MBBS ಸೀಟ್ ಪಡೆಯಲು ವಿಫಲಳಾದ ಪತ್ನಿಯನ್ನು ಸುಟ್ಟು ಕೊಂದ!
Team Udayavani, Sep 19, 2017, 9:37 AM IST
ಹೈದರಾಬಾದ್ : ಇಲ್ಲಿ ನಡೆದ ಆಘಾತಕಾರಿ ವಿದ್ಯಮಾನವೊಂದರಲ್ಲಿ ಮೆಡಿಕಲ್ ಸೀಟ್ ಪಡೆಯಲು ವಿಫಲವಾದ ಪತ್ನಿಯನ್ನು ಬೆಂಕಿ ಹಚ್ಚಿ ಕೊಂದ ಆರೋಪದಲ್ಲಿ ಟೆಕ್ಕಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎಎನ್‌ಐ ವರದಿಯಂತೆ ಹರಿಕಾ ಎಂಬ ವಿವಾಹಿತೆ ಎಂಬಿಬಿಎಸ್ ಸೀಟ್ ಪಡೆಯಲು ವಿಫಲವಾಗಿದ್ದು ಕುಪಿತನಾದ ಪತಿ ರಿಷಿ ಕುಮಾರ್ ಆಕೆಯನ್ನು ಬೆಂಕಿ ಹಚ್ಚಿ ಸುಟ್ಟು ಅಮಾನುಷವಾಗಿ ಹತ್ಯೆಗೈದಿದ್ದಾನೆ. ಈ ಬಗ್ಗೆ ಹರಿಕಾ ಪೋಷಕರು ಎಲ್‌ಬಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
2 ವರ್ಷಗಳ ಹಿಂದೆ ಇಬ್ಬರ ವಿವಾಹವಾಗಿತ್ತು .ರಿಷಿ ನಿರಂತರವಾಗಿ ಹಿಂಸೆ ನೀಡುತ್ತಿದ್ದ ಮಾತ್ರವಲ್ಲದೆ ಹೆಚ್ಚುವರಿ ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ್ದ ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪೋಷಕರ ಸಮೇತ ರಿಷಿಯನ್ನು ವಶಕ್ಕೆ ಪಡೆದಿದ್ದಾರೆ. ನಾನು ಪತ್ನಿಯನ್ನು ಕೊಲೆಗೈದಿಲ್ಲ, ಆಕೆಯೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ರಿಷಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.