ಚುನಾವಣೋತ್ತರ ಹಿಂಸಾಚಾರವನ್ನು ತಡೆಗಟ್ಟಲು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿ : ಧಂಕರ್
Team Udayavani, Jun 6, 2021, 4:20 PM IST
ಪಶ್ಚಿಮ ಬಂಗಾಳ : ರಾಜ್ಯದಲ್ಲಿ ನಡೆಯುತ್ತಿರುವ ‘ಚುನಾವಣೋತ್ತರ ಹಿಂಸಾಚಾರ’ದ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ದೂಷಿಸಿದ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರು ಇಂದು (ಭಾನುವಾರ, ಜೂನ್ 6) ಕಾನೂನು ಸುವ್ಯವಸ್ಥೆ ಕುರಿತು ನಾಳೆ(ಸೋಮವಾರ, ಜೂನ್ 7) ಮಾಹಿತಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.
ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟ್ಟರ್ ಮೂಲಕ ಪತ್ರವೊಂದನ್ನು ಹಂಚಿಕೊಳ್ಳುವುದರ ಮೂಲಕ ನಿರ್ದೇಶನ ಹೊರಡಿಸಿದ ಧಂಕರ್, “ ಮಮತಾ ಬ್ಯಾನರ್ಜಿ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ಅತ್ಯಂತ ಆತಂಕಕಾರಿ ಸನ್ನಿವೇಶ ಇದು. ಇಂತಹ ಭೀಕರ ಪರಿಸ್ಥಿತಿಯಲ್ಲಿ ಜೂನ್ 7 ರ ಸೋಮವಾರದಂದು ಕಾನೂನು ಸುವ್ಯವಸ್ಥೆ ಕುರಿತು ಸಂಕ್ಷಿಪ್ತವಾಗಿ ಮಾಹಿತಿ ನೀಡವಂತೆ ಮತ್ತು ಚುನಾವಣೋತ್ತರ ಹಿಂಸಾಚಾರವನ್ನು ತಡೆಗಟ್ಟಲು ತೆಗೆದುಕೊಂಡ ಎಲ್ಲಾ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಕರೆ ನೀಡಿದ್ದಾರೆ.
ಇದನ್ನೂ ಓದಿ : ಯಡಿಯೂರಪ್ಪ ರಾಜೀನಾಮೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಈ ಕುರಿತಾಗಿ ಸರಣಿ ಟ್ವೀಟ್ ಮಾಡಿರುವ ಅವರು, ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತಾ ಪೊಲೀಸರನ್ನು ಆರೋಪಿಸಿದ ಅವರು, “ರಾಜ್ಯದ ಕಾರ್ಯಕರ್ತರು-ಮಮತಾ ಬ್ಯಾನರ್ಜಿ ಸಹ ಈ ಅಸ್ವಸ್ಥತೆಯನ್ನು ಗುರುತಿಸದಿರುವುದು ಅತ್ಯಂತ ದುರದೃಷ್ಟಕರವಾಗಿದೆ ಎಂದಿದ್ದಾರೆ.
“ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಯೇ ಇಲ್ಲದಂತಾಗಿದೆ ಎಂದು ಅವರು ಪತ್ರದ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Extremely alarming law & order scenario @MamataOfficial. Security environment is seriously compromised.
In such a grim situation called upon Chief Secretary to brief me on the law and order situation on Monday 7th June and indicate all steps taken to contain post poll violence. pic.twitter.com/REf0JDTpcQ
— Governor West Bengal Jagdeep Dhankhar (@jdhankhar1) June 6, 2021
ಇನ್ನು, ಕಳೆದ ಮೇ 2 ರಂದು ಪಶ್ಚಿಮ ಬಂಗಳದ ವಿಧಾನ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜ್ಯದ ಹಲವಾರು ಕಡೆಗಳಲ್ಲಿ ಹಿಂಸಾಚಾರಗಳು ನಡೆದಿದ್ದವು. ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಚುನಾವಣೋತ್ತರ ಹಿಂಸಾಚಾರದಲ್ಲಿ ಪಕ್ಷದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ, ಇದೆಲ್ಲದಕ್ಕೂ ತೃಣಮೂಲ ಕಾಂಗ್ರೆಸ್ ಪಕ್ಷವೇ ನೇರ ಹೊಣೆ ಎಂದು ಬಿಜೆಪಿ ದೀದಿ ಪಕ್ಷವನ್ನು ಆರೋಪಿಸಿತ್ತು. ಆದರೇ, ತೃಣಮೂಲ ಕಾಂಗ್ರೆಸ್ ಬಿಜೆಪಿ ರಾಜಕೀಯ ದ್ವೇಷದಿಂದ ಈ ಆರೋಪವನ್ನು ಮಾಡುತ್ತಿದೆ. ತೃಣಮೂಲ ಕಾಂಗ್ರೆಸ್ ನಲ್ಲಿ ಇಂತಹ ಹಿಂಸಾಚಾರ ಮಾಡುವಂತ ಮನಸ್ಥಿತಿಯವರು ಇಲ್ಲ. ಇದು ಬಿಜೆಪಿ ಪಕ್ಷದವರ ಕುತಂತ್ರ ಎಂದು ತನ್ನನ್ನು ತಾನು ಸಮರ್ಥಿಸಿಕೊಂಡಿತ್ತು.
ಏತನ್ಮಧ್ಯೆ, ಪಶ್ಚಿಮ ಬಂಗಾಳದ ಪುರ್ಬಾ ಮಿಡ್ನಾಪೊರ್ ನ ಕಾಂತಿ ಪುರಸಭೆ ಕಚೇರಿಯಿಂದ ಪರಿಹಾರ ಸಾಮಗ್ರಿಗಳನ್ನು ಕದ್ದ ಆರೋಪದ ಮೇಲೆ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಮತ್ತು ಅವರ ಸಹೋದರ ಸೌಮೇಂದು ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಹಿಂದೆ ಧಂಕರ್ ರಾಜ್ಯದ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ಟಿಎಂಸಿಯಿಂದ ತೀವ್ರ ಟೀಕೆಗೆ ಗುರಿಯಾಗಿತ್ತು.
ಇದನ್ನೂ ಓದಿ : 80 ಕೋಟಿ ಜನರಿಗೆ ಪಡಿತರ ನೀಡಿದ್ದೇವೆ : ಕೇಜ್ರಿವಾಲ್ ಆರೋಪಕ್ಕೆ ಕೇಂದ್ರ ತಿರುಗೇಟು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.