ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶದಿಂದ ಒಕ್ಕಲೆಬ್ಬಿಸುವುದಿಲ್ಲ
Team Udayavani, Dec 22, 2018, 6:00 AM IST
ನವದೆಹಲಿ: ಪಶ್ಚಿಮ ಘಟ್ಟಕ್ಕೆ ನೀಡಲಾಗಿರುವ ಪರಿಸರಾತ್ಮಕವಾಗಿ ಅತ್ಯಂತ ಸೂಕ್ಷ್ಮ ವಲಯ (ಇಎಸ್‌ಎ) ಎಂಬ ಘೋಷಣೆ ಹಿಂಪಡೆಯುವುದಿಲ್ಲ. ಅಂಥ ಪ್ರಸ್ತಾಪವೇ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಪರಿಸರ ಖಾತೆ ಸಹಾಯಕ ಸಚಿವ ಮಹೇಶ್ ಶರ್ಮಾ ತಿಳಿಸಿದ್ದಾರೆ. ಶುಕ್ರವಾರ ಲೋಕಸಭೆಗೆ ಲಿಖೀತ ಉತ್ತರದಲ್ಲಿ ಈ ಮಾಹಿತಿ ನೀಡಿರುವ ಅವರು, ಸೂಕ್ಷ್ಮ ಪ್ರದೇಶ ಎಂದು ಘೋಷಿಸಲಾಗಿರುವ ಸ್ಥಳದಲ್ಲಿ ಸ್ಥಳೀಯರು ಕೃಷಿ ಮತ್ತು ತೋಟಗಾರಿಕಾ ಬೆಳೆಗಳನ್ನು ಬೆಳೆದಿರುವ ಹಿನ್ನೆಲೆಯಲ್ಲಿ ಅವರನ್ನು ಒಕ್ಕಲೆಬ್ಬಿಸುವ ಕ್ರಮವೂ ಇಲ್ಲವೆಂದು ಹೇಳಿದ್ದಾರೆ. ಕೇಂದ್ರ ಸಚಿವರ ಈ ಉತ್ತರದಿಂದಾಗಿ ಕರ್ನಾಟಕದ ಪಶ್ಚಿಮ ಘಟ್ಟ ವ್ಯಾಪ್ತಿ ಪ್ರದೇಶದ ಅರಣ್ಯ ಪ್ರದೇಶದ ಅಂಚಿನಲ್ಲಿ ಕೃಷಿ, ತೋಟಗಾರಿಕೆ ಬೆಳೆ ಮಾಡಿಕೊಂಡವರಿಗೆ ಸದ್ಯಕ್ಕೆ ನೆಮ್ಮದಿ ಸಿಕ್ಕಿದಂತಾಗಿದೆ.
ಒಟ್ಟು 56,825 ಚ.ಕಿ.ಮೀ. ವ್ಯಾಪ್ತಿ ಪೈಕಿ 6 ಸಾವಿರ ಚ.ಕಿ.ಮೀ ಪ್ರದೇಶವನ್ನು ಪರಿಸರಾತ್ಮಕ ಸೂಕ್ಷ್ಮ ವಲಯದಿಂದ ಹೊರಗಿಡಲಾಗುತ್ತದೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಪರಿಸರ ಸಚಿವಾಲಯ ಇತ್ತೀಚೆಗಷ್ಟೇ ನಾಲ್ಕನೇ ಬಾರಿಗೆ ಈ ಬಗ್ಗೆ ಪ್ರಕಟಣೆ ಹೊರಡಿಸಿದೆ. ಆ.24ರಂದು ಎನ್‌ಜಿಟಿ ಹೊರಡಿಸಿದ ಆದೇಶದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಪರಿಸರ ಸೂಕ್ಷ್ಮ ವಲಯ ಎಂಬ ಘೋಷಣೆ ಹಿಂಪಡೆದರೆ ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗೋವಾ, ಗುಜರಾತ್, ತಮಿಳುನಾಡುಗಳಲ್ಲಿರುವ ಜನರಿಗೆ ಸಮಸ್ಯೆ ಉಂಟಾದೀತು. ಈ ರಾಜ್ಯಗಳಲ್ಲಿರುವ 56,825 ಚ.ಕಿ.ಮೀ ವ್ಯಾಪ್ತಿಯ ಅರಣ್ಯ ಪ್ರದೇಶವನ್ನು ಪರಿಸರಾತ್ಮಕ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಗುರುತಿಸಲಾಗಿದೆ. ಅದರ ಪ್ರಮಾಣ ತಗ್ಗಿಸಿದರೆ ಜೀವ ವೈವಿಧ್ಯಕ್ಕೆ ತೊಂದರೆಯಾದೀತು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.