ತಮಿಳುನಾಡು : ಮದಗಜದ ದಾಳಿಗೆ ಬಾಲಕಿ ಸೇರಿ ನಾಲ್ವರು ಬಲಿ
Team Udayavani, Jun 2, 2017, 11:38 AM IST
ಕೊಯಮುತ್ತೂರು: ಇಲ್ಲಿನ ಗಣೇಶಪುರಂ ಎಂಬಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಮದವೇರಿದ ಕಾಡಾನೆಯೊಂದರ ದಾಳಿಗೆ 12 ವರ್ಷ ಪ್ರಾಯದ ಬಾಲಕಿ ಸೇರಿದಂತೆ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮನೆಗೆ ನುಗ್ಗಿ ಮದವೇರಿದ ಆನೆ ದಾಳಿ ನಡೆಸಿದ್ದು,ಬಾಲಕಿ,ಓರ್ವ ಮಹಿಳೆ ಮತ್ತು ಇಬ್ಬರು ಪುರುಷರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಮಾರು 25 ವರ್ಷ ಪ್ರಾಯದ ಆನೆ ದಾಳಿ ನಡೆಸಿದ್ದು, ಮದವೇರಿ ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಾ ಸಾಗುತ್ತಿದೆ. ವೆಲ್ಲೂರು ,ಗಣೇಶಪುರಂ,ಪೊಥನೂರು ಎಂಬಲ್ಲಿ ಜನರು ಆನೆಯನ್ನು ಕಂಡು ಭಯಭೀತರಾಗಿದ್ದಾರೆ. ಪುಂಡಾನೆ ಯನ್ನು ತಡೆಯಲು ಅರಣ್ಯ ಸಿಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಸ್ಥಳದಲ್ಲಿ ನೂರಕ್ಕು ಹೆಚ್ಚು ಪೊಲೀಸರು, ಅರಣ್ಯ ಸಿಬಂದಿಗಳು ಪಳಗಿದ ಕುಂಕಿ ಆನೆಗಳೊಂದಿಗೆ ಆಗಮಿಸಿ ಆನೆಯ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ತೀವ್ರ ಬರವಿದ್ದ ಹಿನ್ನಲೆಯಲ್ಲಿ ಆನೆಗಳು ನೀರಿಗಾಗಿ ವಸತಿ ಪ್ರದೇಶಕ್ಕೆ ಬಂದಿದ್ದು , ಈ ವೇಳೆ ದಾಳಿ ನಡೆದಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.