Budget 2024 ಸ್ಟಾರ್ಟ್ಅಪ್ ಗಳ ಮೇಲಿನ “ಏಂಜಲ್ ತೆರಿಗೆ’ ರದ್ದು
ಹೂಡಿಕೆದಾರರ ಸಂಖ್ಯೆ ಹೆಚ್ಚಳಕ್ಕೆ ಸರ್ಕಾರದ ಉಪಾಯ; 2012ರಲ್ಲಿ ಜಾರಿಯಾಗಿದ್ದ ತೆರಿಗೆ ವ್ಯವಸ್ಥೆ
Team Udayavani, Jul 23, 2024, 9:25 PM IST
ಹೊಸದಿಲ್ಲಿ : ಸ್ಟಾರ್ಟ್ಅಪ್ಗಳಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಸ್ಟಾರ್ಟ್ಅಪ್ಗ್ಳ ಮೇಲೆ ಮಾಡಲಾಗುವ ಎಲ್ಲಾ ರೀತಿಯ ಹೂಡಿಕೆಗಳ ಮೇಲಿನ “ಏಂಜಲ್ ತೆರಿಗೆ’ಯನ್ನು ಸರ್ಕಾರ ರದ್ದು ಮಾಡಲು ನಿರ್ಧರಿಸಿದೆ.
ಇದರಿಂದಾಗಿ ಹೂಡಿಕೆದಾರರ ಪ್ರಮಾಣ ಹೆಚ್ಚಳವಾಗಲಿದ್ದು, ಇದರಿಂದಾಗಿ ಹೊಸ ಕಂಪನಿಗಳ ಮಾರುಕಟ್ಟೆ ಮೌಲ್ಯ ಹೆಚ್ಚಳವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ನಲ್ಲೇ ಆದಾಯ ತೆರಿಗೆ ಇಲಾಖೆ ಹೊಸ ನಿಯಮವನ್ನು ಜಾರಿ ಮಾಡಿತ್ತು. ಈಗಾಗಲೇ 1.17 ಲಕ್ಷ ಸ್ಟಾರ್ಟ್ಅಪ್ ಸರ್ಕಾರದ ಜೊತೆ ನೋಂದಣಿ ಮಾಡಿಕೊಂಡಿದ್ದು, ಈ ಕಂಪನಿಗಳ ಬಂಡವಾಳ ಹೆಚ್ಚಳಕ್ಕೆ ಈ ಘೋಷಣೆ ನೆರವು ನೀಡಲಿದೆ.
ಏನಿದು ಏಂಜಲ್ ತೆರಿಗೆ?:
ಯಾವುದೇ ಕಂಪನಿಗಳು ಷೇರುಗಳ ನ್ಯಾಯವಾದ ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅದರ ಮೇಲೆ ವಿಧಿಸಲಾಗುತ್ತಿದ್ದ ಹೆಚ್ಚುವರಿ ತೆರಿಗೆಯನ್ನು ಏಂಜಲ್ ತೆರಿಗೆ ಎನ್ನಲಾಗುತ್ತದೆ.
ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ವಿತ್ತ ಸಚಿವರಾಗಿದ್ದ ವೇಳೆ 2012ರಲ್ಲಿ ಏಂಜಲ್ ತೆರಿಗೆ ವಿಧಿಸುವ ಪದ್ಧತಿ ಜಾರಿಗೊಳಿಸಲಾಗಿತ್ತು. ಸ್ಟಾರ್ಟ್ಅಪ್ ಗಳಲ್ಲಿ ಅಕ್ರಮ ಹಣಹೂಡಿಕೆಯನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.