ರೆಸಾರ್ಟ್ ನಿಂದ ಜಾಗ ಖಾಲಿ ಮಾಡಿದ ಶಶಿಕಲಾ; ನಾಳೆ ಕೋರ್ಟ್ ಗೆ ಶರಣಾಗತಿ?
Team Udayavani, Feb 14, 2017, 11:07 PM IST
ಚೆನ್ನೈ:ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಕೋವತ್ತೂರಿನ ಗೋಲ್ಡನ್ ಬೇ ರೆಸಾರ್ಟ್ ನಲ್ಲಿ ಠಿಕಾಣಿ ಹೂಡಿದ್ದು, ಮಂಗಳವಾರ ರಾತ್ರಿ 9.40ರ ಸುಮಾರಿಗೆ ರೆಸಾರ್ಟ್ ನಿಂದ ಹೊರಬಂದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಬಹುತೇಕ ಬುಧವಾರ ಬೆಂಗಳೂರು ವಿಶೇಷ ಕೋರ್ಟ್ ನ್ಯಾಯಾಧೀಶರ ಮುಂದೆ ಶರಣಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಹಾಗೂ ಸುಧಾಕರನ್, ಇಳವರಸಿ ದೋಷಿ ಎಂದು ಇಂದು ಬೆಳಗ್ಗೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ತೀರ್ಪು ಪ್ರಕಟಿಸಿತ್ತು. ಊಹಾಪೋಹಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಹಾಗೂ ಶಾಸಕರುಗಳನ್ನು ರೆಸಾರ್ಟ್ ನಿಂದ ಹೊರಕಳುಹಿಸುವ ನಿಟ್ಟಿನಲ್ಲಿ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಆದರೆ ಕೆಲವೇ ಹೊತ್ತಿನಲ್ಲಿ ವಿದ್ಯುತ್ ಸಂಪರ್ಕ ನೀಡಲಾಯಿತು. ಈ ಸಂದರ್ಭದಲ್ಲಿ ಎಐಎಡಿಎಂಕೆ ಪಕ್ಷದ ಕಾರ್ಯಕರ್ತನೊಬ್ಬ ವಿದ್ಯುನ್ಮಾನ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆಯಿತು. ಪತ್ರಕರ್ತರು ಇದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.