ಮಲೆಗೆ ಸ್ತ್ರೀ ಪ್ರವೇಶ: ಉದ್ವಿಗ್ನ
Team Udayavani, Jan 3, 2019, 12:30 AM IST
ತಿರುವನಂತಪುರ/ಶಬರಿಮಲೆ: ಶಬರಿ ಮಲೆಯ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ವಿರೋಧವಿದ್ದ ಹೊರತಾಗಿಯೂ ನಲವತ್ತು ಆಸುಪಾಸು ವಯಸ್ಸಿನ ಇಬ್ಬರು ಮಹಿಳೆಯರು ಬುಧವಾರ ಬೆಳಗಿನ ಜಾವ ದೇಗುಲ ಪ್ರವೇಶ ಮಾಡಿದ್ದಾರೆ. ಬೆಳಗಿನ ಜಾವ 3.45ಕ್ಕೆ ಕನಕದುರ್ಗಾ (42) ಮತ್ತು ಬಿಂದು (42)ಎಂಬವರು ದೇಗುಲದ ಸನ್ನಿಧಾನಂ ಪ್ರವೇಶಿಸಿದ್ದಾರೆ. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಲೇ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಯುಡಿಎಫ್ನಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ರಾಜ್ಯಾದ್ಯಂತ ಪ್ರತಿಭಟನೆ ಆರಂಭವಾಗಿದೆ. ಈ ಘಟನೆ ಖಂಡಿಸಿ ಶಬರಿಮಲೆ ಕರ್ಮ ಸಮಿತಿ ಗುರುವಾರ ಬೆಳಗ್ಗೆಯಿಂದ ಸಂಜೆಯವರೆಗೆ ಹರತಾಳಕ್ಕೆ ಕರೆ ನೀಡಿದೆ. ಆದರೆ ವ್ಯಾಪಾರಿಗಳ ಒಕ್ಕೂಟ ಅದನ್ನು ಬೆಂಬಲಿಸದಿರಲು ನಿರ್ಧರಿಸಿದೆ. ತಿರುವನಂತಪುರದಲ್ಲಿ ಭಾರೀ ಪ್ರಮಾಣದಲ್ಲಿ ಪ್ರತಿಭಟನೆ ನಡೆದಿದ್ದು, ಉದ್ರಿಕ್ತರನ್ನು ಚದುರಿಸಲು ಜಲಫಿರಂಗಿ, ಅಶ್ರುವಾಯು ಪ್ರಯೋಗಿಸಲಾಗಿದೆ.
ಪೊಲೀಸರ ಭದ್ರತೆ
ಇಬ್ಬರು ಮಹಿಳೆಯರು ದೇಗುಲ ಪ್ರವೇಶಿಸಿದ್ದನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುವನಂತಪುರದಲ್ಲಿ ಖಚಿತಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಅವರು, ಮಹಿಳೆಯರು ಅಯ್ಯಪ್ಪ ದೇಗುಲ ಪ್ರವೇಶಿಸಿರುವುದು ನಿಜ. ಪೊಲೀಸರು ಅವರಿಗೆ ಭದ್ರತೆ ನೀಡಿದ್ದರು. ಅವರಿಗೆ ಯಾವುದೇ ರೀತಿಯಲ್ಲಿ ಸವಾಲು ಎದುರಾಗಲಿಲ್ಲ ಎಂದು ಹೇಳಿದ್ದಾರೆ. ಸಿಎಂ ಸುದ್ದಿಗೋಷ್ಠಿಗೂ ಮೊದಲೇ ಮಲಯಾಳ ಸುದ್ದಿವಾಹಿನಿಗಳು ಈ ಸುದ್ದಿ ಪ್ರಸಾರ ಮಾಡಿದ್ದವು. ಬಿಜೆಪಿ, ಆರ್‌ಎಸ್‌ಎಸ್, ಕಾಂಗ್ರೆಸ್ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸಭೆಯತ್ತ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ನುಗ್ಗಲು ಪ್ರಯತ್ನಿಸಿದರು. ಕಣ್ಣೂರಿನಲ್ಲಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ.
