ಹೆಣ್ಮಕ್ಕಳಿಗೆ ಕಿರುಕುಳ ನೀಡಿದವರ ಮನೆಗೆ ಬುಲ್ಡೋಜರ್ ನುಗ್ಗಿಸುತ್ತೇವೆ: ಬಂಡಿ ಸಂಜಯ್
Team Udayavani, Mar 7, 2023, 9:06 AM IST
ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರ ಮೇಲಿನ ದೌರ್ಜನ್ಯ ಎಸಗುವವರ ಮನೆಗಳನ್ನು ಬುಲ್ಡೋಜರ್ ನಿಂದ ನಾಶಪಡಿಸುವುದಾಗಿ ತೆಲಂಗಾಣ ಘಟಕದ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಹೇಳಿದ್ದಾರೆ.
ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಬುಲ್ಡೋಜರ್ ಬಳಸಿ ಅಪರಾಧಿಗಳ ಮನೆಗಳನ್ನು ಕೆಡವಲು ಉತ್ತರ ಪ್ರದೇಶದ ಮಾದರಿಯನ್ನು ಅನುಸರಿಸುವುದಾಗಿ ಹೇಳಿದರು.
ರಾಜ್ಯದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಹೈದರಾಬಾದ್ ನ ಪಕ್ಷದ ಕಚೇರಿಯಲ್ಲಿ ನಡೆದ ಅಹೋರಾತ್ರಿ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಹಿರಿಯರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಕಕ್ತಿಯಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಎಂಡಿ ವಿದ್ಯಾರ್ಥಿನಿ ಪ್ರೀತಿ ಸಾವಿನ ಬಗ್ಗೆ ಸಂಜಯ್ ಮಾತನಾಡಿದರು.
ಇದನ್ನೂ ಓದಿ:ದಕ್ಷಿಣ ಆಫ್ರಿಕಾ ತಂಡದಲ್ಲಿ ಬದಲಾವಣೆ; ಟಿ20 ತಂಡಕ್ಕೆ ನೂತನ ನಾಯಕನ ನೇಮಕ
ಪ್ರೀತಿ ಸಾವಿನ ಪ್ರಕರಣವನ್ನು ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಸರ್ಕಾರ ಆದೇಶಿಸಬೇಕು ಎಂದು ಅವರು ಪುನರುಚ್ಚರಿಸಿದರು. ಪ್ರೀತಿಗೆ ಕಿರುಕುಳ ನೀಡಿದ ಸೀನಿಯರ್ ಸೈಫ್ ಗೆ ಬಿಆರ್ ಎಸ್ ಸರ್ಕಾರ ಬೆಂಬಲ ಹಾಕುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಭಾನುವಾರ ಜನಗಾಂವ್ ಜಿಲ್ಲೆಯಲ್ಲಿ ಪ್ರೀತಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಸಂಜಯ್, ಪ್ರೀತಿಯ ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.