ಅಸಾರಾಮ್ ಬಾಪು ರೇಪ್ ಕೇಸ್; ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಚಾಟಿ
Team Udayavani, Aug 28, 2017, 2:30 PM IST
ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ದೋಷಿ ಎಂದು ತೀರ್ಪು ಪ್ರಕಟವಾದ 3 ದಿನಗಳ ಬಳಿಕ ಅತ್ಯಾಚಾರ ಪ್ರಕರಣದಲ್ಲಿ ಶಾಮೀಲಾಗಿರುವ ಮತ್ತೊಬ್ಬ ಸ್ವಘೋಷಿತ ದೇವಮಾನ ಅಸಾರಾಮ್ ಬಾಪು ವಿರುದ್ಧದ ನಿಧಾನಗತಿಯ ವಿಚಾರಣೆಯ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರ ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಅಸಾರಾಮ್ ಬಾಪು ರೇಪ್ ಆಪಾದನೆಯಡಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಜೈಲಿನಲ್ಲಿದ್ದರೂ ಕೂಡಾ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿರುವ ಯುವತಿಯನ್ನು ಯಾಕೆ ವಿಚಾರಣೆಗೆ ಗುರಿಪಡಿಸಿಲ್ಲ ಎಂದು ಪ್ರಶ್ನಿಸಿದೆ. ಈ ಬಗ್ಗೆ ಗುಜರಾತ್ ಸರ್ಕಾರ ಕೂಡಲೇ ಅಫಿಡವಿತ್ ಸಲ್ಲಿಸಬೇಕೆಂದು ನಿರ್ದೇಶನ ನೀಡಿರುವುದಾಗಿ ಎಎನ್ ಐ ವರದಿ ಮಾಡಿದೆ.
ಯಾಕೆ ವಿಚಾರಣೆಯನ್ನು ವಿಳಂಬ ಮಾಡಲಾಗುತ್ತಿದೆ? ಯಾಕೆ ನೀವಿನ್ನೂ ಸಂತ್ರಸ್ತೆಯನ್ನು ಪರೀಕ್ಷೆಗೊಳಪಡಿಸಿಲ್ಲ ಎಂದು ಗುಜರಾತ್ ಸರ್ಕಾರಕ್ಕೆ ಚಾಟಿ ಬೀಸಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಪ್ರಗತಿ ಕುರಿತ ವರದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
2013 ಆಗಸ್ಟ್ ನಿಂದ ಅಸಾರಾಮ್ ಬಾಪು (76ವರ್ಷ) ರಾಜಸ್ಥಾನ ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದು, ಹೈಕೋರ್ಟ್ ಹಲವು ಬಾರಿ ಜಾಮೀನನ್ನು ತಿರಸ್ಕರಿಸಿತ್ತು. 2013ರಲ್ಲಿ ಸೂರತ್ ಮೂಲದ ಯುವತಿ ಅಸಾರಾಮ್ ಬಾಪು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಳು. 1997ರಿಂದ 2006ರವರೆಗೆ ಆಶ್ರಮದಲ್ಲಿದ್ದ ವೇಳೆ ತನ್ನ ಮೇಲೆ ಅಸಾರಾಮ್ ಅತ್ಯಾಚಾರ ಎಸಗಿರುವುದಾಗಿ ಯುವತಿ ದೂರು ನೀಡಿದ್ದಳು. ದೂರು ದಾಖಲಾದ ನಂತರ 2013ರ ಆಗಸ್ಟ್ 3ರಂದು ಜೋಧ್ ಪುರ್ ಪೊಲೀಸರು ಅಸಾರಾಮ್ ಬಾಪುನನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.