ಪಶ್ಚಿಮ ಬಂಗಾಳ : ಎರಡನೇ ಹಂತದ ಜಿದ್ದಾಜಿದ್ದಿನ ಚುನಾವಣಾ ಪ್ರಚಾರ ಅಂತ್ಯ

Team Udayavani, Mar 30, 2021, 6:53 PM IST

West Bengal Assembly Elections: Campaigning for second phase ends, voting on April 1

ಕೋಲ್ಕತ್ತಾ : ಆಡಳಿತ ಪಕ್ಷ ಹಾಗೂ ಪ್ರತಿ ಪಕ್ಷಗಳ ಪ್ರಭಾವಿ ನಾಯಕರ ವಾಗ್ಯುದ್ಧಗಳಿಗೆ ಸಾಕ್ಷಿಯಾದ ಪಶ್ಚಿಮ ಬಂಗಾಳದ ಎರಡನೇ ಹಂತದ ವಿಧಾನ ಸಭೆಯ ಬಹಿರಂಗ ಪ್ರಚಾರ ಇಂದು ಸಂಜೆ ಮುಕ್ತಾಯಗೊಂಡಿದೆ.

ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 1(ಗುರುವಾರ)ರಂದು ಎರಡನೇ ಹಂತದ ಚುನಾವಣೆ ನಡೆಯಲಿದ್ದು,  ನಾಲ್ಕು ಜಿಲ್ಲೆಗಳ 171 ಅಭ್ಯರ್ಥಿಗಳು 30 ವಿಧಾನ ಸಭಾ ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ.

ಓದಿ : ಜಾರಕಿಹೊಳಿ ಸಿಡಿ ಪ್ರಕರಣ: ನ್ಯಾಯಾಧೀಶರ ಮುಂದೆ ಹಾಜರಾದ ಯುವತಿ

10, 620 ಮತ ಕೇಂದ್ರಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳದ ಎರಡನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ  ಮತ ಚಲಾಯಿಸುವ ಒಟ್ಟು ಮತದಾರರ ಸಂಖ್ಯೆ 75,94,549 ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಎರಡನೇ ಹಂತದಲ್ಲಿ ಮತದಾನ ನಡೆಯುವ ಎಲ್ಲಾ ಮತ ಕೇಂದ್ರಗಳನ್ನು ಮತ್ತು ಮತ ಕೇಂದ್ರಗಳ ಸುತ್ತಲಿನ ವ್ಯಾಪ್ತಿಯನ್ನು “ಸೂಕ್ಷ್ಮ ವಲಯ” ಎಂದು ಭಾರತೀಯ ಚುನಾವಣಾ ಆಯೋಗ ಘೋಷಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಏಪ್ರಿಲ್ 1 ರಂದು ಬಂಕುರಾ, ಪುರ್ಬಾ ಮೇದಿನಿ ಪುರ, ಪಶ್ಚಿಮ ಮೇದಿನಿ ಪುರ, ದಕ್ಷಿಣ 24 ಪರಗಣಾಸ್ ನಲ್ಲಿ ನಡೆಯಲಿಕ್ಕಿರುವ ಎರಡನೇ ಹಂತದ ಚುನಾವಣೆಗೆ ಸಂಬಂಧಿಸಿದಂತೆ , ಮುನ್ನೆಚ್ಚರಿಕಾ ಕ್ರಮವಾಗಿ 651 ಸಿಎಪಿಎಫ್ ತುಕಡಿಗಳನ್ನು ಆಯೋಗ ನಿಯೋಜಿಸಿದೆ.

ಪಶ್ಚಿಮ ಬಂಗಾಳದ ಹೈ ವೋಲ್ಟೇಜ್ ವಿಧಾನ ಸಭಾ ಕ್ಷೇತ್ರಗಳು ಎಂದು ಕರೆಸಿಕೊಳ್ಳುವ ಪುರ್ಬಾ ಮೇದಿನಿಪುರಕ್ಕೆ 199, ಪಶ್ಚಿಮ ಮೇದಿನಿ ಪುರ ವಿಧಾನ ಸಭಾ ಕ್ಷೇತ್ರಗಳಲ್ಲಿ 210, ದಕ್ಷಿಣ 24 ಪರಗಣಾಸ್ ನಲ್ಲಿ 170 ಹಾಗೂ ಬಂಕುರಾದಲ್ಲಿ 72 ಸಿಎಪಿಎಫ್ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಓದಿ : ಪ್ರಧಾನಿ ಬಾಂಗ್ಲಾದೇಶ ಭೇಟಿ ನೀತಿ ಸಂಹಿತೆಯ ಉಲ್ಲಂಘನೆ:ಮೋದಿ ವಿರುದ್ಧ ಆಯೋಗಕ್ಕೆ ಟಿಎಂಸಿ ದೂರು

