ಕಳಪೆ ರಸ್ತೆ ಬಗ್ಗೆ ಕ್ಯಾಮರಾ ಮುಂದೆ ವಿವರಿಸುವಾಗಲೇ ಆಟೋ ಪಲ್ಟಿ!: ವಿಡಿಯೋ ವೈರಲ್
ಇದಕ್ಕಿಂತ ಬೇರೇನು ಸಾಕ್ಷಿ ಬೇಕು ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನೆಟ್ಟಿಗರು
Team Udayavani, Sep 15, 2022, 2:52 PM IST
ಲಖನೌ: ರಸ್ತೆ ಅವ್ಯವಸ್ಥೆ ಕುರಿತು ವ್ಯಕ್ತಿಯೊಬ್ಬರು ಕ್ಯಾಮರಾ ಮುಂದೆ ಮಾತನಾಡುತ್ತಿರುವಾಗ ಅವರ ಹಿಂಬದಿಯಲ್ಲಿನ ರಸ್ತೆಯಲ್ಲಿ ಚಲಿಸುತ್ತಿದ್ದ ಆಟೋ ಪಲ್ಟಿಯಾದ ಘಟನೆ ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:ಜೈಶ್ ಉಗ್ರ ಸಂಘಟನೆ ನಾಯಕ ಮಸೂದ್ ಅಫ್ಘಾನ್ ನಲ್ಲಿ ಇಲ್ಲ, ಪಾಕ್ ನಲ್ಲಿದ್ದಾನೆ; ತಾಲಿಬಾನ್
ವ್ಯಕ್ತಿಯೊಬ್ಬರು ಮಾಧ್ಯಮ ಸಂದರ್ಶನ ನೇರಪ್ರಸಾರದಲ್ಲಿ ಕಳಪೆ ರಸ್ತೆಯ ಕುರಿತು ಮಾತಾಡುತ್ತಿದ್ದರು. ಈ ವೇಳೆ ಜನರನ್ನು ಹೊತ್ತೊಯ್ಯುತ್ತಿದ್ದ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಕೂಡಲೇ ಸ್ಥಳೀಯರು ಆಟೋವನ್ನು ಮೇಲಕ್ಕೆತ್ತಿ, ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ರಸ್ತೆ ಅವ್ಯವಸ್ಥೆ ಕುರಿತು ಇದಕ್ಕಿಂತ ಬೇರೇನು ಸಾಕ್ಷಿ ಬೇಕು ಎಂದು ನೆಟ್ಟಿಗರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.
In UP’s Ballia, a reporter was talking to a commuter over poor quality of roads ridden with potholes. The commuter was explaining how accidents and E-rickshaws overturning is very frequent phenomenon. What happened at the end is something you should watch for yourself. pic.twitter.com/PapyCIdb0v
— Piyush Rai (@Benarasiyaa) September 14, 2022
ಸ್ಥಳೀಯ ನಿವಾಸಿಯೊಬ್ಬರು ರಸ್ತೆ ಅವ್ಯವಸ್ಥೆಗಳ ಬಗ್ಗೆ ವಿವರಣೆ ನೀಡುವಾಗಲೇ ಈ ಘಟನೆ ನಡೆದಿದ್ದು, ಅಲ್ಲಿನ ಕರಾಳ ಪರಿಸ್ಥಿತಿಗೆ ಈ ಘಟನೆ ಕೈಗನ್ನಡಿ ಹಿಡಿದಂತಿದೆ. ರಸ್ತೆಗಳು ಸಂಪೂರ್ಣ ಹಾಳಾಗಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ. ಪ್ರತಿದಿನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಈ ರಸ್ತೆಯಲ್ಲಿ ಸಂಚಾರ ಮಾಡಬೇಕಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.