ಮಹಿಳಾ ಅಧಿಕಾರಿಗಳನ್ನು ನೇಮಿಸಿ: ಬಿಜೆಪಿ
Team Udayavani, Mar 3, 2017, 10:55 AM IST
ಲಕ್ನೋ: ಉತ್ತರ ಪ್ರದೇಶದ ಸೂಕ್ಷ್ಮ ಮತಗಟ್ಟೆಗಳಲ್ಲಿ ಬುರ್ಕಾ ಧರಿಸಿ ಬರುವ ಮಹಿಳೆಯರಲ್ಲಿ ಗುರುತಿನ ಚೀಟಿ ಇದೆಯೋ ಇಲ್ಲವೋ ಎನ್ನುವುದನ್ನು ಪರಿಶೀಲಿಸಲು ಮಹಿಳಾ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ನೇಮಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
ಈ ಬಗ್ಗೆ ಉತ್ತರ ಪ್ರದೇಶ ಮುಖ್ಯ ಚುನಾವಣಾ ಆಯುಕ್ತರಿಗೆ ಪಕ್ಷ ಮನವಿ ಸಲ್ಲಿಸಿದೆ. ಆರು ಮತ್ತು ಏಳನೇ ಹಂತದ ಮತದಾನದ ವೇಳೆ ಈ ನಿಯಮ ಜಾರಿಗೆ ತರುವಂತೆ ಮನವಿ ಮಾಡಲಾಗಿದೆ. ತಪ್ಪಾಗಿ ಮತದಾನ ಮಾಡುವುದನ್ನು ತಪ್ಪಿಸಲು ಇಂಥ ಕ್ರಮ ಕೈಗೊಳ್ಳಬೇಕೆಂದು ಅದರಲ್ಲಿ ಒತ್ತಾಯಿಸಲಾಗಿದೆ. ಮತ್ತೂಂದೆಡೆ ಮಾ.4ರಂದು 49 ಕ್ಷೇತ್ರಗಳಲ್ಲಿ ನಡೆಯಲಿರುವ ಆರನೇ ಹಂತದ ಮತದಾನಕ್ಕೆ ಗುರುವಾರ ಪ್ರಚಾರ ಕಾರ್ಯಮುಕ್ತಾಯವಾಗಿದೆ. ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಲೋಕಸಭಾ ಕ್ಷೇತ್ರ ಆಜಂಗಡವೂ ಅದರಲ್ಲಿ ಸೇರಿದೆ.
ಈ ನಡುವೆ ಉತ್ತರ ಪ್ರದೇಶದ ಮಹಾರಾಜ್ ಗಂಜ್‌ನಲ್ಲಿ ಆಯೋಜಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಉತ್ತರ ಪ್ರದೇಶ ದ್ವೇಷಮಯ ರಾಜ್ಯವನ್ನಾಗಿಸಲು ಅವಕಾಶ ನೀಡುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅದೇ ರೀತಿಯ ಅಜೆಂಡಾ ಹೊಂದಿದ್ದಾರೆ ಎಂದು ದೂರಿದರು.
ಕೆಲಸ ಮಾಡದಿರುವುದೇ ಪಾಪ: ಬಲಿಯಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಯಾವುದೇ ಕೆಲಸವನ್ನು ಮಾಡದಿರುವುದೇ ಪ್ರಧಾನಿ ನರೇಂದ್ರ ಮೋದಿಯವರ ಬಲುದೊಡ್ಡ ಪಾಪ ಎಂದು ಲೇವಡಿ ಮಾಡಿದ್ದಾರೆ. ಕೆಟ್ಟ ಕೆಲಸಗಳು ದೊಡ್ಡದಾಗಿ ಸದ್ದು ಮಾಡುತ್ತವೆ ಎಂಬ ಪ್ರಧಾನಿ ಹೇಳಿಕೆ ಈ ಮೂಲಕ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.