ರಾಹುಲ್‌ “ಕೈ’ಗೆ ಅಧಿಕಾರ


Team Udayavani, Dec 17, 2017, 6:00 AM IST

PTI12_16_2017_000054B.jpg

ನವದೆಹಲಿ: ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷ ಕಾಂಗ್ರೆಸ್‌ ಶನಿವಾರ ಮಹತ್ವದ ಬದಲಾವಣೆಗೆ ಸಾಕ್ಷಿಯಾಗಿದೆ. ಪಕ್ಷದ ನೂತನ ಅಧ್ಯಕ್ಷರಾಗಿ ರಾಹುಲ್‌ ಗಾಂಧಿ ಶನಿವಾರ ಅಧಿಕೃತವಾಗಿ ಪದಗ್ರಹಣ ಮಾಡಿದ್ದಾರೆ. ನವದೆಹಲಿಯ ಕಾಂಗ್ರೆಸ್‌ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರೀಯ ಚುನಾವಣಾ ಪ್ರಾಧಿಕಾರವು ಅಧ್ಯಕ್ಷರಾಗಿ ರಾಹುಲ್‌ ಆಯ್ಕೆಯಾಗಿರುವ ಪ್ರಮಾಣಪತ್ರವನ್ನು ಹಸ್ತಾಂತರಿಸಿದೆ. ಇದರಿಂದಾಗಿ 19 ವರ್ಷಗಳವರೆಗೆ ಪಕ್ಷದ ಅಧ್ಯಕ್ಷ ಹುದ್ದೆ ನಿಭಾಯಿಸಿದ್ದ ತಾಯಿ ಸೋನಿಯಾ ಗಾಂಧಿಯಿಂದ ರಾಹುಲ್‌ ಅಧಿಕಾರ ಪಡೆದಂತಾಗಿದೆ.

ಸಮಾರಂಭದಲ್ಲಿ ಸೋನಿಯಾ, ಸೋದರಿ ಪ್ರಿಯಾಂಕಾ ವಾದ್ರಾ ಹಾಗೂ ಪ್ರಿಯಾಂಕಾ ಪತಿ ರಾಬರ್ಟ್‌ ವಾದ್ರಾ, ಮಾಜಿ ಪ್ರಧಾನಿ ಮನಮೋಹನ ಸಿಂಗ್‌, ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರರು ಹಾಜರಿದ್ದರು. ಈ ಕ್ಷಣ ಐತಿಹಾಸಿಕ ಎಂದು ಕಾಂಗ್ರೆಸ್‌ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮುಲ್ಲಪಲ್ಲಿ ರಾಮಚಂದ್ರನ್‌ ಬಣ್ಣಿಸಿದರು. ಕಾಂಗ್ರೆಸ್‌ ಕೇಂದ್ರ ಕಚೇರಿಯಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರು ಆಗಮಿಸಿದ್ದರಿಂದ ಮುಖಂಡರೇ ವೇದಿಕೆಯೆಡೆಗೆ ಆಗಮಿಸಲು ಕಷ್ಟಪಡುವಂತಾಗಿತ್ತು.

2004ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ ರಾಹುಲ್‌ ಗಾಂಧಿ, 2007ರಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದ ಅವರು, 2013ರ ಜನವರಿಯಲ್ಲಿ ಉಪಾಧ್ಯಕ್ಷರಾಗಿದ್ದರು.

