ಅವನು ಯೋಗಿ ಅಲ್ಲ, ಬೋಗಿ..ಅವನಿಗೆ ಚಪ್ಪಲಿಯಲ್ಲಿ ಹೊಡೆಯಬೇಕು : ಠಾಕ್ರೆ ವಿರುದ್ಧ ಬಿಜೆಪಿ ದೂರು
Team Udayavani, Aug 26, 2021, 6:33 PM IST
ನವ ದೆಹಲಿ : ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ರತ್ನಗಿರಿ ಪೊಲೀಸರು (ಮಂಗಳವಾರ, ಆಗಸ್ಟ್ 24) ಬಂಧಿಸಿದ ಬೆನ್ನಿಗೆ ಈಗ ಬಿಜೆಪಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ದೂರು ನೀಡಿದೆ.
2018 ರಲ್ಲಿ ಶಿವಾಜಿ ಫೋಟೋಗೆ ಚಪ್ಪಲಿ ಹಾಕಿಕೊಂಡು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಲಾರ್ಪಣೆ ಮಾಡಿದ್ದರು. ಈ ವಿಚಾರವನ್ನು ಉಲ್ಲೇಖಿಸಿ ಉದ್ಧವ್ ಠಾಕ್ರೆ ಶಿವಾಜಿಗೆ ಅವಮಾನಗೈದ ಯೋಗಿ ಆದಿತ್ಯನಾಥ್ ಗೆ ಚಪ್ಪಲಿಯಲ್ಲಿ ಹೊಡೆಯಬೇಕು ಎಂದು ಠಾಕ್ರೆ ಹೇಳಿಕೆ ನೀಡಿದ್ದರು ಎಂದು ಬಿಜೆಪಿ ಠಾಕ್ರೆ ವಿರುದ್ಧ ದೂರು ದಾಖಲಿಸಿದೆ ಎಂದು ವರದಿ ಆಗಿದೆ. ಈ ಸಂದರ್ಭದಲ್ಲಿ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿರಲಿಲ್ಲ.
ಇದನ್ನೂ ಓದಿ : ಕಾಸರಗೋಡು ಜಿಲ್ಲೆಯ 30 ಪ್ರದೇಶಗಳು ಮೈಕ್ರೋ ಕಂಟೈನ್ಮೆಂಟ್ ಝೋನ್ : ಜಿಲ್ಲಾಧಿಕಾರಿ
ಉದ್ಧವ್ ಠಾಕ್ರೆ, ಶಿವಸೇನೆಯ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕಿ ರಶ್ಮಿ ಠಾಕ್ರೆ, ಯುವ ಸೇನಾ ಅಧ್ಯಕ್ಷ ವರುಣ್ ಸರ್ದೇಸಾಯಿ ಅವರ ವಿರುದ್ಧ ಬಿಜೆಪಿ ದೂರು ನೀಡಿದ್ದು, ಎಫ್ ಐಆರ್ ದಾಖಲಿಸಬೇಕೆಂದು ಆಗ್ರಹಿಸಿದೆ ಎಂದು ವರದಿಯಾಗಿದೆ.
ದೂರಿನಲ್ಲಿ ಠಾಕ್ರೆ ಹೇಳಿಕೆಯನ್ನು ಉಲ್ಲೇಖಿಸಿರುವ ಬಿಜೆಪಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಒಂದು ರಾಜ್ಯದ ಮುಖ್ಯಮಂತ್ರಿ ಮಾತ್ರ ಅಲ್ಲ, ಗೋರಖ್‌ಪುರ ಪೀಠದ ಮುಖ್ಯಸ್ಥರಾಗಿದ್ದಾರೆ. ಈ ಹೇಳಿಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಅಷ್ಟೇ ಅಲ್ಲದೇ ಅವರು ಮುಖ್ಯಮಂತ್ರಿ ಆಗಿದ್ದು, ಸಾಂವಿಧಾನಿಕ ಹುದ್ದೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಎಫ್ ಐ ಆರ್ ದಾಖಲಾಗಬೇಕೆಂದು ಒತ್ತಾಯಿಸಿದೆ.
ಈಗಾಗಲೇ ಸಿಎಂ ಠಾಕ್ರೆ ವಿರುದ್ಧ ಮೂರು ದೂರುಗಳು ನಾಸಿಕ್ ನಲ್ಲಿ ದಾಖಲಾಗಿರುವುದನ್ನು ಖಚಿತಪಡಿಸಿದ್ದಾರೆ.
ಶಿವಾಜಿ ಫೋಟೋಗೆ ಚಪ್ಪಲಿ ಹಾಕಿಕೊಂಡು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಲಾರ್ಪಣೆ ಮಾಡಿದ್ದರು. ನನಗೆ ಅದೇ ಚಪ್ಪಲಿಗಳಿಂದ ಅವನ ಮುಖಕ್ಕೆ ಹೊಡೆಯಬೇಕು ಅನನ್ನಿಸಿತ್ತು. ಆತ ಯೋಗಿಯಲ್ಲ, ಆತ ಭೋಗಿ. ಅವನು ಯೋಗಿಯಾಗಿದ್ದಿದ್ದರೆ, ಅವನು ಎಲ್ಲವನ್ನೂ ಬಿಟ್ಟು ಗುಹೆಯಲ್ಲಿ ಹೋಗಿ ಕುಳಿತುಕೊಳ್ಳುತ್ತಿದ್ದನು. ಆದರೆ ಅವರು ಸಿಎಂ ಕುರ್ಚಿಯಲ್ಲಿ ಹೋಗಿ ಕುಳಿತಿದ್ದಾರೆ “ಎಂದು ಉದ್ಧವ್ ಯೋಗಿ ವಿರುದ್ಧ ಹೇಳಿಕೆ ನೀಡಿದ್ದರು.
ಇದನ್ನೂ ಓದಿ : ರಾಜಕೀಯ ಮಾಡುವುದರಲ್ಲಿ ಬಿಜೆಪಿಯವರನ್ನು ಮೀರಿಸುವವರುಂಟೆ ? : ದಿನೇಶ್ ಗುಂಡೂರಾವ್ ಪ್ರಶ್ನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.