Tamil Nadu: ಯೂಟ್ಯೂಬ್ ನೋಡಿ ಪತ್ನಿ ಹೆರಿಗೆ ಮಾಡಿದ ಪತಿ; ರಕ್ತಸ್ರಾವವಾಗಿ ಪತ್ನಿ ಮೃತ್ಯು
Team Udayavani, Aug 24, 2023, 3:49 PM IST
ಚೆನ್ನೈ: ಪತಿಯೊಬ್ಬ ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಲು ಹೋದ ಕಾರಣ ತೀವ್ರ ರಕ್ತಸ್ರಾವವಾಗಿ ಪತ್ನಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿರುವುದು ವರದಿಯಾಗಿದೆ.
ಪೋಚಂಪಲ್ಲಿ ಸಮೀಪದ ಪುಲಿಯಂಪಟ್ಟಿ ನಿವಾಸಿ (27) ಲೋಗನಾಯಕಿ ಮೃತ ಮಹಿಳೆ.
ಲೋಗನಾಯಕಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಪತಿ ಮಾದೇಶ್ ಯೂಟ್ಯೂಬ್ ನೋಡಿಕೊಂಡು ಹೆರಿಗೆ ಮಾಡಿಸುವ ವಿಧಾನವನ್ನು ಅನುಸರಿಸಿದ್ದಾರೆ. ನೈಸರ್ಗಿಕವಾಗಿ ಹೆರಿಗೆಗೆ ಪ್ರಯತ್ನಿಸಿದ ವೇಳೆ ತೀವ್ರ ರಕ್ತಸ್ರಾವವಾಗಿ ಪತ್ನಿ ಮೃತಪಟ್ಟಿದ್ದಾರೆ.
ಕರುಳು ಬಳ್ಳಿಯನ್ನು ಸರಿಯಾಗಿ ಕತ್ತರಿಸದ ಕಾರಣ ತೀವ್ರ ರಕ್ತಸ್ರಾವ ಉಂಟಾಗಿದೆ. ಆ ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿದೆ. ಆದರೆ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.
ಈ ಕುರಿತು ಮಾದೇಶ್ ವಿರುದ್ಧ ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್‌ಸಿ) ವೈದ್ಯಾಧಿಕಾರಿ ರಥಿಕಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.