![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 21, 2022, 6:45 AM IST
ಕೇಂದ್ರ ಹಾಗೂ ರಾಜ್ಯ ಸರಕಾರಗಳ ಹಲವು ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ಮಾಹಿತಿಯೇ ಇರುವುದಿಲ್ಲ. ಎಷ್ಟೋ ಯೋಜನೆಗಳು ಮಾಹಿತಿ ಇದ್ದವರ ಅಥವಾ ಪ್ರಭಾವಿಗಳ ಪಾಲಾಗುತ್ತವೆ. ಕೆಲವು ಸಂದರ್ಭಗಳಲ್ಲಿ ಅಗತ್ಯವಿರುವ ಜನರಿಗೆ ಈ ಮಾಹಿತಿಗಳು ತಲುಪುವುದೇ ಇಲ್ಲ. ಅರ್ಹರಿಗೆ ವಿವಿಧ ಯೋಜನೆಗಳ ಪ್ರಯೋಜನ ಸಿಗಬೇಕೆನ್ನುವ ಉದ್ದೇಶದಿಂದ ಈ “ಪ್ರಯೋಜನ’ ಅಂಕಣ.
18 ವರ್ಷಕ್ಕಿಂತ ಹೆಚ್ಚು ವಯಸ್ಸಿನ ನಿರ್ಗತಿಕ ವಿಧವೆಯರಿಗೆ ವಿಧವಾ ವೇತನವನ್ನು ಸರಕಾರದ ಆದೇಶದ ಮೇರೆಗೆ 1ನೇ ಎಪ್ರಿಲ್ 1984ರಿಂದ ಕಾರ್ಯಗತ ಮಾಡಲಾಗಿದೆ.
ಪಿಂಚಣಿ ಮೊತ್ತ: 800 ರೂ. ಪರಿಷ್ಕೃತ ಆದೇಶ: 31-07-21
ಫಲಾನುಭವಿಗಳಿಗೆ ಇರಬೇಕಾದ ಅರ್ಹತೆ
18 ವರ್ಷ ಮೇಲ್ಪಟ್ಟ ವಿಧವೆಯರು
ನಿರ್ಗತಿಕ ವಿಧವೆ ಅಂದರೆ ಪತಿಯ ಜೀವಿಸಿಲ್ಲದ ಅಥವಾ ಕಾನೂನು ರೀತ್ಯಾ ಮೃತಪಟ್ಟಿರುವನೆಂದು ಭಾವಿಸುವವನ ಪತ್ನಿ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶಗಳಲ್ಲಿ ರೂ.12,000/- ಹಾಗೂ ನಗರ ಪ್ರದೇಶಗಳಲ್ಲಿ ರೂ.17,000/- ಕ್ಕಿಂತ ಕಡಿಮೆ ಇರಬೇಕು.
ಅರ್ಜಿದಾರಳು ಅಥವಾ ಆಕೆಯ ಮರಣ ಹೊಂದಿದ ಪತಿಯು ಅರ್ಜಿ ದಿನಾಂಕದಿಂದ ಹಿಂದಿನ ನಿರಂತರ 3 ವರ್ಷಗಳ ಅವಧಿಗೆ ಕಡಿಮೆ ಇಲ್ಲದಂತೆ ಈ ರಾಜ್ಯದ ನಿವಾಸಿಯಾಗಿಬೇಕು.
ವಿಧವಾ ವೇತನಕ್ಕಾಗಿ ಸಲ್ಲಿಸುವ ಅರ್ಜಿಯು ಗೊತ್ತುಪಡಿಸಿದ ನಮೂನೆಯಲ್ಲಿರಬೇಕು ಮತ್ತು ಅದನ್ನು ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರಿಗೆ ಸಲ್ಲಿಸಬೇಕು. ಬೇರೆ ಪಿಂಚಣಿ ಪಡೆಯುತ್ತಿರುವವರು ವಿಧವಾ ವೇತನಕ್ಕೆ ಅರ್ಹರಾಗುವುದಿಲ್ಲ.
