Big cats; ಸೀತಾ, ಅಕ್ಬರ್ ಜೋಡಿ ಸಿಂಹಗಳ ಹೆಸರು ಬದಲಾಯಿಸಲು ಹೈಕೋರ್ಟ್ ಸೂಚನೆ
Team Udayavani, Feb 22, 2024, 6:02 PM IST
ಕೋಲ್ಕತಾ: ಸಿಲಿಗುರಿಯ ಸಫಾರಿ ಪಾರ್ಕ್ ನಲ್ಲಿ ಒಂದೇ ಆವರಣದಲ್ಲಿ ‘ಸೀತಾ’ ಎಂಬ ಹೆಸರಿನ ಸಿಂಹಿಣಿಯೊಂದಿಗೆ ‘ಅಕ್ಬರ್’ ಎಂಬ ಹೆಸರಿನ ಗಂಡು ಸಿಂಹಕ್ಕೆ ಇರಿಸಿರುವ ಹೆಸರುಗಳನ್ನು ಮರುನಾಮಕರಣ ಮಾಡುವಂತೆ ಕಲ್ಕತ್ತಾ ಹೈಕೋರ್ಟ್ ಗುರುವಾರ ಪಶ್ಚಿಮ ಬಂಗಾಳ ಸರಕಾರಕ್ಕೆ ಸೂಚನೆ ನೀಡಿದೆ.
ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರ ಏಕಸದಸ್ಯ ಪೀಠವು ಸೀತೆಯನ್ನು ದೇಶದ ದೊಡ್ಡ ವರ್ಗದ ಜನರು ಪೂಜಿಸುತ್ತಾರೆ ಮತ್ತು ಅಕ್ಬರ್ “ಜಾತ್ಯತೀತ ಮೊಘಲ್ ಚಕ್ರವರ್ತಿ” ಎಂದು ಹೇಳಿದ್ದಾರೆ. ನಿಮ್ಮ ಸಾಕುಪ್ರಾಣಿಗಳಿಗೆ ಹಿಂದೂ ದೇವರು ಅಥವಾ ಮುಸ್ಲಿಂ ಪ್ರವಾದಿಯ ಹೆಸರನ್ನು ಇಡುತ್ತೀರಾ ಎಂದು ನ್ಯಾಯಾಲಯವು ರಾಜ್ಯ ಸರಕಾರದ ವಕೀಲರನ್ನು ಪ್ರಶ್ನಿಸಿದೆ.
ಹೆಸರಿನ ಕುರಿತು ವಿಶ್ವ ಹಿಂದೂ ಪರಿಷತ್ತಿನ ಬಂಗಾಳ ಘಟಕವು ಫೆಬ್ರವರಿ 16 ರಂದು ಜಲ್ಪೈಗುರಿಯಲ್ಲಿರುವ ಕಲ್ಕತ್ತಾ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅನ್ನು ಸಂಪರ್ಕಿಸಿತ್ತು.ರಾಜ್ಯದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಬಂಗಾಳದ ಸಫಾರಿ ಪಾರ್ಕ್‌ನ ನಿರ್ದೇಶಕರನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಮಾಡಲಾಗಿತ್ತು.
ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅರಣ್ಯ ಇಲಾಖೆ, ಸಿಂಹಗಳನ್ನು ಇತ್ತೀಚೆಗೆ ತ್ರಿಪುರಾದ ಸೆಪಹಿಜಾಲಾ ಝೂಲಾಜಿಕಲ್ ಪಾರ್ಕ್‌ನಿಂದ ಸ್ಥಳಾಂತರಿಸಲಾಗಿದ್ದು ಫೆಬ್ರವರಿ 13 ರಂದು ಸಫಾರಿ ಪಾರ್ಕ್‌ಗೆ ಬಂದ ನಂತರ ಮರುನಾಮಕರಣ ಮಾಡಲಾಗಿಲ್ಲ ಎಂದು ಹೇಳಿದ್ದರು.
ಅಕ್ಬರ್ ಒಬ್ಬ ಮೊಘಲ್ ಚಕ್ರವರ್ತಿ ಮತ್ತು ಸೀತೆ ರಾಮಾಯಣದ ಒಂದು ಪ್ರಮುಖ ಪಾತ್ರ ಮತ್ತು ಹಿಂದೂ ದೇವತೆಯಾಗಿ ಪೂಜಿಸಲ್ಪಟ್ಟಿದ್ದಾಳೆ. ಈ ರೀತಿ ಜೋಡಿ ಮಾಡಿರುವುದು ಹಿಂದೂಗಳಿಗೆ ಅಗೌರವವೆಂದು ಪರಿಗಣಿಸಲಾಗಿದೆ ಎಂದು VHP ವಾದಿಸಿ ಸಿಂಹಿಣಿಯ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.