ಧರ್ಮವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ;ರಾಹುಲ್ ಗಾಂಧಿ
Team Udayavani, Dec 1, 2017, 3:22 PM IST
ಅಹಮದಾಬಾದ್: ಸೋಮನಾಥ ದೇವಾಲಯದಲ್ಲಿ ಹಿಂದೂಯೇತರ ರಿಜಿಸ್ಟ್ರಿ’ ಪುಸ್ತಕದಲ್ಲಿ ಸಹಿ ಮಾಡಿದ ಕುರಿತಾದ ವಿವಾದದ ಕುರಿತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರತಿಕ್ರಿಯೆ ನೀಡಿದ್ದು ‘ನಾನು ಧರ್ಮವನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಇಚ್ಛಿಸುವುದಿಲ್ಲ’ ಎಂದಿದ್ದಾರೆ
ಶುಕ್ರವಾರ ಅಮ್ರೇಲಿಯಲ್ಲಿ ವ್ಯಾಪಾರಿಗಳೊಂದಿಗೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ‘ನನ್ನ ಅಜ್ಜಿ (ದಿ.ಇಂದಿರಾ ಗಾಂಧಿ )ಮತ್ತು ನನ್ನ ಕುಟುಂಬದವರು ಶಿವ ಭಕ್ತರಾಗಿದ್ದರು. ಆದರೆ ನಾವು ಆ ವಿಚಾರಗಳನ್ನು ಖಾಸಗಿಯಾಗಿಟ್ಟುಕೊಂಡಿದ್ದೆವು. ಇದು ತೀರಾ ವೈಯ್ಯಕ್ತಿಕ ವಿಚಾರವಾಗಿದ್ದು,ಇದಕ್ಕೆ ಬೇರೆ ಯಾವುದೇ ವ್ಯಕ್ತಿಯ ಪ್ರಮಾಣ ಪತ್ರದ ಅಗತ್ಯವಿಲ್ಲ. ಈ ವಿಚಾರವನ್ನು ನಾನು ವ್ಯಾಪರಕ್ಕೆ ಬಳಸಿಕೊಳ್ಳಲು ಇಷ್ಟಪಡುವುದಿಲ್ಲ. ಈ ವಿಚಾರವನ್ನು ದಲ್ಲಾಳಿ ಮಾಡಿಕೊಳ್ಳುವುದಿಲ್ಲ. ರಾಜಕೀಯ ಲಾಭಕ್ಕೂ ಬಳಸಿಕೊಳ್ಳುವುದಿಲ್ಲ’ ಎಂದರು.
ಗುರುವಾರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಹುಲ್ ‘ನಾನು ದೇವಸ್ಥಾನಕ್ಕೆ ತೆರಳಿ ಸಹಿ ಮಾಡಿದ್ದೆ. ಅದಾದ ಬಳಿಕ ಬಿಜೆಪಿ ಬೆಂಬಲಿಗರು ತೆರಳಿ ಇನ್ನೊಂದು ಪುಸ್ತಕದಲ್ಲಿ ನನ್ನ ಸಹಿ ಮಾಡಿದರು’ ಎಂದು ಆರೋಪಿಸಿದ್ದರು.
ರಾಹುಲ್ ಗಾಂಧಿ ಹೆಸರು “ಹಿಂದೂಯೇತರರ’ ರಿಜಿಸ್ಟ್ರಿಯಲ್ಲಿ ನಮೂದಾಗಿರುವು ದಕ್ಕೆ ಬಿಜೆಪಿ ವ್ಯಂಗ್ಯ ವಾಡಿದ ಬೆನ್ನಲ್ಲೇ ಕಾಂಗ್ರೆಸ್ ಪ್ರಧಾನಿ ಮೋದಿ ಅವರ ಧರ್ಮದ ವಿಚಾರವನ್ನೆತ್ತಿದೆ. ಇದೀಗ ಹೊಸ ವಿವಾದಸೃಷ್ಟಿಸಿದ್ದು, ಎರಡೂ ರಾಜಕೀಯ ಪಕ್ಷಗಳ ನಡುವೆವಾಗ್ಯುದ್ಧಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.