ಲಿಂಗ ಪತ್ತೆ ಮಾಹಿತಿ ತಡೆಯದ ಗೂಗಲ್, ಯಾಹೂಗೆ ತರಾಟೆ
Team Udayavani, Feb 17, 2017, 3:45 AM IST
ನವದೆಹಲಿ: ಗೂಗಲ್, ಯಾಹೂ ಮತ್ತು ಮೈಕ್ರೋಸಾಫ್ಟ್ ಗಳನ್ನು ಸುಪ್ರೀಂಕೋರ್ಟು ಗುರುವಾರ ತರಾಟೆಗೆ ತೆಗೆದುಕೊಂಡಿದೆ. ಭಾರತದಲ್ಲಿ ಲಿಂಗ ಪತ್ತೆ ವಿಚಾರದ ಬಗೆಗಿನ ಮಾಹಿತಿ ಮೇಲೆ ತಡೆ ಹಾಕುವಲ್ಲಿ ಅವುಗಳು ವಿಫಲವಾಗಿವೆ.
ಈ ಬಗ್ಗೆ ಅವುಗಳು ಭಾರತದ ಕಾನೂನುಗಳನ್ನು ಪಾಲನೆ ಮಾಡುತ್ತಿಲ್ಲವೆಂದು ನ್ಯಾ.ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದೆ. ಇಂಥ ಮಾಹಿತಿ ಯಾವ ರೀತಿ ತಡೆಯಬೇಕು ಎನ್ನುವುದರ ಬಗ್ಗೆ ತಜ್ಞರ ಸಮಿತಿ ನೇಮಕ ಮಾಡುವಂತೆಯೂ ನ್ಯಾಯಪೀಠ ಆದೇಶ ನೀಡಿದೆ. ಈ ಹಿಂದೆ ಇತರ ರಾಷ್ಟ್ರಗಳಲ್ಲಿ ಇಂಥ ಮಾಹಿತಿ ನಿಷೇಧ ಇದ್ದ ಅಂಶವನ್ನು ಪ್ರಸ್ತಾಪಿಸಲಾಗಿತ್ತು. ಅಲ್ಲಿ ಹಾಗಿದ್ದರೆ ಭಾರತದಲ್ಲಿ ಏಕೆ ಅದೇ ಮಾದರಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಪ್ರಶ್ನಿಸಿತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಂಪನಿಗಳ ಪರ ನ್ಯಾಯವಾದಿಗಳು ಕಾನೂನು ಪಾಲಿಸುವ ವಾಗ್ಧಾನವನ್ನು ಸುಪ್ರೀಂಕೋರ್ಟಿಗೆ ನೀಡಿದ್ದಾರೆ. ಇಂಥ ಅಂಶಗಳನ್ನು ಪರಿಶೀಲಿಸಲು ಸಂಸ್ಥೆ ರಚಿಸಲೂ ನ್ಯಾಯಪೀಠ ಕೇಂದ್ರಕ್ಕೆ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.