ನಮಗೇಕೆ ಮೊದಲು ತಿಳಿಸಿಲ್ಲ?
Team Udayavani, Mar 21, 2018, 7:30 AM IST
ಹೊಸದಿಲ್ಲಿ: ಇರಾಕ್‌ನಲ್ಲಿ 39 ಭಾರತೀಯರು ಸಾವನ್ನಪ್ಪಿದ್ದಾರೆ ಎಂಬುದನ್ನು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಘೋಷಿಸುತ್ತಿದ್ದಂತೆಯೇ ಸಂತ್ರಸ್ತ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತು. ತಮ್ಮವರ ಸಾವಿನ ಬಗ್ಗೆ ತಮಗೆ ಮೊದಲು ತಿಳಿಸದೇ ಟಿವಿಯಲ್ಲಿ ನೋಡುವಂತಾದದ್ದರ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಆರೋಪವನ್ನು ತಳ್ಳಿಹಾಕಿರುವ ಸುಷ್ಮಾ ಸ್ವರಾಜ್ ಮೃತರ ಬಗ್ಗೆ ಕುಟುಂಬ ಹಾಗೂ ಇತರರಿಗೆ ಮಾಹಿತಿ ನೀಡುವುದಕ್ಕೂ ಮೊದಲು ಸಂಸತ್ತಿಗೆ ತಿಳಿಸುವುದು ನನ್ನ ಕರ್ತವ್ಯವಾಗಿತ್ತು. ಈ ಹಿಂದೆಯೂ ಅವರು ಬದುಕಿದ್ದಾರೆ ಎಂಬುದಕ್ಕಾಗಲೀ ಅಥವಾ ಸಾವನ್ನಪ್ಪಿದ್ದಾರೆ ಎಂಬುದಕ್ಕಾಗಲೀ ನಮ್ಮ ಬಳಿ ಸಾಕ್ಷ್ಯವಿಲ್ಲ ಎಂದು ಹೇಳಿದ್ದೇವೆ. ಕುಟುಂಬದವರ ಆಕ್ರೋಶ ನನಗೆ ಅರ್ಥವಾಗುತ್ತದೆ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಆದರೆ, ವಿದೇಶಾಂಗ ಸಚಿವಾಲಯ ನಮಗೆ ಈ ಬಗ್ಗೆ ಮಾಹಿತಿ ನೀಡಲೇ ಇಲ್ಲ. ಇದನ್ನು ನಾನು ನಂಬುವುದಿಲ್ಲ ಎಂದು ಮೃತ ಮಂಜಿಂದರ್ ಸಿಂಗ್‌ನ ಸೋದರಿ ಗುರ್ಪಿಂದರ್ ಕೌರ್ ಹೇಳಿದ್ದಾರೆ.
ಔತಣ ಕೂಟ ರದ್ದು: ಕಲಾಪಕ್ಕೆ ಅಡ್ಡಿ ಪಡಿಸುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಕರೆಯಲಾಗಿದ್ದ ರಾಜ್ಯ ಸಭೆ ಸದಸ್ಯರ ಔತಣ ಕೂಟವನ್ನು ಸಭಾಪತಿ ವೆಂಕಯ್ಯ ನಾಯ್ಡು ರದ್ದು ಗೊಳಿಸಿದ್ದಾರೆ.
ಮಾಹಿತಿ ಪಡೆಯಲು ಕುಟುಂಬದ ಸಂಕಷ್ಟ: ಮೃತರ ಕುಟುಂಬದವರು ಕಳೆದ ನಾಲ್ಕು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಲ್ಲಿಗೆ ಮಾಹಿತಿಗಾಗಿ ಅಲೆದಾಡಿದ ಕಥೆಗಳನ್ನು ನೆನಪಿಸಿಕೊಂಡಿದ್ದಾರೆ. ಅಮೃತಸರ ಮತ್ತು ತರ್ನ್ ತರನ್ ಜಿಲ್ಲೆಯ ಎಂಟು ಜನರ ಕುಟುಂಬದವರು ಮಾಹಿತಿಗಾಗಿ ವಿಪರೀತ ಅಲೆದಾಡಿದ್ದರು. ಇಷ್ಟು ದಿನವೂ ಕುಟುಂಬ ಸದಸ್ಯರು ಬದುಕಿದ್ದಾರೆ ಎಂಬ ಭರವಸೆಯಲ್ಲೇ ಇದ್ದವರಿಗೆ ಈಗ ಹಠಾತ್ತನೆ ಅವರ ಶವ ಸಿಕ್ಕಿರುವ ಸುದ್ದಿ ಕೇಳಿ ಬರಸಿಡಿಲು ಬಡಿದಂತಾಗಿದೆ.
330 ಪಾಕಿಸ್ಥಾನೀಯರ ಗಡಿಪಾರು: ಕಳೆದ 3 ವರ್ಷಗಳಲ್ಲಿ ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ 330 ಪಾಕಿಸ್ಥಾನೀಯರು, 1770 ಬಾಂಗ್ಲಾದೇಶೀಯರನ್ನು ಗಡೀಪಾರು ಮಾಡಲಾಗಿದೆ ಎಂದು ಲೋಕಸಭೆಗೆ ಗೃಹ ರಾಜ್ಯ ಖಾತೆ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ.
