“ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಅಂತಿಮ ವರದಿ ಸಲ್ಲಿಸಿ’


Team Udayavani, May 9, 2019, 3:15 AM IST

ngt

ನವದೆಹಲಿ: ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯಗಳ ಅಂತಿಮ ವರದಿಯನ್ನು ಸಲ್ಲಿಸುವಂತೆ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೂಚಿಸಿದೆ. ಒಂದು ತಿಂಗಳೊಳಗೆ ವರದಿ ಮಾಡುವಂತೆ ಪರಿಸರ ಸಚಿವಾಲಯಕ್ಕೆ ಎನ್‌ಜಿಟಿ ಮುಖ್ಯಸ್ಥ ಆದರ್ಶ ಕುಮಾರ್‌ ನೇತೃತ್ವದ ನ್ಯಾಯಪೀಠ ಸೂಚಿಸಿದೆ.

2017 ಸೆಪ್ಟೆಂಬರ್‌ 8 ರಂದು ಹೊರಡಿಸಿದ್ದ ಆದೇಶದಲ್ಲಿ ಸಾಧ್ಯವಾದಷ್ಟು ಬೇಗ, ಅಂದರೆ ಒಂದು ವರ್ಷದೊಳಗೆ ವರದಿಯನ್ನು ಸಲ್ಲಿಸಲಾಗುತ್ತದೆ ಎಂದು ಪರಿಸರ ಸಚಿವಾಲಯ ಒಪ್ಪಿತ್ತು. ಈ ಹಿನ್ನೆಲೆಯಲ್ಲಿ, ತಿಂಗಳೊಳಗೆ ಸಚಿವಾಲಯವು ವರದಿಯನ್ನು ಸಲ್ಲಿಸಲಿ ಎಂದು ನ್ಯಾಯಪೀಠ ಸೂಚಿಸಿದೆ.

ಆರು ತಿಂಗಳೊಳಗೆ ವರದಿಯನ್ನು ಅಂತಿಮಗೊಳಿಸಬೇಕು ಎಂದು ನ್ಯಾಯಾಧಿಕರಣ ಆದೇಶ ಹೊರಡಿಸಿದ್ದರೂ, ಪರಿಸರ ಸಚಿವಾಲಯವು ಇನ್ನೂ ಪಶ್ಚಿಮ ಘಟ್ಟದಲ್ಲಿನ ಪರಿಸರ ಸೂಕ್ಷ್ಮ ವಲಯಗಳ ಅಧಿಸೂಚನೆಯನ್ನು ಅಂತಿಮಗೊಳಿಸಿಲ್ಲ ಎಂಬುದಾಗಿ ನ್ಯಾಯಮಂಡಳಿಗೆ ಮೊರೆ ಹೋಗಲಾಗಿತ್ತು.

ಪಶ್ಚಿಮಘಟ್ಟದ ಪರಿಸರವು ಗಂಭೀರ ಒತ್ತಡಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ, ಈ ಭಾಗದಲ್ಲಿ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುವ ಯಾವುದೇ ಚಟುವಟಿಕೆಗಳಿಗೆ ಪಶ್ಚಿಮ ಘಟ್ಟ ವ್ಯಾಪ್ತಿಗೆ ಒಳಪಡುವ ಆರು ರಾಜ್ಯಗಳು ಅನುಮತಿ ನೀಡಬಾರದು ಎಂದು ಎನ್‌ಜಿಟಿ ಆದೇಶಿಸಿತ್ತು.

ಈ ಮಧ್ಯೆ, ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯಗಳನ್ನು ಗುರುತಿಸಿ ಹೊರಡಿಸಿದ್ದ ಆದೇಶ ಕಳೆದ ಆಗಸ್ಟ್‌ 26 ಕ್ಕೆ ಅವಧಿ ಮೀರಿದ್ದರಿಂದ, ಇದರ ಕರಡು ಪ್ರತಿಯನ್ನು ಮರು ಜಾರಿಗೊಳಿಸಲು ಅವಕಾಶ ನೀಡಿತ್ತು. 2017 ಫೆಬ್ರವರಿ 27 ರಂದು ಹೊರಡಿಸಿದ ಅಧಿಸೂಚನೆಯ ಪ್ರಕಾರ ಪರಿಸರ ಸೂಕ್ಷ್ಮ ವಲಯಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲು ಆರು ತಿಂಗಳ ಕಾಲಾವಕಶವನ್ನು ಎನ್‌ಜಿಟಿ ನೀಡಿತ್ತು.

ಇದರಂತೆ ಪ್ರಕಟಿಸಲಾದ ಕರಡು ಅಧಿಸೂಚನೆಯಲ್ಲಿ ಗುಜರಾತ್‌, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ 56,825 ಚದರ ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಗುರುತಿಸಲಾಗಿತ್ತು.

ಆದರೆ ಇದಕ್ಕೆ ನಾಗರಿಕರು ಹಾಗೂ ರಾಜಕೀಯ ಪಕ್ಷಗಳಿಂದ ಭಾರಿ ವಿರೋಧ ವ್ಯಕ್ತವಾದ್ದರಿಂದ ವರದಿ ಮರುಪರಿಶೀಲನೆಗಾಗಿ ಕೆ.ಕಸ್ತೂರಿರಂಗನ್‌ ಸಮಿತಿ ನೇಮಿಸಲಾಗಿತ್ತು. ಕಸ್ತೂರಿರಂಗನ್‌ ವರದಿಯಲ್ಲಿ ಕೇವಲ ಶೇ. 37 ರಷ್ಟು ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಪರಿಗಣಿಸಲು ಶಿಫಾರಸು ಮಾಡಲಾಗಿತ್ತು.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.