ಒಂದೇ ವಾರದಲ್ಲಿ ಇಬ್ಬರು ಬಿಜೆಪಿ ನಾಯಕರ ಹತ್ಯೆ
Team Udayavani, Jan 21, 2019, 12:31 AM IST
ಬರ್ವಾನಿ: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಬೆಳಗ್ಗೆ ವಾಕಿಂಗ್‌ಗೆಂದು ಹೋಗಿದ್ದ ಬಿಜೆಪಿ ನಾಯಕ ಮನೋಜ್ ಠಾಕ್ರೆ(48) ಅವರು ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಅವರನ್ನು ಕೊಲೆ ಮಾಡಿ ರಸ್ತೆ ಬದಿಯ ಹೊಲವೊಂದರಲ್ಲಿ ಬಿಸಾಕಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಡ್‌ಸಾರ್‌ನಲ್ಲಿ ಬಿಜೆಪಿ ನಾಯಕ ಪ್ರಹ್ಲಾದ್ ಬಂಧವಾರ್ ಎಂಬವರನ್ನು ಗುಂಡಿಕ್ಕಿ ಹತ್ಯೆಗೈದ ಮೂರೇ ದಿನದಲ್ಲಿ ಈ ಘಟನೆ ನಡೆದಿದ್ದು, ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರವು ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋ ಪಿಸಿದೆ. ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, “ಬಿಜೆಪಿ ನಾಯ ಕರನ್ನು ಒಬ್ಬೊಬ್ಬರನ್ನಾಗಿ ಹತ್ಯೆ ಮಾಡಲಾಗುತ್ತಿದೆ. ಆದರೂ, ಕಾಂಗ್ರೆಸ್ ಸರಕಾರಇದನ್ನು ಲಘುವಾಗಿ ಪರಿಗಣಿಸಿದೆ. ಪ್ರಸಕ್ತ ಸರಕಾರದ ಅಡಿ ಕಾನೂನು ಸುವ್ಯವಸ್ಥೆ ಕೆಳಮಟ್ಟಕ್ಕೆ ಇಳಿದಿದೆ. ಕೂಡಲೇ ತಪ್ಪಿತಸ್ಥರನ್ನು ಬಂಧಿಸಬೇಕು. ಇಲ್ಲದಿದ್ದರೆ ಬಿಜೆಪಿ ಬೀದಿ ಗಿಳಿದು ಹೋರಾಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ. ತನಿಖೆಗಾಗಿ ಹೆಚ್ಚುವರಿ ಎಸ್‌ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿ ಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…