ಕೇಂದ್ರದ ಮೂರು ಕೃಷಿ ಕಾಯ್ದೆಗೆ ತಾತ್ಕಾಲಿಕ ತಡೆ , ಸಮಿತಿ ರಚನೆ: ಸುಪ್ರೀಂ ತೀರ್ಪು
ಇದೊಂದು ಸಾವು-ಬದುಕಿನ ವಿಷಯವಾಗಿದೆ. ನಮಗೆ ಕಾಯ್ದೆ ಬಗ್ಗೆಯೂ ಕಾಳಜಿ ಇದೆ
Team Udayavani, Jan 12, 2021, 1:37 PM IST
ನವದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಬೃಹತ್ ಪ್ರತಿಭಟನೆಯನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಸಮಿತಿಯೊಂದನ್ನು ರಚಿಸುವುದಾಗಿ ಮಂಗಳವಾರ(ಜನವರಿ 12, 2021) ಸುಪ್ರೀಂಕೋರ್ಟ್ ತಿಳಿಸಿದ್ದು, ಅಲ್ಲದೇ ಮೂರು ವಿವಾದಿತ ಕೃಷಿ ಕಾಯ್ದೆ ಜಾರಿಗೆ ತಾತ್ಕಾಲಿಕವಾಗಿ ತಡೆ ನೀಡಿ ಮಹತ್ವದ ಆದೇಶ ನೀಡಿದೆ.
“ಇದೊಂದು ಸಾವು-ಬದುಕಿನ ವಿಷಯವಾಗಿದೆ. ನಮಗೆ ಕಾಯ್ದೆ ಬಗ್ಗೆಯೂ ಕಾಳಜಿ ಇದೆ, ಅದೇ ರೀತಿ ಪ್ರತಿಭಟನೆಯಿಂದಾಗುವ ಜೀವಹಾನಿ ಮತ್ತು ಆಸ್ತಿ ಹಾನಿ ಬಗ್ಗೆಯೂ ಕಳವಳ ಇದೆ. ಅದಕ್ಕಾಗಿ ಉತ್ತಮ ರೀತಿಯಲ್ಲಿ ಸಮಸ್ಯೆಯನ್ನು ಬಗೆಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಈ ಕಾಯ್ದೆಯನ್ನು ತಡೆ ಹಿಡಿಯುವ (ರದ್ದು) ಅಧಿಕಾರ ಕೂಡಾ ನಮಗಿದೆ” ಎಂದು ಸಿಜೆಐ ಎಸ್ ಎ ಬೋಬ್ಡೆ ತಿಳಿಸಿದರು.
ಮುಂದಿನ ಆದೇಶ ನೀಡುವವರೆಗೆ ಕೇಂದ್ರದ ಮೂರು ನೂತನ ಕೃಷಿ ಕಾಯ್ದೆಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಅಲ್ಲದೇ ನಾಲ್ವರು ಕೃಷಿ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸುವುದಾಗಿ ತಿಳಿಸಿದೆ. ಸಮಿತಿಯ ಸದಸ್ಯರು ಪ್ರತಿಭಟನಾಕಾರರು ಮತ್ತು ಕೇಂದ್ರದ ಜತೆ ಮಾತುಕತೆ ನಡೆಸಲಿದೆ ಎಂದು ಆದೇಶ ನೀಡಿದೆ.
ಸಮಿತಿ ಸುಪ್ರೀಂಕೋರ್ಟ್ ಗೆ ವರದಿಯನ್ನು ನೀಡಲಿದೆ. ಸಮಿತಿಗೆ ರೈತರು ಸಹಕಾರ ನೀಡಬೇಕು. ಆದರೆ ನ್ಯಾಯಾಂಗದ ಪ್ರಕ್ರಿಯೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಬಾರದು ಎಂದು ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.
ಕೃಷಿ ಆರ್ಥಿಕ ತಜ್ಞ ಅಶೋಕ್ ಗುಲಾಟಿ, ಜಿತೇಂದ್ರ ಸಿಂಗ್ ಮಾನ್, ಅನಿಲ್ ಧನ್ವತ್ ಹಾಗೂ ಡಾ.ಪಿ.ಕೆ ಜೋಶಿ ಅವರನ್ನೊಳಗೊಂಡ ತಜ್ಞರ ಸಮಿತಿಯನ್ನು ಸುಪ್ರೀಂಕೋರ್ಟ್ ನೇಮಕ ಮಾಡಿದೆ.
ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ರೈತ ಸಂಘಟನೆಗಳಿಗೆ ನೋಟಿಸ್ ಜಾರಿ ಮಾಡಿದ್ದು, ಜನವರಿ 26 ಗಣರಾಜ್ಯೋತ್ಸವದಂದು ನಡೆಸಲು ಉದ್ದೇಶಿಸಿದ್ದ ಟ್ರ್ಯಾಕಟರ್ ರಾಲಿಯನ್ನು ಕೈಬಿಡುವಂತೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.