Parag Desai: ಕೋಟ್ಯಂತರ ವ್ಯವಹಾರದ ಚಹಾ ಕಂಪೆನಿಯ ಮಾಲೀಕ ಬೀದಿ ನಾಯಿ ದಾಳಿಗೆ ಮೃತ್ಯು
Team Udayavani, Oct 23, 2023, 12:46 PM IST
ನವದೆಹಲಿ: ಬೀದಿನಾಯಿಗಳ ದಾಳಿಗೆ ಒಳಗಾಗಿ ಮೆದುಳಿನಲ್ಲಿ ರಕ್ತಸ್ರಾವಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಾಘ್ ಬಕ್ರಿ ಚಹಾ ಗ್ರೂಪ್ ನ ಕಾರ್ಯನಿರ್ವಾಹಕ ನಿರ್ದೇಶಕ ಪರಾಗ್ ದೇಸಾಯಿ(49) ಭಾನುವಾರ ಸಂಜೆ(ಅ.22 ರಂದು) ನಿಧನರಾಗಿದ್ದಾರೆ.
ಅವರ ನಿಧನದ ಸುದ್ದಿಯನ್ನು ಕಂಪೆನಿ ಸೋಶಿಯಲ್ ಮೀಡಿಯಾ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದು, ಸಂತಾಪ ಸೂಚಿಸಿ, ದುಃಖ ವ್ಯಕ್ತಪಡಿಸಿದೆ.
ವಾಘ್ ಬಕ್ರಿ ಚಹಾ ಕಂಪೆನಿಯ ಮಾಲೀಕ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕರ್ತವ್ಯ ನಿಭಾಯಿಸುತ್ತಿದ್ದ ಪರಾಗ್ ದೇಸಾಯಿ ಕಳೆದ ವಾರ ಮುಂಜಾನೆ ವಾಕಿಂಗ್ ಗೆ ಹೋಗುವ ವೇಳೆ ಅವರ ನಿವಾಸದ ಪಕ್ಕದಲ್ಲಿ ಬೀದಿನಾಯಿಗಳು ದಾಳಿ ಮಾಡಿದ್ದವು. ಅದರಿಂದ ತಪ್ಪಿಸಿಕೊಂಡು ಹೋಗುವ ಭರದಲ್ಲಿ ಅವರು ಜಾರಿ ಬಿದ್ದಿದ್ದಾರೆ. ಪರಿಣಾಮ ಅವರ ತಲೆಗೆ ಗಂಭೀರ ಸ್ವರೂಪದ ಏಟಾಗಿತ್ತು.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ಸಂಜೆ ಮೆದುಳಿನಲ್ಲಿ ರಕ್ತಸ್ರಾವವಾಗಿ ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.
ವಾಘ್ ಬಕ್ರಿ ಟೀ ಗ್ರೂಪ್‌ನ ಬೋರ್ಡ್‌ನಲ್ಲಿರುವ ಇಬ್ಬರು ಕಾರ್ಯನಿರ್ವಾಹಕ ನಿರ್ದೇಶಕರಲ್ಲಿ ಪರಾಗ್ ಒಬ್ಬರಾಗಿದ್ದರು. ವಾಘ್ ಬಕ್ರಿ ಟೀ ಗ್ರೂಪ್ ನ್ನು 1892 ರಲ್ಲಿ ನಾರಂದಾಸ್ ದೇಸಾಯಿ ಸ್ಥಾಪಿಸಿದರು. ಇಂದು ₹ 2,000 ಕೋಟಿ ವಹಿವಾಟನ್ನು ಈ ಕಂಪೆನಿ ನಡೆಸುತ್ತಿದೆ.
ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಛತ್ತೀಸ್‌ಗಢ, ಪಶ್ಚಿಮ ಉತ್ತರ ಪ್ರದೇಶ, ಗೋವಾ, ಪಂಜಾಬ್, ಚಂಡೀಗಢ, ಹಿಮಾಚಲ, ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ಕಂಪೆನಿಯ ಶಾಖೆಗಳಿವೆ.
ರಾಜ್ಯಸಭಾ ಸಂಸದ ಹಾಗೂ ಗುಜರಾತ್ ಕಾಂಗ್ರೆಸ್ ಮುಖ್ಯಸ್ಥ ಶಕ್ತಿಸಿಂಗ್ ಗೋಹಿಲ್ ಸೇರಿದಂತೆ ಅನೇಕ ಗಣ್ಯರು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.