ಸರ್ಕಾರಿ ಕೆಲ್ಸ ಬೇಕಂದ್ರೆ ಸೇನೆ ಸೇರಿ
Team Udayavani, Mar 16, 2018, 7:30 AM IST
ನವದೆಹಲಿ: ರಾಜ್ಯ ಅಥವಾ ಕೇಂದ್ರ ಸರ್ಕಾರಿ ಉದ್ಯೋಗ ಬೇಕಿದ್ದರೆ ನಿಗದಿತ ವಿಭಾಗದ ಪರೀಕ್ಷೆ, ಸಂದರ್ಶನ ಪಾಸಾದರೆ ಉದ್ಯೋಗ ಸಿಗುತ್ತದೆ. ಆದರೆ ಇನ್ನು ಈ ವ್ಯವಸ್ಥೆಯ ಬದಲಾಗಿ ಐದು ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದರೆ ಮಾತ್ರ ಸರ್ಕಾರಿ ಉದ್ಯೋಗ ಎಂದು ಸಂಸತ್‌ನ ಸ್ಥಾಯಿ ಸಮಿತಿ ಸಲಹೆ ಮಾಡಿದೆ. ಮೂಲಗಳ ಪ್ರಕಾರ, ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಿಂದ ಸಂಸತ್ ಸಮಿತಿ ಈ ಕುರಿತು ಮಾಹಿತಿ ಸಂಗ್ರಹಿಸಿ ಸಲಹೆ ಮಾಡಿದೆ. ಇದೀಗ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅದಕ್ಕೆ ಸಂಬಂಧಿಸಿದ ಶಿಫಾರಸನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸಲಹೆ ಮಾಡಿದೆ.
ಅದಕ್ಕೆ ಕಾರಣವೇನು?: ಭಾರತೀಯ ಸೇನೆಯಲ್ಲಿ ವಿವಿಧ ಹಂತಗಳ ಯೋಧರು, ಅಧಿಕಾರಿಗಳು ಸೇರಿದಂತೆ ಸಿಬ್ಬಂದಿ ಕೊರತೆ ಇದೆ. ಅದಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಹಿನ್ನೆಲೆಯಲ್ಲಿ ಸಂಸತ್ ಸಮಿತಿ ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರದ ಮುಂದಿಡುವ ಬಗ್ಗೆ ಚರ್ಚಿಸಿದೆ. ಐದು ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ, ಸರ್ಕಾರಿ ಉದ್ಯೋಗಕ್ಕೆ ಸೇರಿದರೆ ಅಂಥವರಲ್ಲಿ ಶಿಸ್ತು ಬರುತ್ತದೆ. ವಿವಿಧ ಇಲಾಖೆಗೆ ವರ್ಗಾವಣೆಯಾದರೂ ಅವರು ಅದನ್ನು ನಿಭಾಯಿಸಬಲ್ಲರು ಎನ್ನುವುದು ಸಮಿತಿ ಲೆಕ್ಕಾಚಾರ.
ರಕ್ಷಣಾ ಸಚಿವಾಲಯಕ್ಕೆ ಕೂಡ ಈ ಪ್ರಸ್ತಾಪ ರವಾನೆಯಾಗಿದೆ. ಸದ್ಯ ಐಎಎಫ್, ನೌಕಾ ಪಡೆಯಲ್ಲಿ ತಲಾ 150 ಅಧಿಕಾರಿಗಳು ಹಾಗೂ 15,000 ಯೋಧರ ಕೊರತೆ ಎದುರಿಸುತ್ತಿವೆ. ಪ್ರಸ್ತಾವನೆಗೆ ಸಮ್ಮತಿ ಸಿಕ್ಕಲ್ಲಿ ಕೊರತೆ ನೀಗುವುದರಲ್ಲಿ ಅನುಮಾನ ಇಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.