ಎಸ್‌ಪಿ ಶಾಸಕನ ಸಹಿತ 8 ಮಂದಿಯಿಂದ ಗ್ಯಾಂಗ್ ರೇಪ್: ಮಹಿಳೆ ಶವ ಪತ್ತೆ
Team Udayavani, Feb 13, 2017, 3:44 PM IST
ಸುಲ್ತಾನ್‌ಪುರ : ಸಮಾಜವಾದಿ ಪಕ್ಷದ ಶಾಸಕ ಅರಣ್ ವರ್ಮಾ ಸಹಿತ ಎಂಟು ಮಂದಿ ಕಾಮಾಂಧರು ತನ್ನ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದಾರೆ ಎಂದು ಆರೋಪಿಸಿದ್ದ 21ರ ಹರೆಯದ ಮಹಿಳೆಯ ಶವ, ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ, ಶನಿವಾರ ರಾತ್ರಿ ಪತ್ತೆಯಾಗಿದೆ.
ಈ ಮಹಿಳೆಯನ್ನು ಕುತ್ತಿಗೆ ಬಿಗಿದು ಸಾಯಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಮೊದಲು ಶಾಸಕ ಅರುಣ್ ವರ್ಮಾಗೆ ಈ ಗ್ಯಾಂಗ್ ರೇಪ್ ಪ್ರಕರಣದಿಂದ ಕ್ಲೀನ್ ಚಿಟ್ ನೀಡಿದ್ದ ಪೊಲೀಸರು ಇದೀಗ ದೂರುದಾರ ಮಹಿಳೆ ಕೊಲೆಯಾಗಿರುವ ಹಿನ್ನೆಲೆಯಲ್ಲಿ ಐಪಿಸಿ 302ರ ಪ್ರಕಾರ ಮರ್ಡರ್ ಕೇಸ್ ಬುಕ್ ಮಾಡಿದ್ದಾರೆ.
ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವಂತೆಯೇ ತನ್ನ ಮೇಲೆ ಮಾಡಲಾಗಿರುವ ಈ ಆರೋಪವು ರಾಜಕೀಯ ಷಡ್ಯಂತ್ರದ ಭಾಗವಾಗಿದೆ ಎಂದು ವರ್ಮಾ ಆರೋಪಿಸಿದ್ದಾರೆ. ಮಾತ್ರವಲ್ಲದೆ, ಈ ಕೊಲೆ ಪ್ರಕರಣದ ಬಗ್ಗೆ ಸಿಬಿಐ ತನಿಖೆಯನ್ನು ಆಗ್ರಹಿಸಿದ್ದಾರೆ.
ಸುಲ್ತಾನ್‌ಪುರದಲ್ಲಿ ಇದೇ ಫೆ.27ರಂದು ಮತದಾನ ನಡೆಯಲಿದೆ. ಮುಖ್ಯಮಂತ್ರಿ ಅಖೀಲೇಶ್ ಯಾದವ್ ಅವರು ಇದೇ ಸುಲ್ತಾನ್‌ಪುರದಲ್ಲಿ ಕಳೆದ ಜನವರಿಯಲ್ಲಿ ತನ್ನ ಚುನಾವಣಾ ಪ್ರಚಾರಾಭಿಯಾನವನ್ನು ಆರಂಭಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
MUST WATCH
ಹೊಸ ಸೇರ್ಪಡೆ
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.