ಇನ್ನು, ಎರಡನೇ ಹಂತದ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಸಭೆಗಳಿಗೆ ಕೊನೆಯ ದಿನವಾದ ಇಂದು, ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ  ತಮ್ಮ ಅಭ್ಯರ್ಥಿಗಳ ಪರ ಮತ ಪ್ರಚಾರ ಯಾತ್ರೆಗಳನ್ನು ಮಾಡಿದರು. ಇಂದು ನಡೆದ ಚುನಾವಣಾ ಮತ ಪ್ರಚಾರ ಸಭೆಗಳು ನಾಯಕರ ಆರೋಪ ಪ್ರತ್ಯಾರೋಪಗಳಿಗೆ ಸಾಕ್ಷಿಯಾಯಿತು.

ನಂದಿಗ್ರಾಮ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತಮ್ಮ ಅಭ್ಯರ್ಥಿ ಸುವೇಂದು ಅಧಿಕಾರಿಯವರ ಪರ ನಟ ಮಿಥುನ್ ಚಕ್ರವರ್ತಿಯವರೊಂದಿಗೆ ರೋಡ್ ಶೋ ಗೆ ಇಳಿದ ಅಮಿತ್ ಶಾ, ಪಶ್ಚಿಮ ಬಂಗಾಳದಲ್ಲಿನ ರಾಜಕೀಯ ಹಿಂಸಾಚಾರದ ಬಗ್ಗೆ ಉಲ್ಲೇಖಿಸಿ ಮಮತಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೇ, ಸುವೇಂದು ಅಧಿಕಾರಿ ಬ್ಯಾನರ್ಜಿ ವಿರುದ್ಧ ಸುಲಭ ಜಯ ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು. ಹಾಗೂ ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಬಿಜೆಪಿಯನ್ನು ಗೆಲ್ಲಿಸಿ, ಮಮತಾ ಬ್ಯಾನರ್ಜಿಯವರನ್ನು ಸೋಲಿಸಿ ಎಂದು ಮತದಾರರಲ್ಲಿ ಶಾ ಮನವಿ ಮಾಡಿಕೊಂಡರು.

ಇನ್ನು, ನಂದಿಗ್ರಾಮದ ಸುತ್ತಮುತ್ತ ಪ್ರಚಾರ ಸಭೆಯನ್ನು ಭಾಗವಹಿಸಿದ ಮುಖ್ಯಮಂತ್ರಿ , ತೃಣಮೂಲ ಕಾಂಗ್ರೆಸ್ ನ ನಾಯಕಿ ಮಮತಾ ಬ್ಯಾನರ್ಜಿ, ಮತದಾರರಲ್ಲಿ ಶಾಂತ ಮನಸ್ಥಿತಿಯಿಂದ ಮತ ಚಲಾಯಿಸಲು ಮನವಿ ಮಾಡಿಕೊಂಡರು.  ರಾಜ್ಯದಲ್ಲಿ ಮೂರನೇ ಬಾರಿಗೆ ಅಧಿಕಾರವನ್ನು ಹಿಡಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಲ್ಲದೇ, ದ್ರೋಹ ಮಾಡುವವರಿಗೆ ಸೂಕ್ತ ಉತ್ತರ ನೀಡುತ್ತೆವೆ ಎಂದು ಮಮತಾ ಸುವೇಂದು ಅಧಿಕಾರಿ ವಿರುದ್ಧ ಕಿಡಿ ಕಾರಿದರು.

ಎಂಟು ಹಂತಗಳಲ್ಲಿ ನಡೆಯಲಿರುವ ಪಶ್ವಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ. 2 ರಂದು ಹೊರಬರಲಿದೆ.

ಓದಿ : ತಮಿಳುನಾಡು; ಡಿಎಂಕೆ ಎ.ರಾಜಾ ನಿಷ್ಪ್ರಯೋಜಕ 2ಜಿ ಮಿಸೈಲ್…ಪ್ರಧಾನಿ ಮೋದಿ ವಾಗ್ದಾಳಿ

ಟಾಪ್ ನ್ಯೂಸ್

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.