ಕೊನೆಯ ಭಾಷಣ ಅರ್ಧಕ್ಕೇ ಮೊಟಕುಗೊಳಿಸಿದ ಸೋನಿಯಾ
ಕಾರ್ಯಕರ್ತರ ಅತಿಯಾದ ಸಂಭ್ರಮದಿಂದಾಗಿ ಸೋನಿಯಾ ಗಾಂಧಿ ಅಧ್ಯಕ್ಷೆಯಾಗಿ ಕೊನೆಯ ಭಾಷಣವೂ ಅರ್ಧಕ್ಕೇ ಮೊಟಕುಗೊಳಿಸುವಂತಾಗಿದೆ. ಮಾತನಾಡಲು ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಲು ಆರಂಭಿಸಿದ್ದರು. ಇದರಿಂದಾಗಿ ಸೋನಿಯಾ ಮಾತೇ ಕೇಳದಂತಾಯ್ತು. ಹಲವು ಬಾರಿ ಮಧ್ಯೆ ಮಾತು ನಿಲ್ಲಿಸಿದ ಸೋನಿಯಾ, ಒಮ್ಮೆ “ನನಗೆ ಮಾತನಾಡಲಾಗುತ್ತಿಲ್ಲ’ ಎಂದು ಅಸಹಾಯಕತೆಯಿಂದ ಹೇಳಿದ್ದೂ ಕೇಳಿಬಂತು. ಹಲವು ಬಾರಿ ಕಾಂಗ್ರೆಸ್‌ ಮುಖಂಡರು ಸಂಭ್ರಮಾಚರಣೆಯನ್ನು ಕೆಲವು ನಿಮಿಷಗಳವರೆಗೆ ಮುಂದೂಡುವಂತೆ ಆಗ್ರಹಿಸಿದರೂ, ಪಟಾಕಿ ಸದ್ದು ನಿಲ್ಲಲೇ ಇಲ್ಲ. ಕೊನೆಗೂ ಸೋನಿಯಾ ತನ್ನ ಭಾಷಣವನ್ನು ಅರ್ಧಕ್ಕೇ ಮೊಟಕುಗೊಳಿಸಬೇಕಾಯಿತು. ಈ ಮಧ್ಯೆಯೂ ಮಾತನಾಡಿದ ಸೋನಿಯಾ, ತಾವು ಅಧ್ಯಕ್ಷೆಯಾಗಿ ಆಯ್ಕೆಯಾದ ಸನ್ನಿವೇಶ ಮತ್ತು ನಂತರ ರಾಹುಲ್‌ ಈವರೆಗೆ ನಡೆದು ಬಂದ ಹಾದಿಯ ಬಗ್ಗೆ ವಿವರಿಸಿದರು.

ದೇಶವನ್ನು ಮಧ್ಯಯುಗಕ್ಕೆ ಕೊಂಡೊಯ್ದ ಮೋದಿ: ರಾಹುಲ್‌
ಅಧ್ಯಕ್ಷರಾಗಿ ಮೊದಲ ಭಾಷಣ ಮಾಡಿದ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದರು. ಎಲ್ಲ ಭಾರತೀಯರಂತೆಯೇ ನಾನೂ ಕನಸುಗಾರ. ಭಾರತವನ್ನು 21ನೇ ಶತಮಾನಕ್ಕೆ ಕಾಂಗ್ರೆಸ್‌ ಕರೆದು ತಂದಿತು. ಆದರೆ ಮೋದಿ ನಮ್ಮನ್ನು ಮಧ್ಯಯುಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಮೋದಿ ಆಡಳಿತದಲ್ಲಿ ಅನುಭವ, ಪರಿಣಿತಿ ಮತ್ತು ಜ್ಞಾನವೆಲ್ಲವನ್ನೂ ಸ್ವಾರ್ಥಕ್ಕಾಗಿ ಕಡೆಗಣಿಸಲಾಗುತ್ತಿದೆ. ದೇಶವನ್ನು ಬಿಜೆಪಿ ಕ್ರುದ್ಧಗೊಳಿಸುತ್ತಿದೆ. ದೇಶಾದ್ಯಂತ ಹಿಂಸಾಚಾರಕ್ಕೆ ಬಿಜೆಪಿಯೇ ಕಾರಣ ಎಂದು ರಾಹುಲ್‌ ಟೀಕಿಸಿದರು. ಒಮ್ಮೆ ಬೆಂಕಿ ಹೊತ್ತಿಸಿದರೆ ಅದನ್ನು ನಂದಿಸಲು ಕಷ್ಟವಾಗುತ್ತದೆ. ನೀವು ಈಗ ಬೆಂಕಿ ಹಚ್ಚಿದ್ದೀರಿ. ಆದರೆ ಇದನ್ನು ನಂದಿಸುವುದು ಅತ್ಯಂತ ಕಷ್ಟಕರ ಎಂದು ಅವರು ಹೇಳಿದರು. ಹಿಂಸೆಯನ್ನು ಪ್ರೀತಿಯಿಂದ ತಡೆಯುವಂತೆ ಅವರು ಕಾಂಗ್ರೆಸ್‌ ಕಾರ್ಯಕರ್ತರಿಗೆ ಸೂಚಿಸಿದರು.

