ರಾಹುಲ್ ಹೆದರಿಕೆ ಏಕೆ : ಬಿಜೆಪಿಗೆ ಶಿವಸೇನೆ ಪ್ರಶ್ನೆ
Team Udayavani, May 14, 2018, 11:53 AM IST
ಮುಂಬಯಿ: ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ಹುದ್ದೆಗೇರುವ ತಮ್ಮ ಮನೋಭಿಲಾಷೆಯನ್ನು ವ್ಯಕ್ತಪಡಿಸಿರುವುದನ್ನು ಬಿಜೆಪಿ ಹಗಲುಕನಸು ಎಂದು ಟೀಕಿಸಿರುವುದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಶಿವಸೇನೆ ಬಿಜೆಪಿಗೆ ರಾಹುಲ್ ಗಾಂಧಿ ಬಗೆಗೆ ಹೆದರಿಕೆ ಏಕೆ ಎಂದು ಪ್ರಶ್ನಿಸಿದೆ.
“ದೇಶದಲ್ಲಿ ಪ್ರಜಾಸತ್ತೆ ಉಳಿದಿದ್ದರೆ ಬಿಜೆಪಿ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಸ್ವಾಗತಿಸಿ, 2019ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸೋಲಿಸುವುದಾಗಿ ಬಿಜೆಪಿ ಘೋಷಣೆ ಮಾಡಬೇಕಿತ್ತು’ ಎಂದು ಶಿವಸೇನೆ ತನ್ನ ಮುಖವಾಣಿಯಾದ “ಸಾಮ್ನಾ’ದ ಸಂಪಾದಕೀಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಇತರ ನಾಯಕರನ್ನು ತರಾಟೆಗೆ ತೆಗೆದುಕೊಂಡಿದೆ.
2019ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗರಿಷ್ಠ ಸ್ಥಾನಗಳಲ್ಲಿ ಜಯಗಳಿಸಿದ್ದೇ ಆದಲ್ಲಿ ಪ್ರಧಾನಿಯಾಗಲು ನಾನು ಸಿದ್ಧ ಎಂದು ರಾಹುಲ್ ಗಾಂಧಿ ಇತ್ತೀಚೆಗೆ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದರು. ಇದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅಧ್ಯಕ್ಷರು ಪ್ರಧಾನಿ ಹುದ್ದೆಯ ಕನಸು ಕಾಣುತ್ತಿದ್ದಾರೆ. ರಾಹುಲ್ ಗಾಂಧಿ ಅವರು ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಬಳಸಿ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದು ಇದನ್ನು ಯಾರೂ ಗೇಲಿ ಮಾಡುವುದು ಸರಿಯಲ್ಲ ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.
ಎನ್‌ಡಿಎಯಲ್ಲಿ ಬಿಜೆಪಿಯಿಂದ ಮಿತ್ರಪಕ್ಷಗಳ ಕಡೆಗಣನೆ
ಕಾಂಗ್ರೆಸ್ ನೇತೃತ್ವದ ಯುಪಿಎನ ಮಿತ್ರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ರಾಹುಲ್ ಗಾಂಧಿ ಅವರು ತಾನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿರುವುದು ಸರಿಯಲ್ಲ ಎಂಬ ಬಿಜೆಪಿ ನಾಯಕರ ಪ್ರತಿಕ್ರಿಯೆಗೂ ತುಸು ಖಾರವಾಗಿಯೇ ತಿರುಗೇಟು ನೀಡಿರುವ ಶಿವಸೇನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದೀಗ ಮೈತ್ರಿ ಧರ್ಮದ ನೆನಪಾಗತೊಡಗಿದೆ. ಇದು ನಮಗೆ ಸಂತಸ ತಂದಿದೆ. ಒಂದೆಡೆಯಿಂದ ಕಾಂಗ್ರೆಸ್ ಮೈತ್ರಿಕೂಟ ರಚನೆಗೆ ಪ್ರಯತ್ನ ಆರಂಭಿಸಿದ್ದರೆ ಇನ್ನೊಂದೆಡೆಯಿಂದ ಬಿಜೆಪಿ ಏಕಪಕ್ಷೀಯವಾಗಿ ಪ್ರಧಾನಿ ಹುದ್ದೆಯ ಮೇಲೆ ಅಧಿಪತ್ಯವನ್ನು ಸ್ಥಾಪಿಸಿದೆ. ಇದನ್ನು ಸ್ವತಃ ಪ್ರಧಾನಿ ಮೋದಿ ಅವರ ಹೇಳಿಕೆಗಳೇ ಸಾಬೀತುಪಡಿಸುತ್ತವೆೆ. ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದಲ್ಲಿ ಮಿತ್ರಪಕ್ಷಗಳ ನಡುವೆ ಸಂವಹನ ಕೊರತೆ ಇದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಆದರೆ ಎನ್‌ಡಿಎಯಲ್ಲಿ ಮಿತ್ರಪಕ್ಷಗಳನ್ನು ವಿಶ್ವಾಸಕ್ಕೆ ತೆಗದುಕೊಂಡು ಎಷ್ಟು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಸಂಪಾದಕೀಯದಲ್ಲಿ ಬಿಜೆಪಿ ಮತ್ತು ಪ್ರಧಾನಿಯವರನ್ನು ಪ್ರಶ್ನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.