Delhi: ಮುಸ್ಲಿಂ ವಿದ್ಯಾರ್ಥಿಗಳಿಗೆ “ನೀವು ಪಾಕಿಸ್ತಾನಕ್ಕೆ ಯಾಕೆ ಹೋಗಲ್ಲ..” ಎಂದ ಶಿಕ್ಷಕಿ
Team Udayavani, Aug 29, 2023, 4:57 PM IST
ದೆಹಲಿ: ಧರ್ಮವನ್ನು ಉಲ್ಲೇಖಿಸಿ ಶಿಕ್ಷಕಿ ನಿಂದಿಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪೊಲೀಸರಿಗೆ ದೂರು ನೀಡಿರುವ ಘಟನೆ ದೆಹಲಿಯಲ್ಲಿ ನಡೆದಿರುವುದು ವರದಿರಯಾಗಿದೆ.
ದೆಹಲಿ ಪೊಲೀಸರು ಸರ್ವೋದಯ ಬಾಲ ವಿದ್ಯಾಲಯದ ಶಿಕ್ಷಕಿ ಹೇಮಾ ಗುಲಾಟಿ ಅವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ಸರ್ಕಾರಿ ಶಾಲೆಯ ಶಿಕ್ಷಕಿಯಾಗಿರುವ ಹೇಮಾ ಗುಲಾಟಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಧರ್ಮದ ವಿಚಾರವಾಗಿ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಸೌದಿಯ ಅರೇಬಿಯಾದ ಮೆಕ್ಕಾದಲ್ಲಿರುವ ಕಾಬಾ ಮತ್ತು ಕುರಾನ್ ಬಗ್ಗೆ ಅವಹೇಳನಕಾರಿಕಾಗಿ ಮಾತನಾಡಿದ್ದಾರೆ. “ವಿಭಜನೆಯ ಸಮಯದಲ್ಲಿ ನೀವು ಪಾಕಿಸ್ತಾನಕ್ಕೆ ಹೋಗಲಿಲ್ಲ, ನೀವು ಭಾರತದಲ್ಲಿಯೇ ಇದ್ದೀರಿ, ಭಾರತದ ಸ್ವಾತಂತ್ರ್ಯಕ್ಕೆ ನಿಮ್ಮ ಕೊಡುಗೆ ಇಲ್ಲ, ನೀವು ಯಾಕೆ ಪಾಕಿಸ್ತಾನಕ್ಕೆ ಹೋಗಿಲ್ಲ” ಎಂದು ಶಿಕ್ಷಕಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಹೇಳಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
“ಈ ಶಿಕ್ಷಕಿಗೆ ಶಿಕ್ಷೆ ನೀಡದೆ ಇದ್ದರೆ, ಇತರರಿಗೆ ಇದು ಮಾದರಿಯಾಗಬಹುದು. ಯಾವುದೇ ಜ್ಞಾನವಿಲ್ಲದೆ ಮಾತನಾಡಬಾರದು. ಇಂತಹ ಶಿಕ್ಷಕರನ್ನು ಅಮಾನತು ಮಾಡಬೇಕು” ಎಂದು ವಿದ್ಯಾರ್ಥಿಯ ಪೋಷಕರೊಬ್ಬರು ʼಎಎನ್ ಐʼಗೆ ತಿಳಿಸಿದ್ದಾರೆ.
ಇದನ್ನೂ ಓದಿ: Rakhi Festival Gift: ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 200 ರೂ. ಇಳಿಕೆ: ಕೇಂದ್ರ
“ನಾವು ದೂರನ್ನು ಸ್ವೀಕರಿಸಿದ್ದೇವೆ ಮತ್ತು ಎಫ್‌ಐಆರ್ ದಾಖಲಿಸಿದ್ದೇವೆ. ಈ ವಿಷಯದ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಬಾಜ್‌ಪೈ ಕೂಡ ಘಟನೆಯನ್ನು ಖಂಡಿಸಿದ್ದು, ಶಿಕ್ಷಕಿಯ ವಿರುದ್ಧ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.
ಇತ್ತೀಚೆಗೆ ಇಂಥದ್ದೇ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಡೆದಿತ್ತು. ಮುಸ್ಲಿಂ ವಿದ್ಯಾರ್ಥಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಶಿಕ್ಷಕಿಯೊಬ್ಬರು ಸಹ ವಿದ್ಯಾರ್ಥಿಗಳಿಗೆ ಹೇಳಿದ್ದರು. ಈ ಘಟನೆಗೆ ಭಾರೀ ಆಕ್ರೋಶಕ್ಕೆ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.