125 ವರ್ಷ ಇತಿಹಾಸದ ಕಾಂಗ್ರೆಸ್ ಗೆ ಯಾಕೆ ಈ ಸ್ಥಿತಿ ಬಂತು! ಮೋದಿ
Team Udayavani, Sep 25, 2018, 4:44 PM IST
ಭೋಪಾಲ್(ಮಧ್ಯಪ್ರದೇಶ): ವೋಟ್ ಬ್ಯಾಂಕ್ ರಾಜಕಾರಣ ಭಾರತವನ್ನು ಗೆದ್ದಲು ಹುಳುವಿನಂತೆ ಕಿತ್ತು ತಿನ್ನುತ್ತಿದೆ. ಇಂದು ವೋಟ್ ಬ್ಯಾಂಕ್ ರಾಜಕೀಯದ ಬದಲಾಗಿ ಅಭಿವೃದ್ಧಿ ಬಗ್ಗೆ ಪ್ರತಿಯೊಬ್ಬರು ಮಾತನಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭೋಪಾಲ್ ನಲ್ಲಿ ಮಂಗಳವಾರ ಬಿಜೆಪಿ ಬೃಹತ್ ರಾಲಿ ಉದ್ದೇಶಿಸಿ ಮಾತನಾಡುತ್ತ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಸಬ್ ಕಾ ಸಾಥ್ ಸಬ್ ಕಾ ವಿಕಾಸ ಕೇವಲ ಭರವಸೆ ಅಲ್ಲ. ಇದು ಕೋಟ್ಯಂತರ ಭಾರತೀಯರನ್ನು ದೃಷ್ಟಿಯಲ್ಲಿರಿಸಿಕೊಂಡು ರೂಪಿಸಿದ ಯೋಜನೆಯಾಗಿದೆ. ಇದು ಎಲ್ಲರ ಅಭಿವೃದ್ಧಿಗೆ ಸರ್ಕಾರ ಕೈಗೊಂಡ ಮಹತ್ವಾಕಾಂಕ್ಷೆಯ ಯೋಜನೆಯ ಸ್ಲೋಗನ್ ಆಗಿದೆ ಎಂದರು.
125 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಈಗ ಮೈತ್ರಿಗಾಗಿ ಸಣ್ಣ ಪುಟ್ಟ ಪಕ್ಷಗಳೊಂದಿಗೆ ಮೈತ್ರಿಗಾಗಿ ಭಿಕ್ಷೆ ಬೇಡುತ್ತಿದೆ. ವೋಟ್ ಬ್ಯಾಂಕ್ ರಾಜಕೀಯ ಭಾರತದಲ್ಲಿ ಗೆದ್ದಲು ಹುಳುವಿನಂತೆ ಕಿತ್ತು ತಿನ್ನುತ್ತಿದ್ದು, ಇಂತಹ ರಾಜಕೀಯವನ್ನು ಅಂತ್ಯಗೊಳಿಸುವುದು ಬಿಜೆಪಿಯ ಕರ್ತವ್ಯವಾಗಿದೆ ಎಂದು ಮೋದಿ ಹೇಳಿದರು.
ಭಾರತದಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ಮೈತ್ರಿ ಮಾಡಿಕೊಳ್ಳಲು ವಿಫಲವಾಗಿದೆ..ಆದರೆ ಈಗ ವಿದೇಶದ ಜೊತೆ ಮೈತ್ರಿ ಮಾಡಿಕೊಳ್ಳಲು ಎದುರು ನೋಡುತ್ತಿದೆ ಎಂದು ರಾಫೇಲ್ ಡೀಲ್ ವಿವಾದದಕ್ಕೆ ಸಂಬಂಧಿಸಿದಂತೆ ಪರೋಕ್ಷವಾಗಿ ರಾಹುಲ್ ಗೆ ಟಾಂಗ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.