ಉಗ್ರರು ಉ.ಪ್ರ.ಕ್ಕೆ ಕಾಲಿಟ್ಟಿದ್ದರೆ ಕೊಂದು ಬಿಡುತ್ತಿದ್ದೆವು: ಯೋಗಿ
Team Udayavani, Jan 25, 2019, 6:45 AM IST
ಮುಂಬಯಿ : ಪ್ರಯಾಗ್‌ರಾಜ್ ನಲ್ಲೀಗ ನಡೆಯುತ್ತಿರುವ ಕುಂಭಮೇಳದಲ್ಲಿ ರಾಸಾಯನಿಕ ದಾಳಿ ನಡೆಸುವ ಮೂಲಕ ಸಹಸ್ರಾರು ಅಮಾಯಕರನ್ನು ಕೊಲ್ಲುವ ಸಂಚು ನಡೆಸಿ ಮಹಾರಾಷ್ಟ್ರ ಎಟಿಎಸ್ ನಿಂದ ಬಂಧಿತರಾಗಿರುವ ‘ಐಸಿಸ್ ನಂಟಿನ 9 ಶಂಕಿತ ಉಗ್ರರು ಒಂದೊಮ್ಮೆ ಉತ್ತರ ಪ್ರದೇಶವನ್ನು ಪ್ರವೇಶಿಸಿದ್ದರೆ ಅವರನ್ನು ನಾವು ಕೊಂದು ಮುಗಿಸುತ್ತಿದ್ದೆವು’ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಸಮೂಹ ನಾಶದ ರಾಸಾಯನಿಕ ದಾಳಿ ಮಾಡುವ ಸಂಚು ಹೊಂದಿದ್ದ ಐಸಿಸ್ ನಂಟಿನ 9 ಶಂಕಿತರನ್ನು ಬಂಧಿಸಿರುವ ಮಹಾರಾಷ್ಟ್ರ ಎಟಿಎಸ್ ಮತ್ತು ಸರಕಾರವನ್ನು ಸಿಎಂ ಯೋಗಿ ಅಭಿನಂದಿಸಿದರು.
ಮುಂಬಯಿಯಲ್ಲಿ ನಡೆದಿದ್ದ ಉ.ಪ್ರ ಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಯೋಗಿ ಅವರು “ಉಗ್ರರ ಮೂಲೋತ್ಪಾಟನೆಯೇ ನನ್ನ ಸರಕಾರದ ಗುರಿ; ಅದರಲ್ಲಿ ಯಾವುದೇ ರಾಜಿ ಇಲ್ಲ. ಉಗ್ರ ನಿಗ್ರಹವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ” ಎಂದು ಹೇಳಿದರು.
ಸ್ಥಳೀಯ ಬಿಜೆಪಿ ನಾಯಕರೋರ್ವರು ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಉ.ಪ್ರ. ರಾಜ್ಯಪಾಲ ರಾಮ ನಾಯಕ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.