ಮಸೂದೆ ಪಾಸಾದ ಮರುದಿನವೇ ಉ.ಪ್ರ. ಮಹಿಳೆಗೆ ತ್ರಿವಳಿ ತಲಾಕ್
Team Udayavani, Dec 29, 2017, 11:16 AM IST
ಹೊಸದಿಲ್ಲಿ : 2017ರ ಮುಸ್ಲಿಂ ಮಹಿಳೆಯರ ವೈವಾಹಿಕ ಹಕ್ಕುಗಳ ರಕ್ಷಣೆ ಮಸೂದೆಯನ್ನು ಲೋಕಸಭೆ ನಿನ್ನೆ ಗುರುವಾರ ಪಾಸು ಮಾಡಿದ ಮರುದಿನವೇ ಉತ್ತರ ಪ್ರದೇಶದ ಮೊರಾದಾಬಾದ್ ನಿವಾಸಿಯಾಗಿರುವ ಮಹಿಳೆಯೋರ್ವರು ವರದಕ್ಷಿಣೆ ಬೇಡಿಕೆಗಾಗಿ ತನಗೆ ತನ್ನ ಪತಿ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ರೋದಿಸಿದ್ದಾರೆ.
ತ್ರಿವಳಿ ತಲಾಕ್ ಸಂತ್ರಸ್ತೆಯಾಗಿರುವ ಮಹಿಳೆಯರನ್ನು ವಿರಾಶಾ ಎಂದು ಗುರುತಿಸಲಾಗಿದೆ. ಆಕೆಯ ಪತಿ ಆಕೆಗೆ ಹೆಚ್ಚಿನ ವರದಕ್ಷಿಣೆಯಾಗಿ 10 ಲಕ್ಷ ರೂ. ಆಗ್ರಹಿಸಿ ತ್ರಿವಳಿ ತಲಾಕ್ ನೀಡಿದ್ದಾನೆ ಎಂದು ವರದಿಯಾಗಿದೆ.
ಲೋಕಸಭೆಯಲ್ಲಿ ನಿನ್ನೆ ಗುರುವಾರ ಪಾಸಾದ ಮುಸ್ಲಿಂ ಮಹಿಳೆಯರ ವೈವಾಹಿಕ ಹಕ್ಕುಗಳ ರಕ್ಷಣಾ ಮಸೂದೆಯು ಯಾವುದೇ ರೂಪದಲ್ಲಿ ಮುಸ್ಲಿಂ ಮಹಿಳೆಗೆ ಆಕೆಯ ಪತಿ ತ್ರಿವಳಿ ತಲಾಕ್ ನೀಡುವುದನ್ನು ಅಪರಾಧೀಕರಿಸುತ್ತದೆ ಮತ್ತು ಹಾಗೆ ತ್ರಿವಳಿ ತಲಾಕ್ ನೀಡಿದಾತನಿಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸುತ್ತದೆ.
ಈ ಮಸೂದೆಗೆ ಲೋಕಸಭೆಯಲ್ಲಿ ನಿನ್ನೆ ಕಾಂಗ್ರೆಸ್ ಕೂಡ ಬೆಂಬಲ ನೀಡಿತ್ತು. ಸರಕಾರ ಈ ಮಸೂದೆಯನ್ನು ಐತಿಹಾಸಿಕ ಎಂದು ವರ್ಣಿಸಿರುವ ನಡುವೆಯೇ ಮುಸ್ಲಿಮರಲ್ಲಿನ ಒಂದು ವರ್ಗ ಇದನ್ನು ವಿರೋಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಾಸ್ ಜತೆ ಸೆ*ಕ್ಸ್ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್ಗಷ್ಟೇ ಅವಕಾಶ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.