ಎಸ್ಪಿ-ಕಾಂಗ್ರೆಸ್‌ ಮೈತ್ರಿ ತೂಗುಯ್ಲಾಲೆಯಲ್ಲಿ


Team Udayavani, Jan 21, 2017, 3:50 AM IST

20-NT-2.jpg

ಲಕ್ನೋ: ಬಿಜೆಪಿಯನ್ನು ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಲೇಬೇಕೆಂದು ಪಣ ತೊಟ್ಟಿದ್ದರೂ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ ನಡುವೆ ಬಿರುಕು ಮೂಡತೊಡಗಿದ್ದು, ಮೈತ್ರಿಕೂಟ ತೂಗುಯ್ನಾಲೆಯಲ್ಲಿದೆ.

ಮುಖ್ಯಮಂತ್ರಿ, ಎಸ್‌ಪಿ ಅಧ್ಯಕ್ಷ ಅಖೀಲೇಶ್‌ ಯಾದವ್‌ ಶುಕ್ರವಾರ ಕಾಂಗ್ರೆಸ್ಸಿಗೆ ಒಂದು ಮಾತೂ ಹೇಳದೇ  191 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದಾರೆ. ಇದರಲ್ಲಿ 9 ಹಾಲಿ ಕಾಂಗ್ರೆಸ್‌ ಶಾಸಕರ ಸ್ಥಾನಗಳೂ ಸೇರಿವೆ. ಇನ್ನು ಗಾಂಧಿ ಕಟುಂಬದ ಭದ್ರಕೋಟೆಯಾದ ಅಮೇಠಿಯಲ್ಲೂ ಎಸ್‌ಪಿ ಅಭ್ಯರ್ಥಿ ಕಣಕ್ಕಿಳಿಯುತ್ತಿದ್ದಾರೆ. ಇದು ಕಾಂಗ್ರೆಸ್‌ನಲ್ಲಿ ಅಸಮಾಧಾನ ಸೃಷ್ಟಿಸಿದೆ.

“403 ಸ್ಥಾನಗಳಲ್ಲಿ ಕಾಂಗ್ರೆಸ್‌ಗೆ ನಾವು 85 ಸ್ಥಾನಗಳನ್ನು ಬಿಟ್ಟುಕೊಡಲು ಸಿದ್ಧರಿದ್ದೇವೆ. ಆದರೆ ಇಲ್ಲಿಯವರೆಗೆ ಕಾಂಗ್ರೆಸ್‌ನಿಂದ ಸಕಾರಾತ್ಮಕ ಸ್ಪಂದನೆಗಳು ಲಭಿಸಿಲ್ಲ’ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಕಿರಣ್ಮಯ್‌ ನಂದಾ  ಹೇಳಿದ್ದಾರೆ. ಕಾಂಗ್ರೆಸ್‌ ಸುಮಾರು 100 ಸ್ಥಾನಗಳಿಗೆ ಲಾಬಿ ನಡೆಸುತ್ತಿದ್ದು, 15 ಕಮ್ಮಿ ಸ್ಥಾನಗಳು ದೊರಕಿರುವುದು ಅಸಮಾಧಾನ ಸೃಷ್ಟಿಸಿದೆ.

“ಕಾಂಗ್ರೆಸ್‌ಗೆ ಬಿಜೆಪಿಯನ್ನು ಸೋಲಿಸಲೇಬೇಕೆಂಬ ಆಸಕ್ತಿಯಿದ್ದರೆ ಅದು ನಮ್ಮ ಸ್ಥಾನ ಹಂಚಿಕೆಯ ಸೂತ್ರವನ್ನು ಪಾಲಿಸಬೇಕು. ಸಮಾಜವಾದಿ ಪಕ್ಷ ಎಲ್ಲಿ ಅಗ್ರಸ್ಥಾನದಲ್ಲಿದೆ ಮತ್ತು ಎಲ್ಲಿ ಮೂರು, ನಾಲ್ಕು, ಐದನೆ ಸ್ಥಾನದಲ್ಲಿದೆ ಎಂಬುದನ್ನು ಗಮನಿಸಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ಇದನ್ನು ಪರಿಗಣಿಸಿ ಕಾಂಗ್ರೆಸ್‌ಗೆ 54 ಸ್ಥಾನ ನೀಡಲು ನಾವು ಸಿದ್ಧ. ಕಾಂಗ್ರೆಸ್‌ ಬಹಳ ಗಂಭೀರವಾಗಿ ಮಾತುಕತೆ ನಡೆಸಿದರೆ ಇನ್ನೂ 25ರಿಂದ 30 ಹೆಚ್ಚಿನ ಸ್ಥಾನಗಳನ್ನು ನೀಡಲು ಸಿದ್ಧರಿದ್ದೇವೆ’ ಎಂದು ಕಿರಣ್ಮಯ್‌ ನಂದಾ ತಿಳಿಸಿದ್ದಾರೆ.

ರಾಹುಲ್‌-ಪ್ರಿಯಾಂಕಾ ಸಭೆ: ಸಮಾಜವಾದಿ ಪಕ್ಷ ಕೈಕೊಡುವ ಲಕ್ಷಣ ಕಾಣುತ್ತಿರುವ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸಭೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಮುಖಂಡ ಅಜಯ್‌ ಮಾಕನ್‌, “9 ಹಾಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರದಲ್ಲಿ ಎಸ್‌ಪಿ ಅಭ್ಯರ್ಥಿ ಘೋಷಣೆ ನೋವು ತಂದಿದೆ’ ಎಂದರು.

ಟಾಪ್ ನ್ಯೂಸ್

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.