ಕೃಷಿ ಮಸೂದೆ ರಾಜ್ಯಸಭೆಯಲ್ಲಿ ಮಂಡನೆ: ರೈತರ ಡೆತ್ ವಾರೆಂಟ್ ಗೆ ಸಹಿ ಮಾಡಲ್ಲವೆಂದ ಕಾಂಗ್ರೆಸ್ !
Team Udayavani, Sep 20, 2020, 2:04 PM IST
ನವದೆಹಲಿ: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಎರಡು ನಿರ್ಣಾಯಕ ಕೃಷಿ ಮಸೂದೆಗಳನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದಾರೆ. ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ ಮಸೂದೆ 2020 (ಪ್ರಚಾರ ಮತ್ತು ಸೌಲಭ್ಯ) ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಮಸೂದೆಯನ್ನು ಕೇಂದ್ರ ಸಚಿವರು ಮಂಡನೆ ಮಾಡಿದ್ದಾರೆ.
ಬಳಿಕ ಮಾತನಾಡಿದ ತೋಮರ್, ಈ ಎರಡು ಮಸೂದೆಗಳು ಐತಿಹಾಸಿಕವಾಗಿದ್ದು, ರೈತರ ಜೀವನದಲ್ಲಿ ಬದಲಾವಣೆಗಳನ್ನು ತರಲಿದೆ. ರೈತರು ತಾವು ಬೆಳೆದ ಉತ್ಪನ್ನಗಳನ್ನು ದೇಶದ ಎಲ್ಲಿ ಬೇಕಾದರೂ ಮುಕ್ತವಾಗಿ ವ್ಯಾಪರ ಈ ಮಸೂದೆ ಅನುವು ಮಾಡಿಕೊಡಲಿದೆ. ಈ ಮಸೂದೆಗಳು ಕನಿಷ್ಠ ಬೆಂಬಲ ಬೆಲೆಗೆ ಸಂಬಂಧಿಸಿಲ್ಲ ಎಂಬುದನ್ನು ಇದೇ ವೇಳೆ ಸ್ಪಷ್ಟಪಡಿಸಿದರು.
ಈ ಹಿಂದೆ ಲೋಕಸಭೆಯಲ್ಲಿ ಅಂಗೀಕರಿಸಿದ ಮಸೂದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ‘ಕೃಷಿ ತಜ್ಞರು’ ರೈತ ವಿರೋಧಿಗಳು. ಅವರು ಮಂಡಿ ವ್ಯವಸ್ಥೆಯನ್ನು ಕೊನೆಗೊಳಿಸಬಹುದೆಂಬ ಭಯವಿದೆ ಎಂದು ಹೇಳಿದರು.
ಇದನ್ನೂ ಓದಿ: ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ
ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಈ ಸುಗ್ರೀವಾಜ್ಞೆಗಳನ್ನು ವಿರೋಧಿಸಿವೆ. “ದೇಶದ ಒಟ್ಟು ಜಿಡಿಪಿಗೆ ಕನಿಷ್ಠ 20% ಕೊಡುಗೆ ನೀಡುವ ರೈತರನ್ನು ಈ ಮಸೂದೆ ಗುಲಾಮರನ್ನಾಗಿ ಮಾಡಲಾಗುತ್ತದೆ. ಇದು ರೈತರನ್ನು ಹತ್ಯೆಮಾಡಿ ಸರಕು ಮಾಡುತ್ತದೆ ಎಂದು ರಾಜ್ಯಸಭೆಯಲ್ಲಿ ಡಿಎಂಕೆ ಪಕ್ಷದ ಟಿಕೆಎಸ್ ಎಲಂಗೋವನ್ ಹೇಳಿದ್ದಾರೆ.
ಈ ಮಸೂದೆಗಳ ಬಗ್ಗೆ ಆಡಳಿತ ಪಕ್ಷವು ಚರ್ಚೆಯನ್ನು ಬಯಸುವುದಿಲ್ಲ ಎಂದು ತೋರುತ್ತದೆ. ಕೇವಲ ಮಸೂದೆಗಳ ಮೂಲಕ ಮಾತ್ರ ಧಾವಿಸುತ್ತಿದ್ದಾರೆ. ನೀವು ಯಾವುದೇ ರೈತ ಸಂಘಗಳನ್ನು ಸಹ ಸಂಪರ್ಕಿಸಿಲ್ಲ ”ಎಂದು ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್ ಆರೋಪಿಸಿದ್ದಾರೆ.
ಈ ಮಸೂದೆಗಳನ್ನು ಕಾಂಗ್ರೆಸ್ ವಿರೋಧಿಸುತ್ತದೆ. ರೈತರ ಈ ಡೆತ್ ವಾರಂಟ್‌ಗೆ ನಾವು ಸಹಿ ಮಾಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಬಜ್ವಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.