“ಇನ್ನು ಮುಂದೆ ನಾವು ಪ್ರಧಾನಿಯನ್ನು 28 ಪೈಸೆ ಪಿಎಂ ಎಂದು ಕರೆಯಬೇಕು”: ಉದಯನಿಧಿ ಸ್ಟಾಲಿನ್
Team Udayavani, Mar 24, 2024, 8:13 AM IST
ಚೆನ್ನೈ: ಬಿಜೆಪಿ ನೇತೃತ್ವದ ಕೇಂದ್ರದ ನಿಧಿ ಹಂಚಿಕೆಯ ವಿರುದ್ಧ ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಶನಿವಾರ(ಮಾ.23 ರಂದು) ವಾಗ್ದಾಳಿ ನಡೆಸಿದ್ದಾರೆ.
ರಾಮನಾಥಪುರಂ ಮತ್ತು ಥೇಣಿಯಲ್ಲಿ ಪ್ರತ್ಯೇಕ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯವು ತೆರಿಗೆಯಾಗಿ ಪಾವತಿಸುವ ಪ್ರತಿ ರೂಪಾಯಿಗೆ ಕೇವಲ 28 ಪೈಸೆಗಳನ್ನು ಮಾತ್ರ ಕೇಂದ್ರ ರಾಜ್ಯಕ್ಕೆ ಪಾವತಿಸಿದೆ. ಬಿಜೆಪಿ ಆಡಳಿತದ ರಾಜ್ಯಗಳು ಇದಕ್ಕಿಂತ ಹೆಚ್ಚು ಹಣವನ್ನು ಪಡೆಯುತ್ತವೆ ಎಂದು ಆರೋಪಿಸಿದ್ದಾರೆ.
“ಇನ್ನು ಮುಂದೆ ನಾವು ಪ್ರಧಾನಿಯನ್ನು 28 ಪೈಸೆ ಪಿಎಂ ಎಂದು ಕರೆಯಬೇಕು” ಎಂದು ಸ್ಟಾಲಿನ್ ವ್ಯಂಗ್ಯವಾಡಿದರು.
ತಮಿಳುನಾಡಿನಲ್ಲಿ ಮಕ್ಕಳ ಭವಿಷ್ಯವನ್ನು ನಾಶಮಾಡಲು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ತಂದಿದ್ದಾರೆ. ಹಣ ಹಂಚಿಕೆ, ಅಭಿವೃದ್ಧಿ ಯೋಜನೆಗಳು ಮತ್ತು ರಾಜ್ಯದಲ್ಲಿ ನೀಟ್ ಅನ್ನು ನಿಷೇಧಿಸುವ ವಿಷಯದಲ್ಲಿ ತಮಿಳುನಾಡು ವಿರುದ್ಧ ತಾರತಮ್ಯ ಮಾಡಲಾಗಿದೆ ಎಂದರು.
ಚುನಾವಣೆ ಹತ್ತಿರವಿರುವಾಗ ಮಾತ್ರ ಪ್ರಧಾನಿ ತಮಿಳುನಾಡಿಗೆ ಭೇಟಿ ನೀಡುತ್ತಿದ್ದಾರೆ ಎಂದು ಅವರು ಹೇಳಿದರು.
39 ಲೋಕಸಭಾ ಸ್ಥಾನಗಳನ್ನು ಹೊಂದಿರುವ ತಮಿಳುನಾಡಿನಲ್ಲಿ ಏಪ್ರಿಲ್ 19 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮತಗಳ ಎಣಿಕೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.