ರೇಪ್ ಆರೋಪಿ ಸಚಿವ ಪ್ರಜಾಪತಿ ಇನ್ನೂ ಕ್ಯಾಬಿನೆಟ್ ನಲ್ಲಿ ಯಾಕಿದ್ದಾರೆ?
Team Udayavani, Mar 5, 2017, 6:54 PM IST
ಲಕ್ನೋ:ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿರುವ ಗಾಯತ್ರಿ ಪ್ರಜಾಪತಿಯನ್ನು ಇನ್ನೂ ಯಾಕೆ ಸಚಿವ ಸಂಪುಟದಲ್ಲಿ ಇಟ್ಟುಕೊಂಡಿದ್ದೀರಿ ಎಂದು ಉತ್ತರಪ್ರದೇಶ ಗವರ್ನರ್ ರಾಮ್ ನಾಯ್ಕ್ ಅವರು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಪ್ರಶ್ನಿಸಿ ಪತ್ರ ಬರೆದಿರುವುದಾಗಿ ರಾಜಭವನದ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳ ವರದಿ ಹೇಳಿದೆ.
ಸಚಿವ ಪ್ರಜಾಪತಿ ವಿರುದ್ಧ ರೇಪ್ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಜಾಪತಿ ಮೇಲೆ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ. ಸಂವಿಧಾನದ ನೈತಿಕತೆ ಹಾಗೂ ಗೌರವದ ಪ್ರಶ್ನೆಯ ನಿಟ್ಟಿನಲ್ಲಿ ಪ್ರಜಾಪತಿಯನ್ನು ಸಚಿವ ಸಂಪುಟದಲ್ಲಿ ಇನ್ನೂ ಮುಂದುವರಿಸಿರುವುದರ ಕಾರಣ ಏನು ಎಂದು ಗವರ್ನರ್ ಅವರು ಸಿಎಂಗೆ ಬರೆದ ಪತ್ರದಲ್ಲಿ ಕೇಳಿರುವುದಾಗಿ ವರದಿ ವಿವರಿಸಿದೆ.
ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಸಚಿವನಿಗೆ ಕೂಡಲೇ ಪೊಲೀಸರಲ್ಲಿ ಶರಣಾಗಲು ಸೂಚಿಸುವಂತೆ ರಾಜ್ಯಪಾಲರು ಅಖಿಲೇಶ್ ಗೆ ಸೂಚಿಸಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.