Waqf board ರಿಯಲ್ ಎಸ್ಟೇಟ್ ಸಂಸ್ಥೆ ಇದ್ದಂತೆ: ಒವೈಸಿಗೆ ಟಿಟಿಡಿ ಟಾಂಗ್
Team Udayavani, Nov 5, 2024, 1:13 AM IST
ಹೊಸದಿಲ್ಲಿ: ವಕ್ಫ್ ಬೋರ್ಡ್ ರಿಯಲ್ ಎಸ್ಟೇಟ್ ಕಂಪನಿಯಾಗಿದ್ದರೆ, ತಿರುಮಲವು ದೇವಸ್ಥಾನವಾಗಿದೆ. ಈ 2 ಆಡಳಿತ ಮಂಡಳಿ ಬಗ್ಗೆ ಹೋಲಿಸುವುದೇ ಆಧಾರರಹಿತ. ಹಿಂದೂಯೇತರರು ತಿರುಮಲದಲ್ಲಿ ಇರಬಾರದೆಂಬ ಬೇಡಿಕೆ ಹಲವು ವರ್ಷಗಳಿಂದ ಇದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯವಲ್ಲ ಎಂದು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಅಧ್ಯಕ್ಷ ಬಿ.ಆರ್.ನಾಯ್ಡು ಕಟುವಾಗಿ ಹೇಳಿದ್ದಾರೆ. ಈ ಮೂಲಕ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿಗೆ ತಿರುಗೇಟು ನೀಡಿದ್ದಾರೆ. ಮುಸ್ಲಿಮರು ಟಿಟಿಡಿ ಟ್ರಸ್ಟಿಗಳಾಗಲು ಆಗದಿದ್ದರೆ, ಮುಸ್ಲಿಮೇತರರು ವಕ್ಫ್ ಮಂಡಳಿಯಲ್ಲಿ ಇರಲು ಹೇಗೆ ಸಾಧ್ಯ ಎಂದು ಒವೈಸಿ ಕಳೆದ ವಾರ ಪ್ರಶ್ನಿಸಿದ್ದರು. ಇದಕ್ಕೆ ಈಗ ನಾಯ್ಡು ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.