ಅವಿಶ್ವಾಸ ಗೊತ್ತುವಳಿ ವಿಳಂಬ
ಇರಾಕ್‌ನಲ್ಲಿ ಮೃತರ ಬಗ್ಗೆ ಸುಷ್ಮಾ ಸ್ವರಾಜ್ ಲೋಕಸಭೆಗೆ ತಿಳಿಸಿದರೂ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಸಂಸದರು ಗಲಭೆ ನಿಲ್ಲಿಸಲಿಲ್ಲ. ಮೊದಲು ಲೋಕಸಭೆಯನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಆದರೆ ಪುನಃ ಕಲಾಪ ಆರಂಭವಾದಾಗಲೂ ಗದ್ದಲ ಮುಂದುವರಿದಿದ್ದರಿಂದ ಬುಧವಾರಕ್ಕೆ ಕಲಾಪ ಮುಂದೂಡಲಾಯಿತು.
ಸತತ 12ನೇ ದಿನವೂ ಕಲಾಪ ಗದ್ದಲಕ್ಕೆ ಬಲಿಯಾಗಿದ್ದರಿಂದಾಗಿ, ತೆಲುಗುದೇಶಂ ಪಕ್ಷ ಹಾಗೂ ವೈಎಸ್‌ಆರ್ ಕಾಂಗ್ರೆಸ್ ಮಂಡಿಸಲು ನಿರ್ಧರಿಸಿರುವ ಅವಿಶ್ವಾಸ ಗೊತ್ತುವಳಿ ನಿಲುವಳಿ ಕೈಗೆತ್ತಿಕೊಳ್ಳಲು ಅವಕಾಶವಾಗಲಿಲ್ಲ. ಗದ್ದಲದ ಸ್ಥಿತಿಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲಾಗದು ಎಂದು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಹೇಳಿದ್ದಾರೆ.
ಬ್ಯಾಂಕ್‌ಗಳಲ್ಲಿ ನಡೆದ ಅವ್ಯವಹಾರ ನಿರ್ವಹಣೆ ವಿಷಯದಲ್ಲಿ ಎಲ್ಲ ಪಕ್ಷಗಳನ್ನೂ ಕೇಂದ್ರ ಸರಕಾರ ಪರಿಗಣನೆಗೆ ತೆಗೆದುಕೊಳ್ಳಬೇಕಿತ್ತು ಎಂದು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಆಕ್ಷೇಪಿಸುತ್ತಿದ್ದಂತೆಯೇ ಡಿಎಂಕೆ, ಎಐಎಡಿಎಂಕೆ ಮತ್ತು ಇತರ ಪಕ್ಷಗಳ ಸಂಸದರು ಕಾವೇರಿ ನದಿ ನೀರು ಹಂಚಿಕೆಗೆ ಕಾವೇರಿ ನಿರ್ವಹಣಾ ಮಂಡಳಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಸ್ಪೀಕರ್ ಎದುರು ಪ್ರತಿಭಟನೆ ನಡೆಸಿದರು.
ತಪ್ಪಿಸಿಕೊಂಡು ಬಂದವನ ಕಥೆ
ಈಗ ಮೃತರೆಂದು ಘೋಷಿಸಲ್ಪಟ್ಟವರ ಜತೆಗಿದ್ದ, ತಪ್ಪಿಸಿಕೊಂಡು ಬಂದಿದ್ದ ಹರ್ಜಿತ್ ಮಸೀಹ್ ತನ್ನ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ. ಇತರ ಎಲ್ಲರನ್ನು ಹತ್ಯೆಗೈಯಲಾಗಿದೆ ಎಂದು ಹೇಳುತ್ತಲೇ ಬಂದಿದ್ದ ಹರ್ಜಿತ್, ನಾನು ನಿಜ ಹೇಳಿದ್ದೆ. ಆದರೆ ಯಾರೂ ನಂಬಲಿಲ್ಲ ಎಂದಿದ್ದಾರೆ.
ಮೊಸುಲ್‌ನಲ್ಲಿ ಸಾವಿಗೀಡಾದವರ ಬಗ್ಗೆ ಪ್ರತಿ ಭಾರತೀಯನ ಮನ ಮಿಡಿ ಯುತ್ತಿದೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳುತ್ತೇನೆ.
ನರೇಂದ್ರ ಮೋದಿ, ಪ್ರಧಾನಿ
ಕಳೆದ ವರ್ಷ, ಅಪಹೃತರೆಲ್ಲರೂ ಸುರಕ್ಷಿತ ವಾಗಿದ್ದಾರೆ ಎಂದಿದ್ದ ಕೇಂದ್ರ ಇದೀಗ, ಅವರೆಲ್ಲರೂ ಮೃತರಾಗಿದ್ದಾರೆ ಎಂದಿರುವುದು ದುರದೃಷ್ಟಕರ.
ಗುಲಾಂ ನಬಿ ಆಜಾದ್, ಕಾಂಗ್ರೆಸ್ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.