ಕಾಂಗ್ರೆಸ್‌ ಭ್ರಷ್ಟಾಚಾರವನ್ನು ನೆನಪಿಸಿದ ಬಿಜೆಪಿ
ಮೊದಲ ಅಧ್ಯಕ್ಷೀಯ ಭಾಷಣದಲ್ಲೇ ಬಿಜೆಪಿಯನ್ನು ಟೀಕಿಸಿದ ರಾಹುಲ್‌ ಗಾಂಧಿಗೆ ಕಾಂಗ್ರೆಸ್‌ನ ಭ್ರಷ್ಟಾಚಾರವನ್ನು ಬಿಜೆಪಿ ಮುಖಂಡರು ನೆನಪಿಸಿದ್ದಾರೆ. ಕಾಂಗ್ರೆಸ್‌ನಿಂದ ಬೆಂಬಲಿತ ಮಧು ಕೋಡಾ ಹಗರಣದಲ್ಲಿ ಸಿಕ್ಕು ಜೈಲು ಸೇರಿದ್ದಾರೆ. ಅಧಿಕಾರದಲ್ಲಿ ಈಗ ಕಾಂಗ್ರೆಸ್‌ ಇಲ್ಲದಿದ್ದರೂ ಭ್ರಷ್ಟಾಚಾರ ಪ್ರಕರಣಗಳು ಕೇಳಿಬರುತ್ತಿವೆ. ಕಾಂಗ್ರೆಸ್‌ನ ಚಿಂತನಾಲಹರಿಯೇ ಭ್ರಷ್ಟವಾಗಿದೆ ಎಂದು ಬಿಜೆಪಿ ವಕ್ತಾರ ಸಂಬಿತ್‌ ಪಾತ್ರ ಟೀಕಿಸಿದ್ದಾರೆ.

ರಾಯ್‌ಬರೇಲಿಯಲ್ಲಿ ಸೋನಿಯಾ ಸ್ಪರ್ಧಿಸುವುದು ಖಚಿತ: ಪ್ರಿಯಾಂಕಾ
ರಾಯ್‌ಬರೇಲಿಯಿಂದ 2019ರ ಲೋಕಸಭೆ ಚುನಾವಣೆಗೆ ಪ್ರಿಯಾಂಕಾ ವಾದ್ರಾ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹವನ್ನು ಅವರೇ ತಳ್ಳಿ ಹಾಕಿದ್ದು, ಮುಂದಿನ ಬಾರಿಯೂ ರಾಯ್‌ಬರೇಲಿಯಲ್ಲಿ ಸೋನಿಯಾ ಗಾಂಧಿಯೇ ಸ್ಪರ್ಧಿಸಲಿದ್ದಾರೆ ಎಂದಿದ್ದಾರೆ. ಸದ್ಯ ಸೋನಿಯಾ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಪಕ್ಷದ ಅಧ್ಯಕ್ಷ ಸ್ಥಾನವನ್ನು ಪುತ್ರನಿಗೆ ಹಸ್ತಾಂತರಿಸಿದ ನಂತರ ರಾಜಕೀಯ ನಿವೃತ್ತಿ ಪಡೆಯುತ್ತಾರೆ ಎಂಬ ಊಹಾಪೋಹ ಕೇಳಿಬಂದಿತ್ತು.

ರಾಹುಲ್‌ಗೆ ಮನಮೋಹನ್‌ ಸಿಂಗ್‌ ಮೆಚ್ಚುಗೆ
ದೇಶದಲ್ಲಿ ಸದ್ಯ ಅಗತ್ಯವಿರುವ ರಾಜಕೀಯ ನಿರೀಕ್ಷೆಯನ್ನು ರಾಹುಲ್‌ ಪೂರೈಸಲಿದ್ದಾರೆ ಎಂದು ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಹೇಳಿದ್ದಾರೆ. ರಾಹುಲ್‌ ಅಧ್ಯಕ್ಷ ಪದವಿಗೇರುವ ಮೂಲಕ, ರಾಜಕೀಯದ ಭೀತಿ ಮೂಡಿಸುವ ಅವಕಾಶ ಇಲ್ಲದಂತಾಗಿದೆ ಎಂದಿದ್ದಾರೆ.

ರಾಹುಲ್‌ ವಿರೋಧ, ಮೆಚ್ಚುಗೆ
ರಾಹುಲ್‌ ಅಧಿಕಾರಕ್ಕೇರುತ್ತಿದ್ದಂತೆ ವಿರೋಧ ಮತ್ತು ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಈ ಹಿಂದೆ ಬಿಜೆಪಿ ಪಾಳೆಯದಲ್ಲಿದ್ದ ಸುಧೀಂದ್ರ ಕುಲಕರ್ಣಿ ರಾಹುಲ್‌ರನ್ನು “ನಿಜವಾದ ನಾಯಕ’ ಎಂದು ಮೆಚ್ಚಿಕೊಂಡಿದ್ದರೆ, “ರಾಹುಲ್‌ರನ್ನು ಹೊಗಳುವ ಭರದಲ್ಲಿ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಮಾತಿನಲ್ಲಿ ದೇಶದ ಬಗ್ಗೆ ನಕಾರಾತ್ಮಕ ಭಾವನೆಯೇ ತುಂಬಿತ್ತು’ ಎಂದು ಇತಿಹಾಸಕಾರ ರಾಮಚಂದ್ರ ಗುಹಾ ಟೀಕಿಸಿದ್ದಾರೆ.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.