G20 ಔತಣಕೂಟದಲ್ಲಿ ಭಾಗವಹಿಸುವುದಿಲ್ಲ…: ಎಚ್ ಡಿ ದೇವೇಗೌಡ
Team Udayavani, Sep 8, 2023, 10:50 AM IST
ಬೆಂಗಳೂರು: ಜಿ20 ಶೃಂಗಸಭೆಯ ಅಂಗವಾಗಿ ಆಯೋಜಿಸಿರುವ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್ ಡಿ ದೇವೇಗೌಡ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಔತಣಕೂಟದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ.
ಆರೋಗ್ಯ ಕಾರಣದಿಂದ ಸೆ.9ರಂದು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಜಿ20 ಔತಣಕೂಟದಲ್ಲಿ ನಾನು ಭಾಗವಹಿಸುವುದಿಲ್ಲ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ತಿಳಿಸಿದ್ದೇನೆ. ಜಿ20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ ಎಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.
ಮನಮೋಹನ್ ಸಿಂಗ್ ಅವರು ಕೂಟದಲ್ಲಿ ಭಾಗಿಯಾಗುವ ಬಗ್ಗೆ ಇದುವರೆಗೆ ಖಚಿತಪಡಿಸಿಲ್ಲ. ಇದೇ ವೇಳೆ ಅಲ್ಲಿ ಸುಮಾರು 500 ಉದ್ಯಮಿಗಳು ಉಪಸ್ಥಿತರಿರುವ ನಿರೀಕ್ಷೆಯಿದೆ.
I will not be attending the G20 dinner organised by the Hon. President of India Draupadi Murmuji, on 09 September 2023, due to health reasons. I have already communicated this to the government. I wish the G20 summit a grand success. @PMOIndia @rashtrapatibhvn
— H D Deve Gowda (@H_D_Devegowda) September 8, 2023
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಔತಣಕೂಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜೆಡಿಎಸ್ ಮುಖ್ಯಸ್ಥ ನಿತೀಶ್ ಶನಿವಾರ ಬೆಳಗ್ಗೆ 10.45ಕ್ಕೆ ದೆಹಲಿಗೆ ತೆರಳಲಿದ್ದಾರೆ. ಜುಲೈ 2022 ರ ನಂತರ ಅವರ ಮೊದಲ ಭೇಟಿಯಾಗಲಿರುವ ಸಮಾರಂಭದಲ್ಲಿ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡಾ ಜಿ20 ಶೃಂಗಸಭೆ ಔತಣ ಕೂಟದಲ್ಲಿ ಭಾಗವಹಿಸಲಿದ್ದಾರೆ.
ದೆಹಲಿಯಲ್ಲಿ ಸೆಪ್ಟೆಂಬರ್ 9-10 ರಂದು ನಡೆಯಲಿರುವ ಜಿ20 ಶೃಂಗಸಭೆಯು ಯುಎಸ್, ಯುಕೆ, ಕೆನಡಾ ಮತ್ತು ಯುರೋಪಿಯನ್ ಯೂನಿಯನ್ ಸೇರಿದಂತೆ ವಿವಿಧ ದೇಶಗಳ ಉನ್ನತ ನಾಯಕರನ್ನು ಆಯೋಜಿಸಲು ಸಿದ್ಧವಾಗಿದೆ. ನೂತನವಾಗಿ ಉದ್ಘಾಟನೆಗೊಂಡ ಭಾರತ ಮಂಟಪದ ಪ್ರಗತಿ ಮೈದಾನದಲ್ಲಿ ಶೃಂಗಸಭೆ ನಡೆಯಲಿದ್ದು, ವಿದೇಶಿ ಪ್ರತಿನಿಧಿಗಳನ್ನು ಸ್ವಾಗತಿಸಲು ಅಲಂಕರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.