ಒಂದೇ ದಿನ 3,500 ಹೊಸ ಪ್ರಕರಣ: ಭಾರತದಲ್ಲಿ 74ಸಾವಿರ ದಾಟಿದ ಕೋವಿಡ್ 19 ಸೋಂಕಿತರ ಸಂಖ್ಯೆ
Team Udayavani, May 13, 2020, 11:20 AM IST
ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 3,500 ಕೋವಿಡ್-19 ಹೊಸ ಪ್ರಕರಣಗಳು ದಾಖಲಾಗಿದ್ದು ಒಟ್ಟಾರೆ ವೈರಾಣು ಪೀಡಿತರ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.
ಭಾರತದಲ್ಲಿ ಲಾಕ್ ಡೌನ್ ಜಾರಿಯಾಗಿ 50 ದಿನ ಕಳೆದಿದ್ದು ಸುಮಾರು 47,480 ಸಕ್ರಿಯ ಸೋಂಕಿತ ಪ್ರಕರಣಗಳಿದ್ದು, 24,385 ಜನರು ಗುಣಮುಖರಾಗಿದ್ದಾರೆ. ಸಾವಿನ ಪ್ರಮಾಣವೂ ಕೂಡ 2,415ಕ್ಕೆ ಜಿಗಿದಿದೆ ಎಂದು ಮಾಹಿತಿ ತಿಳಿಸಿದೆ.
ಗಮನಾರ್ಹ ಸಂಗತಿಯೆಂದರೇ ಇತರ ದೇಶಗಳಿಗಿಂತ ಭಾರತದಲ್ಲಿ ಗುಣಮುಖರಾಗುವವರ ಸಂಖ್ಯೆ 32.82% ರಷ್ಟು ಹೆಚ್ಚಿದೆ ಎಂದು ವರದಿ ತಿಳಿಸಿದೆ.
ಮಂಗಳವಾರ ರಾತ್ರಿ ದೂರದರ್ಶನದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮುಂದಕ್ಕೆ ಬರುವ 4ನೇ ಹಂತದ ಲಾಕ್‌ಡೌನ್ ಹೊಸ ವಿಚಾರಗಳೊಂದಿಗೆ, ಹೊಸ ನಿಯಮಗಳೊಂದಿಗೆ ಅನುಷ್ಠಾನಗೊಳ್ಳಲಿದೆ ಎಂದಿದ್ದಾರೆ.
ಭಾರತದಲ್ಲಿ ಕೋವಿಡ್ -19 ಸೋಂಕು ಪತ್ತೆ ಪರೀಕ್ಷೆ ಕೂಡ ದ್ವಿಗುಣಗೊಂಡಿದ್ದು, ದಿನವೊಂದಕ್ಕೆ 1,00,000 ಜನರಿಗೆ ಪರೀಕ್ಷೆ ಮಾಡಲಾಗುತ್ತಿದೆ. ಸರಿಸುಮಾರು 347 ಸರ್ಕಾರಿ ಲ್ಯಾಬ್ ಗಳು ಮತ್ತು 137 ಖಾಸಗಿ ಲ್ಯಾಬ್ ಗಳು ಕಾರ್ಯನಿರ್ವಹಿಸುತ್ತಿದ್ದು, ಈಗಾಗಲೇ 17,62,840 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಜಗತ್ತಿನಾದ್ಯಂತ ಕೋವಿಡ್ ಮಹಾಮಾರಿಗೆ 2.92,893 ಜನರು ಮೃತರಾಗಿದ್ದು, 43,42,734 ಜನರು ಸೋಂಕಿನಿಂದ ಬಳುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.