ಮೃತರಾಗುವ ವರೆಗೆ ಅಥವಾ ಪುನರ್ ವಿವಾಹವಾಗುವವರೆಗೆ ಅಥವಾ ಉದ್ಯೋಗ ಪಡೆದು ನಿಗದಿತ ವಾರ್ಷಿಕ ಆದಾಯಕ್ಕಿಂತ ಹೆಚ್ಚಿನ ಆದಾಯ ಪಡೆಯುವವರೆಗೆ ವಿಧವಾ ವೇತನ ಪಡೆಯಬಹುದು.
ಜನನ ಪ್ರಮಾಣ ಪತ್ರ, ವೈದ್ಯಕೀಯ ದೃಢೀಕ ರಣ ಪತ್ರ ಅಥವಾ ಭಾರತ ಚುನಾವಣ ಆಯೋಗವು ನೀಡಿರುವ ಮತದಾರರ ಗುರುತಿನ ಚೀಟಿಯಲ್ಲಿರುವ ಜನ್ಮ ದಿನಾಂಕವು ವಯಸ್ಸಿಗೆ ಸಂಬಂಧಿಸಿದ ದಾಖಲೆಯಾಗಿರುತ್ತದೆ.
ಸಲ್ಲಿಸಬೇಕಾದ ದಾಖಲೆಗಳು
ಆಧಾರ್ ಕಾರ್ಡ್ ಪ್ರತಿ, ಆದಾಯ, ವಿಳಾಸ, ಪತಿಯ ಮರಣ ದೃಢೀಕರಣ ಪತ್ರ ಹಾಗೂ ಬ್ಯಾಂಕ್/ಅಂಚೆ ಖಾತೆ ಪ್ರತಿ, ವಯಸ್ಸಿನ ದೃಢೀಕರಣ ಪತ್ರ
ವಯೋಮಿತಿ: 18ರಿಂದ 39 ವರ್ಷ:
ಕೇಂದ್ರದ ಪಾಲು ಶೂನ್ಯ, ರಾಜ್ಯದ ಪಾಲು 800, ಒಟ್ಟು 800 ರೂ.
40ರಿಂದ 79 ವರ್ಷ: ಕೇಂದ್ರದ ಪಾಲು 300, ರಾಜ್ಯದ ಪಾಲು 500, ಒಟ್ಟು 800 ರೂ.
ಯೋಜನೆ ಉದ್ದೇಶ: ನಿರ್ಗತಿಕ ವಿಧವೆಯರಿಗೆ ಆರ್ಥಿಕ ಸಹಾಯ ಒದಗಿಸುವುದು
ಅರ್ಜಿ ಸಲ್ಲಿಸುವುದು ಹೇಗೆ?
ಆಯಾ ವ್ಯಾಪ್ತಿಯ ನಾಡ ಕಚೇರಿ, ತಾಲೂಕು ತಹಶೀಲ್ದಾರ್ ಕಚೇರಿಗಳಲ್ಲಿ ಅರ್ಜಿ ಪಡೆದು ಸಲ್ಲಿಸಬಹುದು ಅಥವಾ (http://www.nadakacheri.karnataka.gov.in) ವೆಬ್‌ಸೈಟ್‌ಗೆ ಭೇಟಿ ನೀಡಿ ಲಾಗಿನ್ ಆಗಿ ದಾಖಲೆ ನಮೂದಿಸಿ ಅರ್ಜಿ ಸಲ್ಲಿಸಬಹುದು ಹಾಗೂ 72 ಗಂಟೆಗಳಲ್ಲಿ ಮನೆ ಬಾಗಿಲಿಗೆ ಪಿಂಚಣಿ ಯೋಜನೆಯ ಸಹಾಯವಾಣಿ 155245 ಸಂಖ್ಯೆಗೆ ಕರೆ ಮಾಡಬಹುದು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.