ಚೀನ ಏಕಪಕ್ಷೀಯವಾಗಿ ಎಲ್‌ಎಸಿ ಬದಲಾಯಿಸಿದರೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಭಾರತ ಸ್ಪಷ್ಟನೆ
Team Udayavani, Sep 29, 2020, 8:21 PM IST
ಮಣಿಪಾಲ: 1959ರಲ್ಲಿ ಚೀನ ಏಕಪಕ್ಷೀಯವಾಗಿ ನಿರ್ಧರಿಸಿದ ಎಲ್‌ಎಸಿಯನ್ನು ಎಂದಿಗೂ ಒಪ್ಪಿಕೊಂಡಿಲ್ಲ ಎಂದು ಭಾರತ ಮಂಗಳವಾರ ಚೀನಕ್ಕೆ ಸ್ಪಷ್ಟ ಮಾತುಗಳಲ್ಲಿ ತಿಳಿಸಿದೆ. ಮಾಧ್ಯಮ ವರದಿಯೊಂದರಲ್ಲಿ ಕೇಳಿದ ಪ್ರಶ್ನೆಯೊಂದರಲ್ಲಿ ಭಾರತೀಯ ವಿದೇಶಾಂಗ ಸಚಿವಾಲಯ ಈ ವಿಷಯ ತಿಳಿಸಿದೆ.
ಎಲ್‌ಎಸಿ ಬಗ್ಗೆ ನಮ್ಮ ನಿಲುವು ಬಹಳ ಹಿಂದಿನಿಂದಲೂ ಒಂದೇ ಆಗಿದೆ. ಮಾತ್ರವಲ್ಲದೇ ಅದು ಅದು ಚೀನಕ್ಕೆ ತಿಳಿದಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ.
1993ರಲ್ಲಿ ಎಲ್‌ಎಸಿಯಲ್ಲಿ ಶಾಂತಿ ಕಾಪಾಡುವ ಒಪ್ಪಂದ ಮಾಡಿಕೊಂಡಿತ್ತು. 1996ರಲ್ಲಿ ಉಭಯ ದೇಶಗಳು ಯುದ್ಧ ವಲಯದಲ್ಲಿ ಶಾಂತಿ ಸ್ಥಾಪಿಸುವ ಒಪ್ಪಂದಕ್ಕೆ ಬಂದವು. 2005ರಲ್ಲಿ ಭಾರತ-ಚೀನ ನಡುವೆ ಗಡಿ ಸಮಸ್ಯೆಯನ್ನು ಪರಿಹರಿಸಲು ಮಾರ್ಗಸೂಚಿಗಳನ್ನು ರೂಪಿಸುವ ಒಪ್ಪಂದ ಏರ್ಪಟ್ಟಿತ್ತು. ಈ ಒಪ್ಪಂದಗಳಲ್ಲಿ ಉಭಯ ದೇಶಗಳು ಎಲ್‌ಎಸಿಯ ಸಾಮಾನ್ಯ ಸ್ವರೂಪವನ್ನು ಒಪ್ಪಿಕೊಂಡಿವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.
2003ರ ವರೆಗೆ ಎಲ್‌ಎಸಿಯನ್ನು ನಿರ್ಧರಿಸಲು ಉಭಯ ದೇಶಗಳು ಪ್ರಯತ್ನ ಪಟ್ಟಿದ್ದವು. ಆದರೆ ಅನಂತರ ಈ ಪ್ರಕ್ರಿಯೆಯು ಮುಂದುವರಿಯಲಿಲ್ಲ. ಏಕೆಂದರೆ ಚೀನ ಅದನ್ನು ಮುಂದೆ ತೆಗೆದುಕೊಳ್ಳಲು ಆಸಕ್ತಿ ತೋರಿಸಿಲ್ಲ. ಈಗ ಕೇವಲ ಒಂದು ಎಲ್‌ಎಸಿ ಇದೆ ಎಂದು ಚೀನ ಹೇಳುತ್ತಿದ್ದು, ಇದು ಮೊದಲು ಮಾಡಿದ ಒಪ್ಪಂದಗಳ ಉಲ್ಲಂಘನೆಯಾಗಿದೆ. ಮತ್ತೂಂದೆಡೆ ಭಾರತ ಯಾವಾಗಲೂ ಈ ಒಪ್ಪಂದಗಳನ್ನು ಗೌರವಿಸುತ್ತಾ ಬಂದಿದೆ ಮತ್ತು ಗಡಿಯಲ್ಲಿ ಶಾಂತಿಯನ್ನು ಕಾಪಾಡುತ್ತಾ ಬಂದಿದೆ ಎಂದು ಶ್ರೀವಾಸ್ತವ್ ಹೇಳಿದ್ದಾರೆ.
ಎಲ್‌ಎಸಿಯನ್ನು ಅನೇಕ ಸ್ಥಳಗಳಲ್ಲಿ ಬದಲಾಯಿಸಲು ಮತ್ತು ಏಕಪಕ್ಷೀಯವಾಗಿ ಯಥಾಸ್ಥಿತಿಯನ್ನು ಬದಲಾಯಿಸಲು ಚೀನ ಹಲವು ಯತ್ನಗಳನ್ನು ನಡೆಸಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂಸತ್ತಿನಲ್ಲಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.