ಎರಡು ವರ್ಷಗಳಲ್ಲಿ ಯಾವುದೇ ದಂಗೆಗಳಾಗಿಲ್ಲ ಎಂದ ಯೋಗಿಗೆ ಮಾಯಾ ಪ್ರಶ್ನೆ
Team Udayavani, Mar 21, 2019, 10:48 AM IST
ಲಕ್ನೋ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದ ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬಂದು ಎರಡು ವರ್ಷಗಳಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಯೋಗಿ ಅವರು ತಮ್ಮ ಸರಕಾರದ ಸಾಧನಾ ಪಟ್ಟಿಯನ್ನು ಬಿಡುಗಡೆ ಮಾಡಿದ್ದರು. ಅದರಲ್ಲಿ ಅವರು ಕಳೆದ ಎರಡು ವರ್ಷಗಳಲ್ಲಿ ಉತ್ತರ ಪ್ರದೇಶದಲ್ಲಿ ಯಾವುದೇ ದಂಗೆಗಳಾಗಿಲ್ಲ ಎಂದು ಹೇಳಿಕೊಂಡಿದ್ದರು.
ಯೋಗಿ ಅವರ ಈ ಹೇಳಿಕೆಗೆ ಉತ್ತರ ಪ್ರದೇಶದ ಮಾಜೀ ಮುಖ್ಯಮಂತ್ರಿ ಮತ್ತು ಬಿ.ಎಸ್.ಪಿ. ನಾಯಕಿ ಮಾಯಾವತಿ ಅವರು ಸೂಕ್ತ ತಿರುಗೇಟು ನೀಡಿದ್ದಾರೆ. ‘ನಿಮ್ಮ ಅಧಿಕಾರಾವಧಿಯಲ್ಲಿ ದಂಗೆಗಳಾಗಿಲ್ಲವೆಂದಾದರೆ, ದೇಶಕ್ಕೇ ಕೆಟ್ಟ ಹೆಸರನ್ನು ತಂದ ಗುಂಪು ಥಳಿತಗಳ ಕುರಿತಾಗಿ ಯೋಗಿ ಅವರು ಏನು ಹೇಳುತ್ತಾರೆ?’ ಎಂದು ಮಾಯಾವತಿ ಅವರು ಪ್ರಶ್ನಿಸಿದ್ದಾರೆ.
ಯೋಗಿ ಅವರ ಈ ಹೇಳಿಕೆಗೆ ಟ್ವೀಟ್ ಮೂಲಕ ಸೂಕ್ತ ತಿರುಗೇಟು ನೀಡಿರುವ ಮಾಯಾವತಿ ಅವರು, ‘ಈ ಎರಡು ವರ್ಷಗಳ ಅವಧಿಯಲ್ಲಿ ಬಿ.ಜೆ.ಪಿ. ನಾಯಕರು ತಮ್ಮ ಮೇಲಿದ್ದ ಪ್ರಕರಣಗಳನ್ನು ಹಿಂದೆ ತೆಗೆಸಿಕೊಳ್ಳುವುದರಲ್ಲೇ ನಿರತರಾಗಿದ್ದರು. ಹಾಗಿದ್ದರೂ ರಾಜ್ಯದ ವಿವಿಧ ಕಡೆ ಸಂಭವಿಸಿದ ಗುಂಪು ಥಳಿತ ಪ್ರಕರಣಗಳ ಕುರಿತಾಗಿ ಯೋಗಿ ಏನು ಹೇಳುತ್ತಾರೆ, ಇಂತಹ ಪ್ರಕರಗಳು ರಾಷ್ಟ್ರಮಟ್ಟದಲ್ಲೇ ಗಮನ ಸೆಳೆದಿದ್ದವು ಮಾತ್ರವಲ್ಲದೇ ದೇಶದ ಉಚ್ಛನ್ಯಾಯಾಲಯವೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕಾಯಿತು’ ಎಂದು ಅವರು ಯೋಗಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಮಯಾ ಗಂಭೀರ ಆರೋಪವನ್ನು ಮಾಡಿದ್ದಾರೆ. ಗೋರಕ್ಷಕರನ್ನು ಬಿಜೆಪಿಯು ರಕ್ಷಿಸುತ್ತಿದೆ ಎಂದು ಈ ಹಿಂದೆ ಮಾಯಾ ಅವರು ಆರೋಪ ಮಾಡಿದ್ದರು ಮಾತ್ರವಲ್ಲದೇ ಗುಂಪು ಥಳಿತಗಾರರಿಗೆ ಕೇಸರಿ ಪಕ್ಷವು ಬೆಂಬಲವನ್ನು ನೀಡುತ್ತಿದೆ ಎಂಬ ಆರೋಪವನ್ನೂ ಮಾಯಾ ಅವರು ಈ ಹಿಂದೆ ಮಾಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.