With one clue; 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಗ್ರನನ್ನು ಬಂಧಿಸಿದ ದೆಹಲಿ ಪೊಲೀಸರು
ಉರ್ದು ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಮೋಸ್ಟ್ ವಾಂಟೆಡ್ ಉಗ್ರ!!
Team Udayavani, Feb 25, 2024, 8:40 PM IST
ಹೊಸದಿಲ್ಲಿ: ನಿಷೇಧಿತ ಸಂಘಟನೆಯ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (SIMI) ದ ತಲೆಮರೆಸಿಕೊಂಡಿದ್ದ ಉಗ್ರ ಹನೀಫ್ ಶೇಖ್ (47) ನನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರ ವಿಶೇಷ ಘಟಕ ಯಶಸ್ವಿಯಾಗಿದೆ.
ಸಿಮಿ ಸಂಘಟನೆಯ ನಿಯತಕಾಲಿಕದ ಸಂಪಾದಕನಾಗಿದ್ದಾಗ ಶೇಖ್ ಬಳಸಿದ್ದ ಅಲಿಯಾಸ್ ಎಂಬುದು ಆತನನ್ನು ಬಂಧಿಸಲು ಪೊಲೀಸರಿಗೆ ದೊಡ್ಡ ಸುಳಿವಾಗಿತ್ತು. ಫೆಬ್ರವರಿ 22 ರಂದು ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಅತ್ಯಂತ ಕುಖ್ಯಾತ ಮತ್ತು ಮೋಸ್ಟ್ ವಾಂಟೆಡ್ ಸಿಮಿ ಭಯೋತ್ಪಾದಕ ಹನೀಫ್ ಶೇಖ್, ಮೊಹಮ್ಮದ್ ಹನೀಫ್ ಮತ್ತು ಹನೀಫ್ ಹುದಾಯಿ ಎಂಬ ಹೆಸರುಗಳನ್ನೂ ಬಳಸಿಕೊಳ್ಳುತ್ತಿದ್ದ. 22 ವರ್ಷಗಳಿಂದ ತಲೆಮರೆಸಿಕೊಂಡಿದ್ದವನನ್ನು 2002ರಲ್ಲಿ ಘೋಷಿತ ಅಪರಾಧಿ ಎಂದು ಘೋಷಿಸಲಾಗಿತ್ತು.
ಬಂಧನ ಹೇಗೆ ಸಾಧ್ಯವಾಯಿತು?
ಪೊಲೀಸರ ಮಾಹಿತಿಯ ಪ್ರಕಾರ, ಮಹಾರಾಷ್ಟ್ರ, ಮಧ್ಯಪ್ರದೇಶ, ದೆಹಲಿ, ಕರ್ನಾಟಕ ಮತ್ತು ಕೇರಳದಲ್ಲಿ ಸಿಮಿ ಸಭೆಗಳಲ್ಲಿ ಪಾಲ್ಗೊಳ್ಳುವಲ್ಲಿ ಹನೀಫ್ ಶೇಖ್ ಪ್ರಮುಖ ಪಾತ್ರ ವಹಿಸಿದ್ದ. ಆದರೆ, ನಿಷೇಧಿತ ಸಂಘಟನೆಯ ಚಟುವಟಿಕೆಗಳ ಮೇಲೆ ಪೊಲೀಸರು ಕಡಿವಾಣ ಹಾಕಿದಾಗಲೆಲ್ಲ ಹನೀಫ್ ಶೇಖ್ ತಪ್ಪಿಸಿಕೊಳ್ಳುತ್ತಿದ್ದ.
ಶೇಖ್ ನನ್ನು ಬಂಧಿಸಲು ದೆಹಲಿ ಪೊಲೀಸರ ದಕ್ಷಿಣ ವಲಯ ವಿಶೇಷ ಘಟಕ ವಿವಿಧ ರಾಜ್ಯಗಳಿಂದ ಆತನ ಬಗ್ಗೆ ಮಾಹಿತಿ ಸಂಗ್ರಹಿಸಲು ಆರಂಭಿಸಿತು. ಶೇಖ್ ಮತ್ತು ಆತನ ಸಹಚರರನ್ನು ಪತ್ತೆಹಚ್ಚಲು ತಂಡವು ತಮ್ಮ ಮಾಹಿತಿದಾರರನ್ನು ಏಳು ರಾಜ್ಯಗಳಲ್ಲಿ ನಿಯೋಜಿಸಿತು. ಶೇಖ್ ತನ್ನ ಗುರುತನ್ನು ಬದಲಾಯಿಸಿಕೊಂಡು ಮಹಾರಾಷ್ಟ್ರದ ಭುಸಾವಾಲ್‌ನಲ್ಲಿರುವ ಉರ್ದು ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಮಾಹಿತಿದಾರರೊಬ್ಬರು ಪೊಲೀಸರಿಗೆ ತಿಳಿಸಿದ್ದಾರೆ.
ಶೇಖ್‌ನನ್ನು ಬಂಧಿಸಲು ತಂಡವನ್ನು ರಚಿಸಿ ಫೆಬ್ರವರಿ 22 ರಂದು ಮೊಹಮದಿನ್ ನಗರದಿಂದ ಖಡ್ಕಾ ರಸ್ತೆಗೆ ಹೋಗುತ್ತಿದ್ದ ಅನುಮಾನಾಸ್ಪದ ವ್ಯಕ್ತಿಯನ್ನೇ ಪೊಲೀಸರು ಹನೀಫ್ ಶೇಖ್ ಎಂದು ಗುರುತಿಸಿದ್ದಾರೆ. ಮಧ್ಯಾಹ್ನ 2.50 ರ ಸುಮಾರಿಗೆ ಬೆನ್ನಟ್ಟಿದಾಗ ಹನೀಫ್ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆದರೆ ಕಾರ್ಯಾಚರಣೆಯಲ್ಲಿ ಆತನನ್ನು ಬಂಧಿಸಲಾಯಿತು” ಎಂದು ಉಪ ಪೊಲೀಸ್ ಆಯುಕ್ತ (ವಿಶೇಷ ಸೆಲ್) ಅಲೋಕ್ ಕುಮಾರ್ ಅವರು ಸುದ್ದಿ ಸಂಸ್ಥೆ ಪಿಟಿಐಗೆ ಉಲ್ಲೇಖಿಸಿದ್ದಾರೆ.
‘ಇಸ್ಲಾಮಿಕ್ ಮೂವ್ ಮೆಂಟ್ ‘ ಪತ್ರಿಕೆಯ ಸಂಪಾದಕನಾಗಿದ್ದಾಗ ಭಾರತದಲ್ಲಿ ಹಲವಾರು ಪ್ರಚೋದನಕಾರಿ ಲೇಖನಗಳನ್ನು ಬರೆಡಿದ್ದ. ದೆಹಲಿಯ ಝಾಕಿರ್ ನಗರದಲ್ಲಿರುವ ಸಿಮಿ ಕೇಂದ್ರ ಕಚೇರಿಯಲ್ಲಿ ಶೇಖ್ ಗೆ ಕೊಠಡಿಯನ್ನೂ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.