ಗೋಡೆ ಕುಸಿತ:15 ಬಲಿ
4 ಮಕ್ಕಳೂ ಸಾವು ; ಪುಣೆಯಲ್ಲಿ ಭಾರೀ ಮಳೆಯಿಂದ ದುರಂತ
Team Udayavani, Jun 30, 2019, 6:00 AM IST
ಪುಣೆಯಲ್ಲಿ ಗೋಡೆ ಕುಸಿತದಿಂದಾಗಿ ಉಂಟಾಗಿರುವ ಅವಶೇಷಗಳ ಮೇಲೆ ಕಾರುಗಳೂ ಬಿದ್ದಿರುವುದು.
ಪುಣೆ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ 22 ಅಡಿ ಎತ್ತರದ ಕಾಂಪೌಂಡ್ ಗೋಡೆಯೊಂದು ಕುಸಿದುಬಿದ್ದ ಪರಿಣಾಮ, ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 15 ಮಂದಿ ಮೃತಪಟ್ಟ ಘಟನೆ ಪುಣೆಯಲ್ಲಿ ನಡೆದಿದೆ.
ಇಲ್ಲಿನ ಕೊಂಧ್ವಾ ಎಂಬ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ 1.45ರ ವೇಳೆಗೆ ಹೌಸಿಂಗ್ ಸೊಸೈಟಿಯೊಂದರ ಕಾಂಪೌಂಡ್ ಗೋಡೆಯು ಕುಸಿದು ಬಿದ್ದು ಈ ದುರಂತ ಸಂಭವಿಸಿದೆ. ಗೋಡೆಯ ಪಕ್ಕದಲ್ಲೇ ಕಾರ್ಮಿಕರಿಗೆಂದು ನಿರ್ಮಿಸಲಾಗಿದ್ದ ತಾತ್ಕಾಲಿಕ ಗುಡಿಸಲುಗಳ ಮೇಲೆಯೇ ಗೋಡೆ ಕುಸಿದುಬಿದ್ದಿದೆ.
ಮಧ್ಯರಾತ್ರಿಯಾದ ಕಾರಣ, ಎಲ್ಲ ಕುಟುಂಬಗಳೂ ನಿದ್ದೆಗೆ ಜಾರಿದ್ದವು. ಈ ಸಮಯದಲ್ಲೇ ದುರಂತ ಸಂಭವಿಸಿದ ಕಾರಣ, ಬಹುತೇಕ ಮಂದಿ ಅವಶೇಷಗಳಡಿ ಸಿಲುಕಿ ಸಾವು-ನೋವು ಹೆಚ್ಚಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತರಲ್ಲಿ ಹೆಚ್ಚಿನವರು ಬಿಹಾರ ಮೂಲದ ಕಾರ್ಮಿಕರಾಗಿದ್ದು, ನಿರ್ಮಾಣಹಂತದಲ್ಲಿದ್ದ ವಸತಿ ಸಮುಚ್ಚಯದಲ್ಲಿ ಕೆಲಸಕ್ಕೆಂದು ಬಂದಿದ್ದರು.
ಕಾರುಗಳೂ ಬಿದ್ದವು: ಹೌಸಿಂಗ್ ಸೊಸೈಟಿಯ ಒಳಭಾಗದಲ್ಲಿ ಗೋಡೆಯ ಪಕ್ಕದಲ್ಲೇ ಕಾರುಗಳನ್ನು ನಿಲ್ಲಿಸಲಾಗಿತ್ತು. ಗೋಡೆ ಕುಸಿತದ ತೀವ್ರತೆಗೆ ಈ ಕಾರುಗಳೂ ಕುಸಿದು, ಗುಡಿಸಲುಗಳ ಮೇಲೆ ಬಿದ್ದಿರುವ ಕಾರಣ ಹೆಚ್ಚಿನ ಪ್ರಾಣಹಾನಿ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳದಿಂದ ಮೂವರನ್ನು ರಕ್ಷಿಸಲಾಗಿದ್ದು, ಈ ಪೈಕಿ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ನೊಂದವರಿಗೆ ಸಾಂತ್ವನ ಹೇಳಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಜತೆಗೆ, ಘಟನೆ ಕುರಿತು ತನಿಖೆಗೆ ಐವರು ಸದಸ್ಯರ ಸಮಿತಿಯನ್ನೂ ರಚಿಸಿದ್ದಾರೆ.
ಘಟನೆಗೆ ಕಾರಣವೇನು?
ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಕಾರಣ, ಗೋಡೆಯಡಿಯ ಮಣ್ಣು ಸಡಿಲಗೊಂಡಿತ್ತು. ಜತೆಗೆ ಪಕ್ಕದಲ್ಲೇ ನಿರ್ಮಾಣ ಕಾಮಗಾರಿಗಾಗಿ ಭೂಮಿಯನ್ನು ಅಗೆಯಲಾಗಿತ್ತು. ಹೀಗಾಗಿ, ಗೋಡೆ ದುರ್ಬಲಗೊಂಡು ಬಿದ್ದಿರಬಹುದು ಎಂದು ಪುಣೆ ಮಹಾನಗರಪಾಲಿಕೆ ಆಯುಕ್ತ ಸೌರಭ್ ರಾವ್ ಅಂದಾಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.