Reservation ನೂತನ ಸಂಸತ್ ಭವನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ
Team Udayavani, Sep 19, 2023, 3:45 PM IST
ನವದೆಹಲಿ: ನೂತನ ಸಂಸತ್ ಭವನದಲ್ಲಿ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಗಳವಾರ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದರು.
ಇಂದು ನೂತನ ಸಂಸತ್ ಭವನದಲ್ಲಿ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಅವರು ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದರು.
ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆ ಮತ್ತು ರಾಜ್ಯ ಶಾಸಕಾಂಗಗಳಲ್ಲಿ ಮಹಿಳೆಯರಿಗೆ 33% ಕೋಟಾವನ್ನು ಒದಗಿಸಲು ಪ್ರಯತ್ನಿಸುತ್ತದೆ. ಮಸೂದೆ ಕಾನೂನಾಗಿ ರೂಪುಗೊಂಡರೆ ಮಹಿಳಾ ಸಂಸದರ ಸಂಖ್ಯೆ 82ರಿಂದ 181ಕ್ಕೆ ಏರಲಿದೆ ಎಂದರು.
ಗದ್ದಲದ ನಡುವೆ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಾಯಿತು.
#WATCH | In the Lok Sabha of the new Parliament building, Union Law Minister Arjun Ram Meghwal tables the Women’s Reservation Bill in Lok Sabha. pic.twitter.com/cRQMhbDdzI
— ANI (@ANI) September 19, 2023
ಇದಕ್ಕೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಬದ್ಧತೆ ಮತ್ತು ದೇಶದ ಮಹಿಳೆಯರ ಜನಸಂಖ್ಯೆಗೆ ಅರ್ಹತೆಯನ್ನು ನೀಡುವ ಸಂಕಲ್ಪವನ್ನು ಕುರಿತು ಮಾತನಾಡಿದರು.
ದೇಶದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಹೆಚ್ಚು ಹೆಚ್ಚು ಮಹಿಳೆಯರು ಸೇರಬೇಕೆಂದು ನಾವು ಬಯಸುತ್ತೇವೆ. ದೇಶದಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿ ಪ್ರಕ್ರಿಯೆಯನ್ನು ಜಗತ್ತು ಗುರುತಿಸಿದೆ. ಇದು ಕ್ರೀಡೆಯಿಂದ ಸ್ಟಾರ್ಟ್‌ಅಪ್‌ಗಳವರೆಗೆ ಜೀವನದ ವಿವಿಧ ಆಯಾಮಗಳಲ್ಲಿ ಭಾರತೀಯ ಮಹಿಳೆಯರು ನೀಡಿದ ಕೊಡುಗೆಗಳಿಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮಹಿಳಾ ನೇತೃತ್ವದ ಅಭಿವೃದ್ಧಿಯ ಸಂಕಲ್ಪವನ್ನು ಬಲಪಡಿಸಲು ತಮ್ಮ ಸರ್ಕಾರ “ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತರುತ್ತಿದೆ” ಎಂದು ಹೇಳಿದರು.
“ನಾರಿ ಶಕ್ತಿ ವಂದನ್ ಅಧಿನಿಯಮ್’ ನಮ್ಮ ಪ್ರಜಾಪ್ರಭುತ್ವವನ್ನು ಮತ್ತಷ್ಟು ಸಶಕ್ತಗೊಳಿಸುತ್ತದೆ” ಎಂದು ಹೇಳಿದರು
“ಈ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸುವಂತೆ ನಾನು ಉಭಯ ಸದನಗಳ ಎಲ್ಲಾ ಸದಸ್ಯರನ್ನು ಕೋರುತ್ತೇನೆ” ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.