ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಮಾದರಿಯಾದ ಜಿಲ್ಲಾಧಿಕಾರಿ
Team Udayavani, Mar 3, 2020, 9:44 PM IST
ರಾಂಚಿ: ಪ್ರತಿಷ್ಠಿತ ವ್ಯಕ್ತಿಗಳು ಹಾಗೂ ಗಣ್ಯರು ಹೈಟೆಕ್, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವುದು ಸಾಮಾನ್ಯವಾಗಿದೆ. ಆದರೆ, ಇಲ್ಲಿನ ಐಎಎಸ್ ಮಹಿಳಾ ಅಧಿಕಾರಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಮಗುವಿಗೆ ಜನ್ಮ ನೀಡಿರುವುದು ಮೆಚ್ಚುಗೆಗೆ ಪಾತ್ರವಾಗಿದೆ. ಜಾರ್ಖಂಡ್ ಗೊಡ್ಡಾ ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಕಿರಾಣ್ ಕುಮಾರ್ ಪಸಿ ಎರಡನೇ ಬಾರಿ ತುಂಬು ಗರ್ಭಿಣಿಯಾಗಿದ್ದರು. ಹೆರಿಗೆ ಸಮಯ ಸಮೀಪಿಸುತ್ತಿತ್ತು. ಯಾವ ಆಸ್ಪತ್ರೆಗೆ ದಾಖಲಾಗಬೇಕು ಎಂಬ ಚಿಂತನೆಯಲ್ಲಿದ್ದ ಅವರು ಕಡೆಗೆ ಇಲ್ಲಿನ ಗೊಡ್ಡಾ ಜಿಲ್ಲಾಸ್ಪತ್ರೆಯಲ್ಲಿ ಭಾನುವಾರ ಹೆರಿಗೆ ಮಾಡಿಸಿಕೊಂಡು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯ ಮೇಲೆ ಸಾರ್ವಜನಿಕರು ಹೆಚ್ಚಿನ ನಂಬಿಕೆ ಹಾಗೂ ಗೌರವ ಬರುವಂತೆ ಜಿಲ್ಲಾಧಿಕಾರಿ ಮಾಡಿದ್ದಾರೆ. ಇದು ಸ್ತುತ್ಯರ್ಹ ನಡೆ ಎಂದು ಮುಖ್ಯಮಂತ್ರಿ ಹೇಮಂತ್ ಸೋರೆನ್ ಸೇರಿದಂತೆ ಸಚಿವರು, ವೈದ್ಯಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮಹಿಳಾ ಅಧಿಕಾರಿಯ ನಡೆಗೆ ಸಾಮಾಜಿಕ ಜಾಲತಾಣಗಳಲ್ಲೂ ಶ್ಲಾಘನೆ ವ್ಯಕ್ತವಾಗಿದೆ.
ಕಿರಣ್ ಕುಮಾರಿ ಪಸಿ ನಾಲ್ಕು ವರ್ಷದ ಹಿಂದೆ ಉತ್ತರಪ್ರದೇಶದ ಲಕ್ನೋದ ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲು ಮಗುವಿಗೆ ಜನ್ಮ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Emotions: ಭಾವನೆಗಳ ಬಸ್ ನಿಲ್ದಾಣ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.