ಕೋವಿಡ್ ಹೆಚ್ಚಳ ಹಿನ್ನೆಲೆ: ಹೋಳಿ ಆಚರಣೆಗೆ ನಿರ್ಬಂಧ ಹೇರಿದ ಒಡಿಶಾ ಸರ್ಕಾರ
Team Udayavani, Mar 21, 2021, 8:45 PM IST
ನವದೆಹಲಿ: ದಿನೇ ದಿನೇ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಮುಂಬರುವ ಹೋಳಿ ಆಚರಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ನಿರ್ಬಂಧವನ್ನು ಹೇರಿ ಆದೇಶ ಹೊರಡಿಸಿದೆ.
ಮುಂದಿನ ಮಾರ್ಚ್ 28 ಮತ್ತು 29 ರಂದು ನಡೆಯಲಿರುವ ಹೋಳಿ ಆಚರಣೆಯನ್ನು ಸಾರ್ವಜನಿಕವಾಗಿ ಆಚರಿಸದಂತೆ ಆದೇಶವನ್ನು ಹೊರಡಿಸಿದ್ದು, ಜನರು ಹೋಳಿ ಆಚರಣೆಯನ್ನು ಮಾಡಲು ಬಯಸಿದರೆ ತಮ್ಮ ಕುಟುಂಬ ಸದಸ್ಯರ ಜೊತೆ ಮಾತ್ರ ಮಾಡಬೇಕೆ ಹೊರತು ಯಾವುದೇ ಸಾರ್ವಜನಿಕ ಪ್ರದೇಶಗಳು ಅಥವಾ ಸಾರ್ವಜನಿಕ ರಸ್ತೆಗಳಲ್ಲಿ ಮಾಡುವಂತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಹಣ ನುಂಗುತ್ತಿರುವ ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ವ್ಯವಸ್ಥೆಯನ್ನು ಮೋದಿ ಕೊನೆಗಾಣಿಸಲಿ: HDK
ದೋಲಾ ಜಾತ್ರೆ ಆಚರಣೆಗೆ ಸಂಬಂಧಿಸಿರುವ ಸಭೆಗಳು ಹಾಗೂ ಇತರೆ ದಾರ್ಮಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿರುವ ಸಭೆಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ನಡೆಸುವುವನ್ನು ನಿರ್ಬಂಧಿಸಲಾಗಿದೆ ಎಂದಿರುವ SRC (Special Relief Commissioner) ದೇವಾಲಯಗಳಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸುವುದರ ಮೂಲಕ ಎಂದಿನಂತೆ ಪೂಜಾ ಕಾರ್ಯಗಳನ್ನು ನಡೆಸಬಹುದು. ಆದರೆ ಆಯಾ ಪ್ರದೇಶಗಳ ಪರಿಸ್ಥಿತಿಗಳಿಗೆ ಅನುಗುಣವಾಗಿ ಪುರಸಭೆ ಆಯುಕ್ತರನ್ನು ಒಳಗೊಂಡಂತೆ ನಿಯೋಜಿತ ಅಧಿಕಾರಿಗಳು ದೇವಾಲಯದ ಪೂಜಾ ಕಾರ್ಯಗಳಲ್ಲಿ ಎಷ್ಟು ಜನ ಭಕ್ತರು ಪಾಲ್ಗೊಳ್ಳಬಹುದು ಎಂಬುದನ್ನು ನಿರ್ಧರಿಸುವಂತೆ ತಿಳಿಸಲಾಗಿದೆ.
ಈ ನಡುವೆ ಆಡಳಿತಕ್ಕೆ ಸಂಬಂಧಿಸಿರುವ ಎಲ್ಲಾ ವಿಧವಾದ ಸಭೆ ಹಾಗೂ ಮಾತುಕತೆಗಳನ್ನು ವರ್ಚುವಲ್ ಮಾದರಿಯಲ್ಲಿ ನಡೆಸುವಂತೆ ತಿಳಿಸಿದ್ದು, ಮುಂದಿನ ಆದೇಶದವರೆಗೆ ಎಲ್ಲಾ ಅಧಿಕಾರಿಗಳು ವರ್ಚುವಲ್ ಮಾದರಿಯಲ್ಲಿಯೇ ಸಭೆಗಳನ್ನು ನಡೆಸುವಂತೆ ತಿಳಿಸಲಾಗಿದೆ. ಒಂದು ವೇಳೆ ನೇರ ಸಭೆಗಳನ್ನು ಮಾಡಲೇ ಬೇಕಾದ ಅನಿವಾರ್ಯತೆಗಳಿದ್ದರೆ, ಅಂತಹ ಸಮಯದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಆಸನ ವ್ಯವಸ್ಥೆಯನ್ನು ಮಾಡಬೇಕು ಎಂದು ಸಾಮಾನ್ಯ ಆಡಳಿತ ಮತ್ತು ಸಾರ್ವಜನಿಕ ಕುಂದುಕೊರತೆ ಇಲಾಖೆ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.