತೆ ಚರ್ಚಿಸದೇ ಪಟ್ಟಿ ಒಯ್ದರೇ ಡಿಕೆಶಿ ?
ಮೂರು ಡಿಸಿಎಂ?: ಕಳೆದ ಬಾರಿಯ ಯೋಗಿ ಸಂಪುಟದಲ್ಲಿ ಇಬ್ಬರು ಉಪ ಮುಖ್ಯ ಮಂತ್ರಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಈ ಬಾರಿ ಮೂರು ಉಪ ಮುಖ್ಯಮಂತ್ರಿ ಸ್ಥಾನ ಕಲ್ಪಿಸಲು ನಿರ್ಧರಿಸಲಾಗಿದೆ. ಆದರೆ ಕಳೆದ ಬಾರಿ ಉಪ ಮುಖ್ಯಮಂತ್ರಿಯಾಗಿದ್ದ ಕೇಶವ್ ಪ್ರಸಾದ್ ಮೌರ್ಯ, ದಿನೇಶ್ ಸೀತಾರಾಂ ಅವರನ್ನು ಮಂತ್ರಿಮಂಡಲದಲ್ಲಿ ಮುಂದುವರಿಸಲಾಗುತ್ತದೆಯೇ ಇಲ್ಲವೇ ಎಂಬುದರ ಬಗ್ಗೆ ಸ್ಪಷ್ಟತೆ ಯಿಲ್ಲ. ಇವರಲ್ಲಿ ಕೇಶವ್ ಪ್ರಸಾದ್ ಮೌರ್ಯ ಈ ಬಾರಿಯ ಚುನಾವಣೆಯಲ್ಲಿ ಸಿರಾತು ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ.
ಡಿಸಿಎಂ ಸ್ಥಾನಗಳಿಗೆ ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್, ಉತ್ತರಾಖಾಂಡದ ಮಾಜಿ ರಾಜ್ಯಪಾಲ ಬೇಬಿ ರಾಣಿ ಮೌರ್ಯ, ಗುಜರಾತ್ ಕೇಡರ್‌ನ ಮಾಜಿ ಅಧಿಕಾರಿ ಎ.ಕೆ. ಮಿಶ್ರಾ ಹೆಸರು ಮಂಚೂಣಿಯಲ್ಲಿವೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.