ಇಬ್ಬರು ಮಹಿಳೆಯರ ಭೇಟಿ
ಕಳೆದ ವರ್ಷದ ಸೆ.28ರಂದು ಸುಪ್ರೀಂ ಕೋರ್ಟ್ ಎಲ್ಲ ವಯೋಮಿತಿಯ ಮಹಿಳೆಯರು ದೇಗುಲ ಪ್ರವೇಶ ಮಾಡಬಹುದು ಎಂದು ತೀರ್ಪು ನೀಡಿದ ಬಳಿಕ ಹಲವು ಬಾರಿ ಮಹಿಳೆಯರು ಪ್ರವೇಶಕ್ಕೆ ಯತ್ನಿಸಿದ್ದರೂ ತೀವ್ರ ಪ್ರತಿಭಟನೆಯಿಂದಾಗಿ ಅದು ಕೈಗೂಡಿರಲಿಲ್ಲ. ಆದರೆ ಕನಕದುರ್ಗಾ ಮತ್ತು ಬಿಂದು ಅವರು ಮಂಗಳವಾರ ತಡರಾತ್ರಿ 1 ಗಂಟೆಯ ಸುಮಾರಿಗೆ ಪಂಪಾ ನದಿ ತೀರದಿಂದ ನಡೆದುಕೊಂಡು ಯಾತ್ರೆ ಆರಂಭಿಸಿದ್ದರು. ಇಬ್ಬರು ಮಹಿಳೆಯರು ಕಪ್ಪು ವಸ್ತ್ರ ಧರಿಸಿ ಮುಖ ಮುಚ್ಚಿಕೊಂಡಿದ್ದರು. ಇಬ್ಬರೂ ಅಯ್ಯಪ್ಪನ ದರ್ಶನ ಪಡೆದು 3.48ರ ಸುಮಾರಿಗೆ ವಾಪಸಾಗಿದ್ದಾರೆ.
ಆಕ್ರೋಶ, ಪ್ರತಿಭಟನೆ
ಮುಖ್ಯಮಂತ್ರಿ ಅಧಿಕೃತವಾಗಿ ಪ್ರಕಟಿಸಿದ ಬಳಿಕ ಮತ್ತು ಸುದ್ದಿ ವಾಹಿನಿಗಳಲ್ಲಿ ಈ ವಿಚಾರ ಪ್ರಸಾರವಾದ ಬಳಿಕ ಕೇರಳದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಯಿತು. ತಿರುವನಂತಪುರದಲ್ಲಿರುವ ಕೇರಳ ಸಚಿವಾಲಯದ ಮುಂದೆ ಭಾರೀ ಪ್ರತಿಭಟನೆ ನಡೆದಿದೆ. ಉದ್ರಿಕ್ತರನ್ನು ತಡೆಯಲು ಪೊಲೀಸರು ಜಲಫಿರಂಗಿ, ಅಶ್ರುವಾಯು, ಭಾರೀ ಪ್ರಮಾಣದಲ್ಲಿ ಶಬ್ದ ಹೊರಸೂಸಿ ಗುಂಪನ್ನು ಚದುರಿಸುವ ಸ್ಟನ್ ಗ್ರೆನೇಡ್ ಅನ್ನು ಬಳಕೆ ಮಾಡಲಾಗಿದೆ. ಈ ಘಟನೆಯ ಬಳಿಕ ಕೇರಳ ರಾಜಧಾನಿಯಲ್ಲಿ ಬಿಗುವಿನ ಪರಿಸ್ಥಿತಿ ಇದೆ.
ಶಬರಿಮಲೆ ವಿಚಾರ ನಮ್ಮ ವ್ಯಾಪ್ತಿಗೆ ಬರಲ್ಲ, ಕೇರಳ ಸರಕಾರ ಅದರ ಬಗ್ಗೆ ಕ್ರಮ ಕೈಗೊಳ್ಳಲಿದೆ. ನಮ್ಮ ರಾಜ್ಯದ ಭಕ್ತರಿಗೆ ತೊಂದರೆಯಾದರೆ ಅವರ ರಕ್ಷಣೆಗೆ ಸರಕಾರ ಬದ್ಧ.
– ಎಂ.ಬಿ.ಪಾಟೀಲ್, ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.