ವಿಶ್ವ ವಿದ್ಯಾರ್ಥಿಗಳ ದಿನ; ಇಂದು ಮಿಸೈಲ್ ಮ್ಯಾನ್ ಡಾ.ಎಪಿಜೆ ಅಬ್ದುಲ್ ಕಲಾಂ ಹುಟ್ಟು ಹಬ್ಬ
Team Udayavani, Oct 15, 2019, 10:26 AM IST
ನವದೆಹಲಿ: ಪ್ರತಿ ವರ್ಷ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವನ್ನಾಗಿ ಆಚರಿಸಲಾಗುತ್ತಿದೆ. 2010ರಲ್ಲಿ ಅಕ್ಟೋಬರ್ 15 ವಿಶ್ವ ವಿದ್ಯಾರ್ಥಿಗಳ ದಿನ ಎಂದು ವಿಶ್ವಸಂಸ್ಥೆ ಘೋಷಿಸಿತ್ತು.
ಖ್ಯಾತ ವಿಜ್ಞಾನಿ, ಮಾಜಿ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿರುವ ಡಾ.ಎಪಿಜೆ ಅಬ್ದುಲ್ ಕಲಾಂ ಅವರು ಶಿಕ್ಷಕರಾಗಿ ಸಲ್ಲಿಸಿದ್ದ ಸೇವೆಯನ್ನು ಸ್ಮರಿಸದಿದ್ದರೆ ಅವರ ಕೊಡುಗೆ ಬಗ್ಗೆ ಸಂಪೂರ್ಣವಾಗಿ ಹೇಳಿದಂತೆ ಆಗುವುದಿಲ್ಲ. ಹೀಗಾಗಿ ಡಾ.ಕಲಾಂ ಅವರು ಶಿಕ್ಷಕರಾಗಿ ತುಂಬಾ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದರು ಮತ್ತು ತಮ್ಮನ್ನು ಅವರು ಮೊದಲು ಶಿಕ್ಷಕ ಎಂದೇ ಗುರುತಿಸಿಕೊಳ್ಳಲು ಇಷ್ಟಪಡುತ್ತಿದ್ದರು. ಉಳಿದಿದ್ದೆಲ್ಲವೂ ಅವರಿಗೆ ಎರಡನೇ ಆದ್ಯತೆಯಾಗಿತ್ತು ಎಂದು ವರದಿ ವಿವರಿಸಿದೆ.
ಅವುಲ್ ಪಕೀರ್ ಜೈನುಲಬ್ದದೀನ್ ಅಬ್ದುಲ್ ಕಲಾಂ ಅವರು 1931 ಅಕ್ಟೋಬರ್ 15ರಂದು ತಮಿಳುನಾಡಿನ ರಾಮೇಶ್ವರಂನಲ್ಲಿ ಜನಿಸಿದ್ದರು. 2007ರಲ್ಲಿ ಭಾರತದ 11ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ವಿಜ್ಞಾನಿಯಾಗಿ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದ ಡಾ.ಕಲಾಂ ಅವರು ಶಿಲ್ಲಾಂಗ್ ನಲ್ಲಿ 2015ರ ಜುಲೈ 27ರಂದು ವಿಧಿವಶರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.