ಬಿಜೆಪಿ ಯುವ ನಾಯಕ,ಸಂಸದ ವರುಣ್ ಗಾಂಧಿ ಕಾಂಗ್ರೆಸ್‌ಗೆ ?
Team Udayavani, Nov 28, 2017, 9:47 AM IST
ಹೊಸದಿಲ್ಲಿ: ಮಹತ್ವದ ರಾಜಕೀಯ ವಿದ್ಯಮಾನವೊಂದರಲ್ಲಿ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗುತ್ತಿದ್ದಂತೆ ಸುಲ್ತಾನ್‌ಪುರದ ಸಂಸದ ವರುಣ್ ಗಾಂಧಿ ಕಾಂಗ್ರೆಸ್‌ನತ್ತ ಮುಖ ಮಾಡಲಿದ್ದಾರೆ ಎನ್ನಲಾಗಿದೆ.
ಹಿರಿಯ ಕಾಂಗ್ರೆಸ್ ನಾಯಕ ಹಾಜಿ ಮಂಜೂರ್ ಅಹಮದ್ ಅವರು ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ‘ವರುಣ್ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಇಲ್ಲವೆ ಅಥವಾ ಕಚೇರಿಯ ಪ್ರಮುಖರನ್ನಾಗಿ ನೇಮಕ ಮಾಡಿಕೊಳ್ಳಬಹುದು’ ಎಂದಿದ್ದಾರೆ.
ಇದೇ ವೇಳೆ ‘ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವರುಣ್ ಗಾಂಧಿ ಅವರ ಪಕ್ಷ ಸೇರ್ಪಡೆಯಲ್ಲಿ ವೇಗವರ್ಧಕವಾಗಿ ಪಾತ್ರ ವಹಿಸಲಿದ್ದಾರೆ’ಎಂದಿದ್ದಾರೆ.
ಇನ್ನೊಂದೆಡೆ ಆಗ್ರಾದ ನಗರ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಮ್ ಟೆಂಡನ್ ಅವರೂ ವರುಣ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿದ್ದಾರೆ.
2009 ರ ಲೋಕಸಭಾ ಚುನಾವಣೆ ವೇಳೆ ಹಿಂದುತ್ವದ ಪರವಾಗಿ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಫೈರ್ ಬ್ರ್ಯಾಂಡ್ ಆಗಿ ಭಾರೀ ಸುದ್ದಿಯಾಗಿದ್ದ ವರುಣ್ ಗಾಂಧಿ ಇತ್ತೀಚೆಗೆ ರೋಹಿಂಗ್ಯಾ ಮುಸ್ಲಿಮರ ಪರ ಮಾತನಾಡುವ ಮೂಲಕ ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು ಮತ್ತು ಸಾಮಾಜಿಕ ತಾಣಗಳಲ್ಲಿ ಟ್ರೋಲ್ ಆಗಿದ್ದರು.
ವರುಣ್ ಅವರ ತಾಯಿ ಮನೇಕಾ ಗಾಂಧಿ ಅವರು ಪ್ರಧಾನಿ ಮೋದಿ ಅವರ ಸಂಪುಟದ ಪ್ರಮುಖ ಸಚಿವೆಯಾಗಿದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.